ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬರ ಪರಿಹಾರ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲ: ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪ

PPeepal Media Desk

Peepal Media Desk ರಾಜಕೀಯ

• 2 ನಿಮಿಷದ ಓದು

ಬರ ಪರಿಹಾರ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲ: ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪ

ಬೆಂಗಳೂರು : ರಾಜ್ಯದ ಹಲವು ಭಾಗಗಳಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದು, ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಸೂಕ್ತ ಪರಿಹಾರ ಒದಗಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ.

ರಾಜ್ಯಕ್ಕೆ ಆಗಮಿಸಿರುವ ಕೇಂದ್ರದ ಬರ ಅಧ್ಯಯನ ತಂಡವನ್ನು ಬೆಂಗಳೂರಿನ ಕುಮಾರಕೃಪ ಅತಿಥಿಗೃಹದಲ್ಲಿ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರೊಂದಿಗೆ ಭೇಟಿಯಾದ ಆರ್.ಅಶೋಕ, ಬರದಿಂದ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ತಂಡಕ್ಕೆ ಮಾಹಿತಿ ನೀಡಿದ್ದಾರೆ.

ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಜ್ಯದ ವಾಸ್ತವ ಸ್ಥಿತಿಯನ್ನು ಕೇಂದ್ರ ಸರ್ಕಾರಕ್ಕೆ ಸಮಗ್ರವಾಗಿ ವರದಿ ಮಾಡಿ, ಹೆಚ್ಚಿನ ಪ್ರಮಾಣದ ಪರಿಹಾರ ಬಿಡುಗಡೆಗೆ ಶಿಫಾರಸು ಮಾಡುವಂತೆ ಮನವಿ ಮಾಡಿರುವುದಾಗಿ ಅವರು ಬಳಿಕ ಸುದ್ದಿಗಾರರಿಗೆ ತಿಳಿಸಿದರು.

ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆ ಕೊರತೆಯಿಂದ ಬೆಳೆ ಹಾನಿಯಾಗಿದ್ದು, ಕೆಲವು ಕಡೆ ಕುಡಿಯುವ ನೀರಿನ ಸಮಸ್ಯೆಯೂ ತಲೆದೋರಿದೆ. ಬರದ ಸಂಕಷ್ಟದಿಂದ ರೈತರು ತೀವ್ರ ಆರ್ಥಿಕ ಒತ್ತಡಕ್ಕೆ ಒಳಗಾಗಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಪರಿಣಾಮಕಾರಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕಿತ್ತು ಎಂದು ಅಶೋಕ ಹೇಳಿದರು.

‘ಎಕರೆಗೆ ₹25 ಸಾವಿರ ಪರಿಹಾರ ನೀಡಲಿ’

ರೈತರ ಸಂಕಷ್ಟಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ಒಂದು ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕೆಂದು ಬಿಜೆಪಿ ಒತ್ತಾಯಿಸಿದೆ. ಆದರೆ ರಾಜ್ಯ ಸರ್ಕಾರ ಘೋಷಿಸಿರುವ ಪರಿಹಾರವೂ ಸಮರ್ಪಕವಾಗಿ ರೈತರಿಗೆ ತಲುಪುತ್ತಿಲ್ಲ ಎಂದು ಅವರು ದೂರಿದರು.

ಪ್ರತಿ ಕುಟುಂಬಕ್ಕೆ ₹2,500 ಪರಿಹಾರ ನೀಡುವ ಭರವಸೆ ನೀಡಲಾಗಿದ್ದರೂ ಅದರ ಅನುಷ್ಠಾನದಲ್ಲೂ ವಿಳಂಬವಾಗಿದೆ. ಹಿಂದೆ ಪ್ರತಿ ತಾಲೂಕಿಗೆ ₹1 ಕೋಟಿ ಬಿಡುಗಡೆ ಮಾಡುವುದಾಗಿ ಹೇಳಿದ್ದ ಸರ್ಕಾರ ಅದನ್ನೂ ಸಮರ್ಪಕವಾಗಿ ನೀಡಿಲ್ಲ ಎಂದು ಆರೋಪಿಸಿದರು.

2021-22ರಲ್ಲಿ ಬಿಜೆಪಿ ಸರ್ಕಾರ ಕೇಂದ್ರದ ನೆರವಿಗಾಗಿ ಕಾಯದೆ ರಾಜ್ಯದ ಸಂಪನ್ಮೂಲ ಬಳಸಿ ರೈತರಿಗೆ ಪರಿಹಾರ ನೀಡಿತ್ತು. ಅದೇ ಮಾದರಿಯಲ್ಲಿ ಈಗಿನ ಸರ್ಕಾರವೂ ಹೆಚ್ಚುವರಿ ನೆರವು ಒದಗಿಸಬೇಕು ಎಂದು ಅಶೋಕ ಆಗ್ರಹಿಸಿದರು.

‘ರೈತರಿಗೆ ಹಣವಿಲ್ಲ, ಜನರಿಗೆ ತೆರಿಗೆ ಹೊರೆ’
ರಾಜ್ಯದ ಹಣಕಾಸು ಪರಿಸ್ಥಿತಿ ಹದಗೆಟ್ಟಿರುವುದರಿಂದ ರೈತರಿಗೆ ಹೆಚ್ಚಿನ ಪರಿಹಾರ ನೀಡಲು ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ಅಶೋಕ ಟೀಕಿಸಿದರು. ಮತ್ತೊಂದೆಡೆ ಬಸ್ ದರ, ಮನೆ ತೆರಿಗೆ, ವಿದ್ಯುತ್ ಶುಲ್ಕ ಸೇರಿದಂತೆ ವಿವಿಧ ರೀತಿಯಲ್ಲಿ ಜನರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಹಾಕಲಾಗುತ್ತಿದೆ ಎಂದು ಆರೋಪಿಸಿದರು.

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಒಂದು ಕಡೆ ಹಣ ನೀಡುತ್ತಾ, ಮತ್ತೊಂದು ಕಡೆ ತೆರಿಗೆ ಹಾಗೂ ಬೆಲೆ ಏರಿಕೆಯ ಮೂಲಕ ಜನರಿಂದ ಹಣ ವಸೂಲಿ ಮಾಡಲಾಗುತ್ತಿದೆ. ಇದು ಸರ್ಕಾರದ ಆರ್ಥಿಕ ನಿರ್ವಹಣೆಯ ವೈಫಲ್ಯವನ್ನು ತೋರಿಸುತ್ತದೆ ಎಂದು ಹೇಳಿದರು.

ಹಾಲಿನ ದರ ಏರಿಕೆಗೆ ಆಕ್ಷೇಪ
ಹಾಲಿನ ದರ ಹೆಚ್ಚಿಸುವ ನಿರ್ಧಾರಕ್ಕೂ ಆರ್.ಅಶೋಕ ವಿರೋಧ ವ್ಯಕ್ತಪಡಿಸಿದರು. ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ನೀಡುವ ಪ್ರೋತ್ಸಾಹಧನವನ್ನು ₹5ರಿಂದ ₹8ಕ್ಕೆ ಹೆಚ್ಚಿಸುವ ಭರವಸೆ ನೀಡಿತ್ತು. ಹೆಚ್ಚುವರಿ ₹3 ಪ್ರೋತ್ಸಾಹಧನವನ್ನು ಮೊದಲು ರೈತರಿಗೆ ನೀಡಬೇಕು. ಗ್ರಾಹಕರ ಮೇಲೆ ಬೆಲೆ ಏರಿಕೆಯ ಹೊರೆ ಹಾಕುವುದು ಸರಿಯಲ್ಲ ಎಂದು ಅವರು ಹೇಳಿದರು.

GST ಸಭೆಯಲ್ಲಿ ರಾಜ್ಯದ ಪರ ನಿಲುವು ಏನು?
GST ಸಭೆಗೆ ತೆರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕುರಿತೂ ಅಶೋಕ ಪ್ರತಿಕ್ರಿಯಿಸಿದರು. ರಾಜ್ಯದ ಆರ್ಥಿಕ ಹಕ್ಕುಗಳ ವಿಚಾರದಲ್ಲಿ ಸರ್ಕಾರದ ನಿಲುವು ಏನು ಎಂಬುದು GST ಸಭೆಯಲ್ಲಿ ಸ್ಪಷ್ಟವಾಗಲಿದೆ. ರಾಜ್ಯದ ಪರವಾಗಿ ಯಾವ ಬೇಡಿಕೆಗಳನ್ನು ಮಂಡಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಹೇಳಿದರು.

ಐದು ಪೊಲೀಸ್ ಕಮಿಷನರೇಟ್‌ಗಳ ನಿರ್ಧಾರಕ್ಕೆ ವಿರೋಧ
ಬೆಂಗಳೂರು ಪೊಲೀಸ್ ಕಮಿಷನರೇಟ್ ಅನ್ನು ಐದು ಭಾಗಗಳಾಗಿ ವಿಭಜಿಸುವ ಸರ್ಕಾರದ ನಿರ್ಧಾರಕ್ಕೂ ಅಶೋಕ ತೀವ್ರ ವಿರೋಧ ವ್ಯಕ್ತಪಡಿಸಿದರು.

ಬೆಂಗಳೂರು ಪೊಲೀಸ್ ಕಮಿಷನರ್ ಹುದ್ದೆಗೆ ತನ್ನದೇ ಆದ ಆಡಳಿತಾತ್ಮಕ ಮಹತ್ವ ಮತ್ತು ಗೌರವವಿದೆ. ಈಗಿರುವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಬದಲು ಐದು ಕಮಿಷನರೇಟ್‌ಗಳಾಗಿ ವಿಭಜಿಸುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದರು.

ಈ ನಿರ್ಧಾರದಿಂದ ಪೊಲೀಸ್ ಆಡಳಿತದಲ್ಲಿ ಗೊಂದಲ ಉಂಟಾಗುವ ಸಾಧ್ಯತೆಯಿದೆ. ಬೆಂಗಳೂರಿನ ಆಡಳಿತ ವ್ಯವಸ್ಥೆಯಲ್ಲಿ ಈಗಾಗಲೇ ಹಲವು ಬದಲಾವಣೆಗಳಾಗಿದ್ದು, ಪೊಲೀಸ್ ವ್ಯವಸ್ಥೆಯನ್ನೂ ವಿಭಜಿಸುವುದು ಮತ್ತಷ್ಟು ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಅವರು ಎಚ್ಚರಿಸಿದರು.

ರೈತರ ಬೆಳೆ ನಷ್ಟ, ಕುಡಿಯುವ ನೀರಿನ ಸಮಸ್ಯೆ, ಬೆಲೆ ಏರಿಕೆ ಹಾಗೂ ಬೆಂಗಳೂರಿನ ಆಡಳಿತಾತ್ಮಕ ವಿಚಾರಗಳಲ್ಲಿ ಸರ್ಕಾರ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಜನರ ಸಮಸ್ಯೆಗಳಿಗೆ ಆದ್ಯತೆ ನೀಡುವ ಬದಲು ಅಧಿಕಾರದ ಆಂತರಿಕ ರಾಜಕಾರಣದಲ್ಲಿ ಸರ್ಕಾರ ತೊಡಗಿದೆ ಎಂದು ಆರ್.ಅಶೋಕ ಆರೋಪಿಸಿದರು.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು