ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

ನೀವು ನನಗೂ ಚಪ್ಪಾಳೆ ತಟ್ಟೋದು, ಸಾಮಾಜಿಕ ನ್ಯಾಯದ ವಿರೋಧಿ ಆಗಿರುವ ಬಿಜೆಪಿಯವರ ಮಾತಿಗೂ ಚಪ್ಪಾಳೆ ತಟ್ಟೋದನ್ನು ನಿಲ್ಲಿಸಿ: ಸಿ.ಎಂ ಸಿದ್ದರಾಮಯ್ಯ

PPeepal Media Desk

Peepal Media Desk ರಾಜಕೀಯ, ರಾಜ್ಯ

• 1 ನಿಮಿಷದ ಓದು

ನೀವು ನನಗೂ ಚಪ್ಪಾಳೆ ತಟ್ಟೋದು, ಸಾಮಾಜಿಕ ನ್ಯಾಯದ ವಿರೋಧಿ ಆಗಿರುವ ಬಿಜೆಪಿಯವರ ಮಾತಿಗೂ ಚಪ್ಪಾಳೆ ತಟ್ಟೋದನ್ನು ನಿಲ್ಲಿಸಿ: ಸಿ.ಎಂ ಸಿದ್ದರಾಮಯ್ಯ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರಕ್ಕೆ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ
ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆ ಮಾಡಿ
ಆರ್ಥಿಕ ಸಮೀಕ್ಷೆ ಎಲ್ಲರ ಸ್ಥಿತಿ ಗತಿ ತಿಳಿಯುವ ಸಮೀಕ್ಷೆ
ಚಾಮರಾಜನಗರಕ್ಕೆ 20 ಸಾರಿ ಬಂದು-ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೇನೆ

ಚಾಮರಾಜನಗರ ಏ 25: ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದ ಬಡವರಿಗೆ ನೆರವಾಗುವ ರೀತಿಯಲ್ಲಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿ. ಇದರಿಂದ ಅಂಬೇಡ್ಕರ್ ಅವರ ಸಮಾನತೆಯ ಅವಕಾಶ ಈಡೇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಕನಕ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಈಗಾಗಲೇ 2 ಕೋಟಿ ರೂಪಾಯಿಯಲ್ಲಿ 50 ಲಕ್ಷ ರೂಪಾಯಿ ಬಿಡುಗಡೆ ಆಗಿದೆ. ಹಲವರು ದೇಣಿಗೆ ಕೂಡ ಕೊಟ್ಟಿದ್ದಾರೆ. ಇವರೆಲ್ಲರಿಗೂ ಒಳ್ಳೆಯದಾಗಲಿ ಎಂದರು.

ಸಮುದಾಯ ಭವನ ಕಟ್ಟಿ. ಆದರೆ, ಇದಕ್ಕಿಂತ ಹೆಚ್ಚಾಗಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆ ನಿರ್ಮಿಸಿ, ಜಿಲ್ಲೆಯ ಎಲ್ಲಾ ಹಿಂದುಳಿದ ಸಮುದಾಯಗಳ ಬಡ ಮಕ್ಕಳಿಗೆ ಶೈಕ್ಷಣಿಕ ನೆರವು ದೊರಕುವಂತೆ ಮಾಡಿ ಎಂದು ಕರೆ ನೀಡಿದರು.

ಚಾಮರಾಜನಗರ ಜಿಲ್ಲೆ ಅತ್ಯಂತ ಹಿಂದುಳಿದಿರುವ ಜಿಲ್ಲೆ. ಇಲ್ಲಿ ಶಿಕ್ಷಣ ಹೆಚ್ಚೆಚ್ಚು ಸಿಗಬೇಕಿದೆ. ಶಿಕ್ಷಣ ಕಲಿಯಬೇಕಿದ್ದರೆ ಹಾಸ್ಟೆಲ್ ಗಳ ಅಗತ್ಯವೂ ಇದೆ. ನಮ್ಮ ಸರ್ಕಾರ ಎಲ್ಲಾ ಜಾತಿಯ ಬಡವರಿಗೂ ಅನುಕೂಲ ಆಗುವ ಯೋಜನೆಗಳನ್ನು ಜಾರಿಗೆ ತಂದಿದೆ. ಶಕ್ತಿ ಯೋಜನೆ ಸೇರಿ ನಮ್ಮ ಐದೂ ಗ್ಯಾರಂಟಿಗಳು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡ ಮಹಿಳೆಯರಿಗೂ ಅನುಕೂಲ ಆಗುತ್ತಿದೆ. ಕೆಲಸಕ್ಕೆ ಹೋಗುವ ಬಡ ಮತ್ತು ಮಧ್ಯಮ ವರ್ಗದ ಹೆಣ್ಣು ಮಕ್ಕಳಿಗೆ ಇದರಿಂದ ಹೆಚ್ಚು ಸಮಾಧಾನ ಆಗಿದೆ. ವಿದ್ಯಾರ್ಥಿನಿಯರಿಗೂ ಸಮಾಧಾನ ಆಗಿದೆ. ಹೀಗೆ ಎಲ್ಲಾ ಜಾತಿಯ ಬಡವರು, ಮಧ್ಯಮ ವರ್ಗದವರಿಗೆ ನೆರವಾಗುವ ಕೆಲಸ ಮಾಡಿ ಎಂದು ಸಲಹೆ ನೀಡಿದರು.

“ಸಾಮಾಜಿಕ ಸಮೀಕ್ಷೆ:
ಸಂವಿಧಾನ ಬಂದು 75 ವರ್ಷ ಆದರೂ ಸಾಮಾಜಿಕ ನ್ಯಾಯ ಈಡೇರಿಲ್ಲ. ಅವಕಾಶ ವಂಚಿತ ಸಮುದಾಯಗಳ ಆರ್ಥಿಕ, ಸಾಮಾಜಿಕ ಸ್ಥಿತಿ ಗತಿ ಅರಿಯಲು ಸಮೀಕ್ಷೆ ನಡೆಸಿದ್ದೇವೆ. 2015 ರಲ್ಲಿ ನಡೆಸಿದ ಸಮೀಕ್ಷೆ ಬಳಿಕ ಬಂದ ಸಿಎಂ ಗಳು ಸ್ವೀಕರಿಸಿಲ್ಲ. ನಾನು ಸ್ವೀಕರಿಸಿ ಕ್ಯಾಬಿನೆಟ್ ಮುಂದೆ ಇಟ್ಟಿದ್ದೀನಿ. ಇದು ಯಾರ ವಿರುದ್ಧವೂ ಇರುವ ಸಮೀಕ್ಷೆ ಅಲ್ಲ. ಎಲ್ಲರ ಸ್ಥಿತಿ ಗತಿ ತಿಳಿಯುವ ಸಮೀಕ್ಷೆ ಮಾತ್ರ ಆಗಿದೆ ಎಂದರು.

ಬಿಜೆಪಿಯ ರಾಮಾ ಜೋಯಿಸ್ ಅವರು ಮೀಸಲಾತಿ ವಿರೋಧಿಸಿ ಕೋರ್ಟ್ ಗೆ ಹೋಗಿದ್ದರು. ನಿಮಗೆ ಸೈದ್ಧಾಂತಿಕವಾಗಿ ಸ್ಪಷ್ಟ ತಿಳಿವಳಿಕೆ ಇರಬೇಕು.

ನೀವು ನನಗೂ ಚಪ್ಪಾಳೆ ತಟ್ಟೋದು, ಸಾಮಾಜಿಕ ನ್ಯಾಯದ ವಿರೋಧಿ ಆಗಿರುವ ಬಿಜೆಪಿಯವರ ಮಾತಿಗೂ ಚಪ್ಪಾಳೆ ತಟ್ಟೋದನ್ನು ನಿಲ್ಲಿಸಿ. ನಮ್ಮ ಪರವಾಗಿ ಇರುವವರು ಯಾರು ಎಂದು ತಿಳಿದು ಆಶೀರ್ವಾದ ಮಾಡಿ ಎಂದರು.

ಚಾಮರಾಜನಗರ ಇಷ್ಟವಾದ ಜಿಲ್ಲೆ
ನನಗೆ ಚಾಮರಾಜನಗರ ಅತ್ಯಂತ ಇಷ್ಟವಾದ ಜಿಲ್ಲೆ. ಚಾಮರಾಜನಗರಕ್ಕೆ 20 ಸಾರಿ ಬಂದು-ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೇನೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು