ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಇಂದಿನಿಂದ ರಾಜ್ಯ ಬಜೆಟ್ ಮೊದಲ ಅಧಿವೇಶನ ; ವಿಪಕ್ಷಗಳಿಗೆ ಅಸ್ತ್ರವಾಗುವ ‘ಗ್ಯಾರಂಟಿ’ ಅಂಶಗಳು

PPeepal Media Desk

Peepal Media Desk ರಾಜಕೀಯ

• 1 ನಿಮಿಷದ ಓದು

ಇಂದಿನಿಂದ ರಾಜ್ಯ ಬಜೆಟ್ ಮೊದಲ ಅಧಿವೇಶನ ; ವಿಪಕ್ಷಗಳಿಗೆ ಅಸ್ತ್ರವಾಗುವ ‘ಗ್ಯಾರಂಟಿ’ ಅಂಶಗಳು

ಇಂದಿನಿಂದ (ಜುಲೈ 3) ವಿಧಾನಸಭೆಯ ಮೊದಲ ಬಜೆಟ್ ಅಧಿವೇಶನ ನಡೆಯಲಿದ್ದು, ಹೊಸ ಸರ್ಕಾರದ ಮೊದಲ ಜಂಟಿ ಅಧಿವೇಶನ ಇದಾಗಿದೆ. ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಜಂಟಿ ಅಧಿವೇಶನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಮ್ಮ ಭಾಷಣದ ಮೂಲಕ ಚಾಲನೆ ನೀಡಲಿದ್ದಾರೆ.

ಇಂದಿನಿಂದ 10 ದಿನಗಳ ಕಾಲ ನಡೆಯಲಿರುವ ಬಜೆಟ್ ಅಧಿವೇಶನದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಜಟಾಪಟಿಯ ಕಲರವ ಕೇಳಿ ಬರಲಿದೆ. ಬಹು ಮುಖ್ಯವಾಗಿ ಬಿಜೆಪಿ ಪಕ್ಷದ ವಿರೋಧ ಪಕ್ಷದ ನಾಯಕರ ಘೋಷಣೆ ಇಂದು ಆಗಲಿದ್ದು, ಬಿಜೆಪಿ ಪಕ್ಷ ತನ್ನ ಹೊಸ ಶಾಸಕಾಂಗದ ನಾಯಕನನ್ನು ಎದಿರು ನೋಡಲಿದೆ‌.

ನಿರೀಕ್ಷೆಯಂತೆ ವಿಪಕ್ಷಗಳಿಗೆ ಕಾಂಗ್ರೆಸ್ ಪಕ್ಷದ ‘ಗ್ಯಾರಂಟಿ ಅಂಶಗಳು’ ವಿರೋಧದ ಅಸ್ತ್ರವಾಗುವ ಸಾಧ್ಯತೆ ಇದೆ. ಇದನ್ನೇ ಅಸ್ತ್ರವಾಗಿಸಿಕೊಂಡು ಕಾಂಗ್ರೆಸ್ ಸರ್ಕಾರ ವಿರುದ್ಧ ಮುಗಿಬೀಳಲು ಬಿಜೆಪಿ ಮತ್ತು ಜೆಡಿಎಸ್ ಶಾಸಕರು ನಿರ್ಧಾರ ಮಾಡಿದ್ದಾರೆ. ಸದನದ ಒಳಗಡೆ ಮತ್ತು ಹೊರಗಡೆ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲು ಎರಡೂ ವಿರೋಧ ಪಕ್ಷಗಳ ನಾಯಕರು ಪ್ಲ್ಯಾನ್ ಮಾಡಿದ್ದಾರೆ.

ಒಂದು ಕಡೆ ಕೇಂದ್ರ ಬಿಜೆಪಿ ಸರ್ಕಾರ ‘ಅನ್ನಭಾಗ್ಯ ಯೋಜನೆ’ಯ ಅಕ್ಕಿ ವಿತರಣೆಗೆ ಹಿಂದೇಟು ಹಾಕಿದ್ದನ್ನು ಕಾಂಗ್ರೆಸ್ ಪಕ್ಷ ಅಸ್ತ್ರ ಮಾಡಿಕೊಂಡರೆ, ಬಿಜೆಪಿ ಪಕ್ಷ ಕೇಂದ್ರದ ಅನುಮತಿ ಪಡೆದು ಗ್ಯಾರಂಟಿ ಘೋಷಣೆ ಮಾಡಿದ್ದೀರಾ ಎಂಬಂತಹ ಪ್ರಶ್ನೆಗೆ ಮುಂದಾಗಲಿದೆ. ಮುಖ್ಯವಾಗಿ ಹತ್ತು ಕೆಜಿ ಅಕ್ಕಿಗೆ ಹಣ ಕೊಡಬೇಕು. ಕೆಜಿಗೆ 34 ರೂಪಾಯಿ ನೀಡೋದಲ್ಲ, ಮಾರ್ಕೆಟ್ ದರ ಕೆಜಿಗೆ 60 ರೂಪಾಯಿ ಇದೆ. ಅಷ್ಟೇ ಕೊಡಬೇಕು ಎಂದು ಆಗ್ರಹಿಸುವ ಸಾಧ್ಯತೆ ಇದೆ. ಆ ಮೂಲಕ ಸದನದ ಒಳಗೆ ಹಾಗೂ ಹೊರಗೆ ಸರ್ಕಾರವನ್ನ ಕಟ್ಟಿಹಾಕಲು ಬಿಜೆಪಿ ನಾಯಕರು ತಯಾರಿ ಮಾಡಿಕೊಂಡಿದ್ದಾರೆ.

ಇನ್ನು ಮತ್ತೊಂದು ವಿರೋಧ ಪಕ್ಷ ಜೆಡಿಎಸ್ ಕೂಡಾ ಸರ್ಕಾರದ ಗ್ಯಾರಂಟಿ ಗೊಂದಲ, ಗ್ಯಾರಂಟಿಗಳಿಂದ ರಾಜ್ಯಕ್ಕೆ ಆಗುವ ನಷ್ಟ, ಗ್ಯಾರಂಟಿಗಳಿಂದ ಜನರು ಮುಂದೆ ಎದುರಿಸಬೇಕಾದ ತೊಂದರೆಯನ್ನು ರಾಜ್ಯದ ಜನತೆಗೆ ಸದನದ ಮೂಲಕ ತಿಳಿಸಲು ತಯಾರಿ ಮಾಡಿಕೊಂಡಿದೆ.

ಒಟ್ಟಾರೆ ಇಂದಿನಿಂದ ನಡೆಯುವ ರಾಜ್ಯ ಬಜೆಟ್ ಅಧಿವೇಶನ ಹಲವಷ್ಟು ವಿಶೇಷತೆಗಳಿಂದ ಕೂಡಿದ್ದು, ಗ್ಯಾರಂಟಿ ಅಂಶಗಳೇ ಈ ಬಜೆಟ್ ನ ಪ್ರಮುಖ ಆಕರ್ಷಣೆ ಆಗುವುದರಲ್ಲಿ ಅನುಮಾನವಿಲ್ಲ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು