ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಡಿಲಿಮಿಟೇಷನ್ ಹಾಗೂ ಕೇಂದ್ರದ ದಕ್ಷಿಣ ವಿರೋಧಿ ನೀತಿಯ ವಿರುದ್ಧದ ತಮಿಳುನಾಡಿನ ಹೋರಾಟಕ್ಕೆ ನಮ್ಮ ಬೆಂಬಲವೂ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

PPeepal Media

Peepal Media ರಾಜಕೀಯ

• 1 ನಿಮಿಷದ ಓದು

ಡಿಲಿಮಿಟೇಷನ್ ಹಾಗೂ ಕೇಂದ್ರದ ದಕ್ಷಿಣ ವಿರೋಧಿ ನೀತಿಯ ವಿರುದ್ಧದ ತಮಿಳುನಾಡಿನ ಹೋರಾಟಕ್ಕೆ ನಮ್ಮ ಬೆಂಬಲವೂ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಈ ಭೇಟಿಯಲ್ಲಿಅವರು ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಮತ್ತು ದಕ್ಷಿಣ ರಾಜ್ಯಗಳ ವಿರೋಧಿ ನಿಲುವನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಕುರಿತು ಚರ್ಚಿಸಿದರು.

ಡಿಲಿಮಿಟೇಷನ್ ಮತ್ತಿತರ ಸಂಗತಿಗಳ ವಿಚಾರದಲ್ಲಿ ಧ್ವನಿ ಎತ್ತುವಂತೆ, ಪ್ರತಿಭಟನೆ ಜೊತೆಗೆ ನಿಲ್ಲುವಂತೆ ಮುಖ್ಯಮಂತ್ರಿ ಸ್ಟಾಲಿನ್‌ ಪರವಾಗಿ ಅವರು ಮನವಿ ಸಲ್ಲಿಸಿದರು.

ಇದಕ್ಕೂ ಮೊದಲು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರು ದೂರವಾಣಿ ಮೂಲಕ ಮುಖ್ಯಮಂತ್ರಿಗಳ ಜೊತೆ ಇದೇ ವಿಚಾರಗಳ ಬಗ್ಗೆ ಚರ್ಚಿಸಿದರು.

ತಮಿಳುನಾಡು ಸರ್ಕಾರದ ನಿಯೋಗ ಮತ್ತು ಮುಖ್ಯಮಂತ್ರಿ ಸ್ಟಾಲಿನ್ ಅವರ ಜೊತೆಗೆ ಚರ್ಚಿಸುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಕ್ಷಿಣ ರಾಜ್ಯಗಳ ಪ್ರತಿರೋಧಕ್ಕೆ ತಮ್ಮ ಬೆಂಬಲವೂ ಇರುವುದಾಗಿ ಹೇಳಿದರು.

ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾದ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ, ಸಂವಿಧಾನದ ಒಕ್ಕೂಟ ತತ್ವಕ್ಕೆ ವಿರುದ್ಧವಾದ ಕೇಂದ್ರ ಸರ್ಕಾರದ ಎಲ್ಲಾ ನಡೆಗಳನ್ನೂ ತಾವು ಮುಲಾಜಿಲ್ಲದೆ ಖಂಡಿಸುತ್ತೇವೆ. ಈ ವಿಚಾರದಲ್ಲಿ ಹೋರಾಟಕ್ಕೂ ಬೆಂಬಲ ನೀಡುತ್ತೇವೆ ಎಂದು ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು.

PPeepal Media

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು