ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಕಲಿ ST ಜಾತಿ ಪ್ರಮಾಣಪತ್ರ ಪಡೆದವರಿಗೂ, ಕೊಟ್ಟವರಿಗೂ ಕಠಿಣ ಕ್ರಮ: ಸಿ ಎಂ ಸಿದ್ದರಾಮಯ್ಯ

PPeepal Media Desk

Peepal Media Desk • ರಾಜಕೀಯ, ರಾಜ್ಯ

• 1 ನಿಮಿಷದ ಓದು

ನಕಲಿ ST ಜಾತಿ ಪ್ರಮಾಣಪತ್ರ ಪಡೆದವರಿಗೂ, ಕೊಟ್ಟವರಿಗೂ ಕಠಿಣ ಕ್ರಮ: ಸಿ ಎಂ ಸಿದ್ದರಾಮಯ್ಯ

* ನಕಲಿ ST ಜಾತಿ ಪ್ರಮಾಣ ನೀಡುವವರ, ಕೇಳುವವರ ಮತ್ತು ಮಾನ್ಯ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ವಾಲ್ಮೀಕಿ ಸಮಾಜದ ನಿಯೋಗ ಒತ್ತಾಯ
* ಮೀಸಲಾತಿ ಕುರಿತ ಗೊಂದಲ ನಿವಾರಣೆಗೆ ಪ್ರತ್ಯೇಕ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ
* ವಿರೋಧ ಪಕ್ಷದ ನಾಯಕನಾಗಿದ್ದಾಗಲೂ ಸದನದಲ್ಲಿ ಧ್ವನಿ ಎತ್ತಿದ್ದೆ. ಸಾಮಾಜಿಕ ನ್ಯಾಯದ ಪರವಾಗಿ ಇರುತ್ತೇನೆ: ವಾಲ್ಮೀಕಿ ಸಮುದಾಯಕ್ಕೆ ಸಿಎಂ ಅಭಯ

ಬೆಂಗಳೂರು, ಜುಲೈ 05 :  ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಸೃಷ್ಟಿಸಿರುವ ಗೊಂದಲಗಳ ನಿವಾರಣೆಗೆ  ಬಜೆಟ್ ಅಧಿವೇಶನ ಮುಗಿದ  ನಂತರ ಅಡ್ವೊಕೇಟ್ ಜನರಲ್,  ಕಾನೂನು ಇಲಾಖೆ ಹಾಗೂ ಸಮುದಾಯದ ಸಚಿವರೊಂದಿಗೆ  ಪ್ರತ್ಯೇಕ ಸಭೆ ಕರೆದು ಚರ್ಚಿಸುತ್ತೇನೆ. ನಾನು ಸಾಮಾಜಿಕ ನ್ಯಾಯದ ಪರವಾಗಿದ್ದು ವಾಲ್ಮೀಕಿ ಸಮಾಜದ ಹಿತ ಕಾಪಾಡಲು ಬದ್ದವಾಗಿದ್ದೇನೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜನಹಳ್ಳಿಯ ವಾಲ್ಮೀಕಿ ಪೀಠದ ಪೀಠಾಧ್ಯಕ್ಷ  ಶ್ರೀ ಪ್ರಸನ್ನಾನಂದ  ಸ್ವಾಮೀಜಿಗಳ ನೇತೃತ್ವದಲ್ಲಿ ಸಚಿವರು ಹಾಗೂ ಶಾಸಕರ ನಿಯೋಗ ತಮ್ಮನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರು ಮಾತನಾಡಿದರು.

ಹಿಂದಿನ ಸರ್ಕಾರ ಮೀಸಲಾತಿ ವಿಚಾರದಲ್ಲಿ ಆತುರಾತುರವಾಗಿ ತೀರ್ಮಾನ ಮಾಡಿದ್ದು, ಗೊಂದಲ ಸೃಷ್ಟಿಸಿದೆ. ಮುಸ್ಲಿಮರಿಗೆ ಶೇ 4 ರಷ್ಟಿದ್ದ ಮೀಸಲಾತಿ ರದ್ದು ಮಾಡಿ ಒಕ್ಕಲಿಗರು ಹಾಗೂ ಲಿಂಗಾಯತರಿಗೆ  ತಲಾ ಶೇ 2 ರಷ್ಟು ಮೀಸಲಾತಿ ನೀಡಿದೆ.  2 ಸಿ, 2 ಡಿ ಸಹ ಮಾಡಿದ್ದಾರೆ. ಇದರ ಬಗ್ಗೆ ಹಲವಷ್ಟು ಗೊಂದಲಗಳಿವೆ. ಈ ಮಾದರಿಯ ಮೀಸಲಾತಿ ಹಂಚಿಕೆ ಸಂವಿಧಾನಾತ್ಮಕವಾಗಿ ಇಲ್ಲದಿರುವ ಕಾರಣ ಸುದೀರ್ಘ ಚರ್ಚೆಯ ಅಗತ್ಯವಿದೆ. ಒಟ್ಟಾರೆ ಮೀಸಲಾತಿಯ ಪರಿಮಿತಿಯನ್ನು ಸಡಿಲಗೊಳಿಸದಿದ್ದರೆ ಪರಿಹಾರ ಸಿಗುವುದಿಲ್ಲ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯ ಪಟ್ಟರು.

ನಕಲಿ ಜಾತಿ ಪ್ರಮಾಣ ಪತ್ರಕ್ಕೆ ಕಡಿವಾಣ :
ಪರಿಶಿಷ್ಟ ಜಾತಿ ಹಾಗೂ ಪಂಗಡದ ಪ್ರಮಾಣಪತ್ರ ಅಕ್ರಮವಾಗಿ ವಿತರಣೆಯಾಗುತ್ತಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು ಸಿ.ಆರ್.ಇ ಸೆಲ್ ನಲ್ಲಿ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ರಾಯಚೂರು, ಬಿಜಾಪುರ, ಭಾಗದಲ್ಲಿ ಕೋಲಿ, ಕಬ್ಬಲಿಗ,  ತಳವಾರರ ಸಮುದಾಯಗಳನ್ನು ಎಸ್.ಟಿ ಗೆ ಸೇರಿಸಬೇಕು ಎನ್ನುವ ಬೇಡಿಕೆ ಇದೆ. ಕೋಲಿ ಸಮಾಜದವರು ತಳವಾರರು ಎಂದೇ ಹೇಳುತ್ತಾರೆ. ಈ ಗೊಂದಲಗಳ ಬಗ್ಗೆಯೂ ತೀರ್ಮಾನವಾಗಬೇಕು.  ನಾಯಕ ಸಮುದಾಯದ ತಳವಾಲರರನ್ನು ಮಾತ್ರ ಎಸ್.ಟಿ ಗೆ ಸೇರಿಸಲಾಗಿದ್ದು ಇವೆಲ್ಲಾ ಅತ್ಯಂತ ಸೂಕ್ಷ್ಮ ವಿಚಾರವಾಗಿರುವುದರಿಂದ ಸಂವಿಧಾನ ಮತ್ತು ಕಾನೂನು ತಜ್ಞರ ಜತೆ ಚರ್ಚೆ ಮಾಡಲಾಗುವುದು ಎಂದು ಭರವಸೆಯಿತ್ತರು.

ಪರಿಶಿಷ್ಟ ಪಂಗಡಕ್ಕೆ ಸ್ಥಾಪನೆಯಾಗಿರುವ ಪ್ರತ್ಯೇಕ  ಸಚಿವಾಲಯಕ್ಕೆ ಕಾರ್ಯದರ್ಶಿ ನೇಮಕಾತಿ ಮಾಡಲಾಗುವುದು. ಬುಡಕಟ್ಟು ಸಲಹಾ ಮಂಡಳಿ ಸ್ಥಾಪನೆ ಬಗ್ಗೆ ವರದಿ ನೀಡಿದಲ್ಲಿ ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮೀಸಲಾತಿಯನ್ನು ಸಂವಿಧಾನದ 9 ನೇ ಪರಿಚ್ಛೇಧಕ್ಕೆ ಸೇರಿಸಲು ನಮ್ಮ ಸರ್ಕಾರ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡುತ್ತದೆ. ಅದಕ್ಕೆ ಮೊದಲು ಬಿಜೆಪಿ ಸರ್ಕಾರ ಸೃಷ್ಟಿಸಿದ ಎಲ್ಲಾ ಗೊಂದಲಗಳನ್ನು ನಿವಾರಿಸಿಕೊಳ್ಳುವ ಅನಿವಾರ್ಯತೆ ಇದೆ ಎಂದರು.

ಸಹಕಾರ ಸಚಿವ ರಾಜಣ್ಣ, ಲೋಕೋಪಯೋಗಿ ಸಚಿವ  ಸತೀಶ್  ಜಾರಕಿಹೊಳಿ ಹಾಗೂ ವಾಲ್ಮೀಕಿ  ಸಮುದಾಯದ 14 ಶಾಸಕರು, ಮುಖಂಡರು ಹಾಗೂ ಜನಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು