ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕೇಂದ್ರದ ವಿರುದ್ಧ ಪ್ರತಿಭಟನೆಗೆ ಬೆಂಬಲ ನೀಡಿ: ಬಿಜೆಪಿ ಸಂಸದರಿಗೆ ಸಿಎಂ ಪತ್ರ

PPeepal Media Desk

Peepal Media Desk • ರಾಜಕೀಯ

• 1 ನಿಮಿಷದ ಓದು

ಕೇಂದ್ರದ ವಿರುದ್ಧ ಪ್ರತಿಭಟನೆಗೆ ಬೆಂಬಲ ನೀಡಿ: ಬಿಜೆಪಿ ಸಂಸದರಿಗೆ ಸಿಎಂ ಪತ್ರ

ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ನಡೆಸಲಿರುವ ಹೋರಾಟಕ್ಕೆ ಪಕ್ಷಭೇದ ಮರೆತು ಬೆಂಬಲಿಸಬೇಕು ಎಂದು ವಿನಂತಿಸಿ ಬಿಜೆಪಿ ಮತ್ತು ಜೆಡಿಎಸ್ ಸಂಸದರಿಗೆ ಹಾಗೂ ರಾಜ್ಯಸಭಾ ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.


ಕನ್ನಡಿಗರ ಹಕ್ಕು ಮತ್ತು ಸ್ವಾಭಿಮಾನಕ್ಕೆ ಕೇಂದ್ರದಿಂದ ನಿರಂತರವಾಗಿ ಆಗುತ್ತಿರುವ ಅನ್ಯಾಯ ಮತ್ತು ಕನ್ನಡಿಗರ ತೆರಿಗೆ ಹಣಕ್ಕೆ ಆಗುತ್ತಿರುವ ವಂಚನೆಯನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ಬುಧವಾರ ನಡೆಯುವ ಹೋರಾಟಕ್ಕೆ ಬೆಂಬಲ ನೀಡಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಿ ಎಂದು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ತೇಜಸ್ವಿ ಸೂರ್ಯ, ಅನಂತ್ ಕುಮಾರ್ ಹೆಗಡೆ, ನಳಿನ್‌ ಕುಮಾರ್‌ ಕಟೀಲ್‌, ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ, ಹೆಚ್ ಡಿ ದೇವೇಗೌಡ, ಭಗವಂತ ಖೂಬಾ ಸಹಿತ ಹಲವು ಸಂಸದರಿಗೆ ಬರೆದ ಪತ್ರದಲ್ಲಿ ಸೂಚಿಸಿದ್ದಾರೆ.


ಕೇಂದ್ರ ಸರ್ಕಾರದಿಂದ ಆಗುತ್ತಿರುವ ನಿರಂತರ ಅನ್ಯಾಯ ಮತ್ತು ಕರ್ನಾಟಕದ ವಿಚಾರವಾಗಿ ಕೇಂದ್ರ ಸರ್ಕಾರವು ತೋರುತ್ತಿರುವ ಮಲತಾಯಿ ಧೋರಣೆಯು ತಮಗೆ ಈಗಾಗಲೇ ತಿಳಿದ ವಿಷಯವಾಗಿರುತ್ತದೆ. ಇದರ ವಿರುದ್ಧ ಪ್ರತಿಭಟಿಸಲು ಮತ್ತು ದೇಶದ ಗಮನ ಸೆಳೆಯಲು ತೀರ್ಮಾನಿಸಲಾಗಿದೆ. ರಾಜ್ಯದ ಉಪ ಮುಖ್ಯಮಂತ್ರಿಗಳು, ಎಲ್ಲ ಸಚಿವರು, ಶಾಸಕರು ಮತ್ತು ಸಂಸದರು ಸೇರಿ ಒಂದು ದಿನದ ಧರಣಿ ಸತ್ಯಾಗ್ರಹವನ್ನು ನಡೆಸಲು ತೀರ್ಮಾನಿಸಿದ್ದೇವೆ.


ಕರ್ನಾಟಕಕ್ಕೆ ತೆರಿಗೆ ಪಾಲಿನ ಹಂಚಿಕೆಯಲ್ಲಿ ಆಗುತ್ತಿರುವ ಭಾರೀ ಅನ್ಯಾಯ, ಬರಪರಿಹಾರ ನೀಡದಿರುವುದು, ವಿವಿಧ ಯೋಜನೆಗಳಿಗೆ ಅನುಮತಿ ಮತ್ತು ನೆರವು ನೀಡುವಲ್ಲಿ ತೋರುತ್ತಿರುವ ನಿರ್ಲಕ್ಷ್ಯ ಮತ್ತು ವಿಳಂಬ ಇತ್ಯಾದಿಗಳು ರಾಜ್ಯದಲ್ಲಿ ಜನ ಸಾಮಾನ್ಯರಿಗೆ ಸಂಕಷ್ಟವನ್ನು ಉಂಟು ಮಾಡಿವೆ. ಈ ವಿಚಾರವನ್ನು ಜವಾಬ್ದಾರಿಯುತ ಚುನಾಯಿತ ಪ್ರತಿನಿಧಿಗಳಾದ ತಾವು ಈ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಅದರ ಯಶಸ್ಸಿಗೆ ನೆರವಾಗಬೇಕು ಎಂದು ತಮ್ಮಲ್ಲಿ ಕರ್ನಾಟಕದ ಸಮಸ್ತ ಜನತೆಯ ಪರವಾಗಿ ವಿನಂತಿಸುತ್ತೇನೆ ಎಂದು ಪತ್ರದಲ್ಲಿ ಕೋರಿದ್ದಾರೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು