ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮೇ 2ಕ್ಕೆ ಶೃಂಗೇರಿ ಮರು ಮತಎಣಿಕೆ : ರಾಜೇಗೌಡ vs ಜೀವರಾಜ್ ನಡುವಿನ ರೋಚಕ ಕದನಕ್ಕೆ ಮತ್ತೆ ವೇದಿಕೆ ಸಿದ್ಧ

PPeepal Media Desk

Peepal Media Desk ರಾಜಕೀಯ, ರಾಜ್ಯ

• 1 ನಿಮಿಷದ ಓದು

ಮೇ 2ಕ್ಕೆ ಶೃಂಗೇರಿ ಮರು ಮತಎಣಿಕೆ : ರಾಜೇಗೌಡ vs ಜೀವರಾಜ್ ನಡುವಿನ ರೋಚಕ ಕದನಕ್ಕೆ ಮತ್ತೆ ವೇದಿಕೆ ಸಿದ್ಧ

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ರಾಜಕೀಯ ವಲಯದಲ್ಲಿ ಮತ್ತೊಮ್ಮೆ ಕುತೂಹಲದ ಕಿಡಿ ಹೊತ್ತಿಕೊಂಡಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 201 ಮತಗಳ ಅಂತರದಿಂದ ಜಯಗಳಿಸಿದ್ದ ಕಾಂಗ್ರೆಸ್‌ನ ಹಾಲಿ ಶಾಸಕ ಟಿ.ಡಿ. ರಾಜೇಗೌಡ ಹಾಗೂ ಸೋಲು ಅನುಭವಿಸಿದ್ದ ಬಿಜೆಪಿಯ ಮಾಜಿ ಶಾಸಕ ಡಿ.ಎನ್. ಜೀವರಾಜ್ ನಡುವಿನ ಹೋರಾಟ ಮತ್ತೆ ಕಾವು ಪಡೆದುಕೊಂಡಿದೆ.

ಕೋರ್ಟ್ ಆದೇಶದಿಂದ ಹೊಸ ಅಧ್ಯಾಯ
ಚುನಾವಣೆ ನಡೆದು ಮೂರು ವರ್ಷಗಳು ಕಳೆದರೂ ಈ ಕ್ಷೇತ್ರದ ರಾಜಕೀಯ ಫಲಿತಾಂಶ ಇನ್ನೂ ಅಂತಿಮವಾಗಿಲ್ಲ. 2023ರ ಚುನಾವಣೆಯಲ್ಲಿ ಒಟ್ಟು 1,811 ಅಂಚೆ ಮತಗಳ ಪೈಕಿ 279 ಮತಗಳನ್ನು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದರು. ಇದನ್ನು ಪ್ರಶ್ನಿಸಿ ಜೀವರಾಜ್ ಅವರು ಕರ್ನಾಟಕ ಹೈಕೋರ್ಟ್‌ನ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್, ತಿರಸ್ಕೃತ 279 ಅಂಚೆ ಮತಗಳನ್ನು ಮರು ಪರಿಶೀಲಿಸುವಂತೆ ಚುನಾವಣಾ ಅಧಿಕಾರಿಗಳಿಗೆ ಆದೇಶ ಹೊರಡಿಸಿದೆ.

ಅಷ್ಟೇ ಅಲ್ಲ, ಆ ಪರಿಶೀಲನೆಯಲ್ಲಿ ಹೆಚ್ಚಿನ ಲೋಪ ಕಂಡುಬಂದಲ್ಲಿ ಎಲ್ಲಾ 1,811 ಅಂಚೆ ಮತಗಳ ಸಂಪೂರ್ಣ ಮರು ಎಣಿಕೆ ನಡೆಸಿ ಹೊಸ ಫಲಿತಾಂಶ ಪ್ರಕಟಿಸುವಂತೆಯೂ ಕೋರ್ಟ್ ನಿರ್ದೇಶನ ನೀಡಿದೆ.

ಮೇ 2ರಂದು ನಿರ್ಣಾಯಕ ಮರುಎಣಿಕೆ
ಕೋರ್ಟ್ ಆದೇಶದಂತೆ ಮೇ 2, 2026ರಂದು ಬೆಳಿಗ್ಗೆ 9 ಗಂಟೆಗೆ ಚಿಕ್ಕಮಗಳೂರಿನ IDSG ಕಾಲೇಜಿನಲ್ಲಿ ಅಂಚೆ ಮತಗಳ ಮರು ಎಣಿಕೆ ಆರಂಭಗೊಳ್ಳಲಿದೆ. ಈ ಎಣಿಕೆಯ ಮೇಲೆ ರಾಜ್ಯ ರಾಜಕೀಯ ವಲಯದ ಚಿತ್ತ ನೆಟ್ಟಿದೆ.

ರಾಜೇಗೌಡರ ಮುಂದೆ ಮೇಲ್ಮನವಿಯ ಆಯ್ಕೆ
ಮೇ 2ರ ಒಳಗೆ ಸಮಯಾವಕಾಶ ಇರುವ ಕಾರಣ, ರಾಜೇಗೌಡರು ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿ ಮರುಎಣಿಕೆಗೆ ತಡೆ ತರಲು ಅವಕಾಶ ಇದೆ. ಆದರೆ ಗೆಲುವಿನ ಬಗ್ಗೆ ದೃಢ ವಿಶ್ವಾಸ ಹೊಂದಿರುವ ಅವರು ಮೇಲ್ಮನವಿ ಸಲ್ಲಿಸದೆ ಮರುಎಣಿಕೆಗೆ ಅವಕಾಶ ನೀಡಬಹುದು ಎಂದೂ ರಾಜಕೀಯ ವಲಯ ಚರ್ಚಿಸುತ್ತಿದೆ.

ರಾಜಕೀಯ ಲೆಕ್ಕಾಚಾರ ಏನು ಹೇಳುತ್ತದೆ?
ತಿರಸ್ಕೃತ 279 ಮತಗಳು ಮೂರು ಅಭ್ಯರ್ಥಿಗಳ ನಡುವೆ ಹಂಚಿಹೋಗಿರುವ ಸಂಭಾವ್ಯತೆ ಇರುವ ಕಾರಣ, ಅದರಲ್ಲಿ ಜೀವರಾಜ್ ಅವರಿಗೆ 201ಕ್ಕಿಂತ ಹೆಚ್ಚಿನ ನಿವ್ವಳ ಮತ ದೊರೆತು ಫಲಿತಾಂಶ ತಲೆಕೆಳಗಾಗುವುದು ಗಣಿತೀಯವಾಗಿ ಕಷ್ಟಕರ ಎಂದು ಕಾಂಗ್ರೆಸ್ ಮುಖಂಡರು ಮತ್ತು ರಾಜೇಗೌಡ ಅಭಿಮಾನಿಗಳು ವಾದಿಸುತ್ತಿದ್ದಾರೆ.

ಆದರೆ ಜೀವರಾಜ್ ಬೆಂಬಲಿಗರು ಮಾತ್ರ ಅಂಚೆ ಮತ ಎಣಿಕೆಯಲ್ಲಿ ಆಗಿರುವ ಲೋಪ ಬೆಳಕಿಗೆ ಬರಲಿದೆ, ಆ ಮೂಲಕ ಜೀವರಾಜ್ ಮತ್ತೊಮ್ಮೆ ಶಾಸಕ ಸ್ಥಾನದಲ್ಲಿ ಕೂರಲಿದ್ದಾರೆ ಎಂಬ ನಿರೀಕ್ಷೆಯಲ್ಲಿದ್ದಾರೆ.

ಹಿನ್ನೆಲೆ
ಶೃಂಗೇರಿ ಕ್ಷೇತ್ರದಲ್ಲಿ ಡಿ.ಎನ್. ಜೀವರಾಜ್ ಅವರು ಬಿಜೆಪಿ ಅಭ್ಯರ್ಥಿಯಾಗಿ ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2023ರಲ್ಲಿ ಟಿ.ಡಿ. ರಾಜೇಗೌಡ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಎರಡನೇ ಬಾರಿ ಗೆದ್ದು ಶಾಸಕರಾಗಿ ಅಧಿಕಾರ ನಡೆಸುತ್ತಿದ್ದಾರೆ.

ಮೇ 2ರಂದು ನಡೆಯಲಿರುವ ಮರು ಎಣಿಕೆ ಈ ಕ್ಷೇತ್ರದ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದ್ದು, ರಾಜ್ಯದ ರಾಜಕೀಯ ವಲಯ ಮತ್ತೊಮ್ಮೆ ಶೃಂಗೇರಿ ಕ್ಷೇತ್ರದತ್ತ ದೃಷ್ಟಿ ನೆಟ್ಟಿದೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು