ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಡಿ.ಕೆ.ಶಿವಕುಮಾರ್ ಗೆ ಮತ್ತೆ ಇಡಿ ಸಮನ್ಸ್ : ಕಾಂಗ್ರೆಸ್ ಆಕ್ರೋಶ

PPeepal Media

Peepal Media • ರಾಜಕೀಯ

• 2 ನಿಮಿಷದ ಓದು

ಡಿ.ಕೆ.ಶಿವಕುಮಾರ್ ಗೆ ಮತ್ತೆ ಇಡಿ ಸಮನ್ಸ್ : ಕಾಂಗ್ರೆಸ್ ಆಕ್ರೋಶ

“#BharatJodoYatra ಹಾಗೂ ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಮತ್ತೊಮ್ಮೆ ಇಡಿ ನನಗೆ ಸಮನ್ಸ್‌ ನೀಡಿದೆ.
ನಾನು ಸಹಕರಿಸಲು ಸಿದ್ಧ ಆದರೆ ಈ ಸಮನ್ಸ್‌ ನೀಡಿರುವ ಸಮಯ, ಹಾಗೂ ಮೇಲಿಂದ ಮೇಲೆ ನೀಡುತ್ತಿರುವ ಕಿರುಕುಳದಿಂದಾಗಿ ನನ್ನ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ತೊಂದರೆಯಾಗುತ್ತಿದೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಏಜೆನ್ಸಿಯ ಮುಂದೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಅವರಿಗೆ ಮತ್ತೊಂದು ಸಮನ್ಸ್ ಜಾರಿ ಮಾಡಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ಗುರುವಾರ ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ಪಕ್ಷವು ಕಾಂಗ್ರೆಸ್‌ಗೆ ಹೆಚ್ಚುತ್ತಿರುವ ಬೆಂಬಲದಿಂದ ಹೆದರುತ್ತಿದೆ ಮತ್ತು ಭ್ರಷ್ಟಾಚಾರದ ಆರೋಪದಿಂದ ಬಿಜೆಪಿ ವರ್ಚಸ್ಸು ಸಹ ಕುಂದಿದೆ. ಇದು ಮುಂದಿನ ಚುನಾವಣೆಗೆ ಬಿಜೆಪಿ ಪಕ್ಷಕ್ಕೆ ಹಿನ್ನಡೆಯಾಗುವ ಭಯದಲ್ಲಿ ಬಿಜೆಪಿಯವರಿದ್ದಾರೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

“ಕಾಂಗ್ರೆಸ್‌ಗೆ ಹೆಚ್ಚುತ್ತಿರುವ ಸಾರ್ವಜನಿಕ ಬೆಂಬಲ ಮತ್ತು ಭಾರತ್‌ ಜೋಡೋ ಯಾತ್ರೆಯ ಸಿದ್ದತೆಗೆ ಜನಸ್ಪಂದನೆ ನೋಡಿದ ಮೋದಿ ಸರ್ಕಾರವು ಡಿ.ಕೆ ಶಿವಕುಮಾರ್ ಅವರನ್ನು ಗುರಿಯಾಗಿಸಲು ಬಿಜೆಪಿಯ ಅಂಗಸಂಸ್ಥೆಯಂತೆ ಕೆಲಸ ಮಾಡುವ ಇಡಿಯನ್ನು ತಂದಿದೆ. ಇಂತಹ ಹೇಡಿತನದ ಕೃತ್ಯಗಳು ಭ್ರಷ್ಟ ಬೊಮ್ಮಾಯಿ ಸರ್ಕಾರವನ್ನು ನಿರ್ನಾಮ ಮಾಡುವ ನಮ್ಮ ಸಂಕಲ್ಪವನ್ನು ಮತ್ತಷ್ಟು ಬಲಪಡಿಸುತ್ತದೆ” ಎಂದು ಸುರ್ಜೇವಾಲಾ ಟ್ವೀಟ್ ಮಾಡಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಕುಮಾರ್ ಮತ್ತು ಇತರ ನಾಲ್ವರಿಗೆ ವಿಶೇಷ ನ್ಯಾಯಾಲಯ ಜಾಮೀನು ನೀಡಿದ ಒಂದು ತಿಂಗಳ ನಂತರ ಇಡಿ ಸಮನ್ಸ್ ಬಂದಿದೆ.

ಆಗಸ್ಟ್ 2017 ರಲ್ಲಿ, ಆದಾಯ ತೆರಿಗೆ ಇಲಾಖೆಯು ಕಾಂಗ್ರೆಸ್ ನಾಯಕರಾದ ಡಿ.ಕೆ.ಶಿವಕುಮಾರ್, ಅವರ ಕುಟುಂಬ ಮತ್ತು ಸಹಚರರ ಒಡೆತನದ ಹಲವಾರು ನಿವೇಶನಗಳ ಮೇಲೆ ದಾಳಿ ನಡೆಸಿತ್ತು. ಹಾಗೇ “ಕೋಟ್ಯಂತರ ರೂಪಾಯಿ ಲೆಕ್ಕಕ್ಕೆ ಸಿಗದ ಆದಾಯವನ್ನು ಪತ್ತೆಹಚ್ಚಿದೆ” ಎಂದು ಹೇಳಿಕೊಂಡಿತ್ತು.

ನಂತರ ಸೆಪ್ಟೆಂಬರ್ 3, 2019 ರಂದು ಡಿ.ಕೆ.ಶಿವಕುಮಾರ್ ಅವರನ್ನು ಇದೇ ಪ್ರಕರಣದ ಅಡಿಯಲ್ಲಿ ಬಂಧಿಸಿದ ನಂತರ, ಶಿವಕುಮಾರ್ ಅವರು ಜಾಮೀನಿಗಾಗಿ ಸೆಪ್ಟೆಂಬರ್ 26 ರಂದು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅಕ್ಟೋಬರ್ 2019 ರಲ್ಲಿ ದೆಹಲಿ ಹೈಕೋರ್ಟ್ ಶಿವಕುಮಾರ್ ಅವರಿಗೆ ಜಾಮೀನು ನೀಡಿತು.

ಡಿ.ಕೆ.ಶಿವಕುಮಾರ್ ಅವರ ಪ್ರಭಾವಿ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ಸಾಕ್ಷ್ಯಾಧಾರಗಳನ್ನು ಹಾಳುಮಾಡುತ್ತಾರೆ ಎಂಬ ಆತಂಕದಿಂದ ಇಡಿ ಆ ಸಮಯದಲ್ಲಿ ಶಿವಕುಮಾರ್ ಅವರಿಗೆ ಜಾಮೀನು ನೀಡುವುದನ್ನು ವಿರೋಧಿಸಿತ್ತು. ಆದರೆ, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳು ತನಿಖಾ ಸಂಸ್ಥೆಯ ಬಳಿ ಇದ್ದ ಕಾರಣ ನ್ಯಾಯಾಲಯ ಅಂತಹ ಯಾವುದೇ ಸಾಕ್ಷಾಧಾರ ನಾಶ ಆಗುವುದಿಲ್ಲ ಎಂದು ಶಿವಕುಮಾರ್ ಅವರಿಗೆ ಜಾಮೀನು ನೀಡಿದೆ.

ಇನ್ನು ಈ ಬಗ್ಗೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು “ಭಾರತ್ ಜೋಡೋ ಯಾತ್ರೆಯ ಸಿದ್ಧತೆಗಳನ್ನು ವಿಫಲಗೊಳಿಸುವ ಮತ್ತು ಕಾಂಗ್ರೆಸ್ ನಾಯಕರಿಗೆ ಕಿರುಕುಳ ನೀಡುವ ಪ್ರಯತ್ನದಲ್ಲಿ ಇ.ಡಿ. ಮತ್ತೊಮ್ಮೆ ಡಿ.ಕೆ.ಶಿವಕುಮಾರ್ ಅವರಿಗೆ ಸಮನ್ಸ್ ನೀಡಿದೆ. ಕಾಂಗ್ರೆಸ್ ಪಕ್ಷ ’40 ಪರ್ಸೆಂಟ್’ ಸರ್ಕಾರವನ್ನು ಬಹಿರಂಗಗೊಳಿಸಿದರೆ ಇತ್ತ ಬಿಜೆಪಿ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯಲು ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ” ಎಂದು ಟ್ವಿಟ್ ಮಾಡಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

PPeepal Media

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು