ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

SIR ಬಗ್ಗೆ ನಮಗೇನೂ ಭಯವಿಲ್ಲ, ಬಿಜೆಪಿಗೇ ಗೊಂದಲ: ಸತೀಶ್ ಜಾರಕಿಹೊಳಿ

PPeepal Media Desk

Peepal Media Desk ರಾಜಕೀಯ, ರಾಜ್ಯ

• 2 ನಿಮಿಷದ ಓದು

SIR ಬಗ್ಗೆ ನಮಗೇನೂ ಭಯವಿಲ್ಲ, ಬಿಜೆಪಿಗೇ ಗೊಂದಲ: ಸತೀಶ್ ಜಾರಕಿಹೊಳಿ

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ವಿಚಾರದಲ್ಲಿ ನಡೆಯುತ್ತಿರುವ Special Intensive Revision (SIR) ಪ್ರಕ್ರಿಯೆ ಕುರಿತು ನಮಗೇನೂ ಭಯವಿಲ್ಲ. ಬದಲಾಗಿ ಬಿಜೆಪಿಯವರಿಗೇ ಗೊಂದಲ ಉಂಟಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾರರ ಹೆಸರುಗಳನ್ನು ಅಳಿಸಲು ದೊಡ್ಡ ಪ್ರಮಾಣದಲ್ಲಿ Form-7 ಅರ್ಜಿಗಳನ್ನು ನೀಡಲಾಗಿತ್ತು ಎಂದು ಆರೋಪಿಸಿದರು. ಸುಮಾರು 15 ಸಾವಿರ ಮತಗಳನ್ನು ಅಳಿಸುವ ಉದ್ದೇಶದಿಂದ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಕಾಂಗ್ರೆಸ್ ಪ್ರತಿಭಟನೆ ನಡೆಸಿ ಈ ವಿಚಾರವನ್ನು ಗಮನಕ್ಕೆ ತರದಿದ್ದರೆ ಮತ್ತಷ್ಟು ಮತದಾರರ ಹೆಸರುಗಳು ಪಟ್ಟಿಯಿಂದ ಕೈಬಿಡುವ ಸಾಧ್ಯತೆ ಇತ್ತು ಎಂದು ಅವರು ಹೇಳಿದರು.

“ನಾವು ಅಲರ್ಟ್ ಆಗಿದ್ದರಿಂದ ಇದನ್ನು ತಡೆಯಲು ಸಾಧ್ಯವಾಗಿದೆ. ಕಾಂಗ್ರೆಸ್ ದೂರು ದಾಖಲಿಸಿ ಪ್ರತಿಭಟನೆ ನಡೆಸದಿದ್ದರೆ ಬೇರೆ ರಾಜ್ಯಗಳಲ್ಲಿ ನಡೆದ ರೀತಿಯಲ್ಲೇ ಕರ್ನಾಟಕದಲ್ಲಿಯೂ ಮತದಾರರ ಹೆಸರುಗಳನ್ನು ಡಿಲೀಟ್ ಮಾಡುತ್ತಿದ್ದರು” ಎಂದು ಜಾರಕಿಹೊಳಿ ಆರೋಪಿಸಿದರು.

Form-7 ನೀಡಲು ಅಧಿಕಾರ ಕೊಟ್ಟವರು ಯಾರು?
ಬಿಜೆಪಿಯವರಿಗೆ ಸಾವಿರಾರು Form-7 ಅರ್ಜಿಗಳನ್ನು ನೀಡಲು ಅಧಿಕಾರ ನೀಡಿದವರು ಯಾರು ಎಂಬುದನ್ನು ತನಿಖೆ ನಡೆಸಬೇಕು ಎಂದು ಸಚಿವರು ಪ್ರಶ್ನಿಸಿದರು.

ಯಾವುದೋ ಏಜೆನ್ಸಿ ಮೂಲಕ Form-7 ಅರ್ಜಿಗಳನ್ನು ಮುದ್ರಿಸಿ ಹಂಚಲಾಗುತ್ತಿದೆ. ಬಳಿಕ ಅವುಗಳಿಗೆ ಬಿಜೆಪಿಯವರು ಸಹಿ ಹಾಕುತ್ತಿದ್ದಾರೆ ಎಂಬ ಆರೋಪವನ್ನು ಅವರು ಮಾಡಿದರು. ಮೊದಲೇ ಯಾರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಬೇಕು ಎಂಬುದನ್ನು ನಿರ್ಧರಿಸಿ, ಆ ಹೆಸರುಗಳಿಗೆ ಸಂಬಂಧಿಸಿದಂತೆ Form-7 ಸಲ್ಲಿಸಲಾಗುತ್ತಿದೆ ಎಂದು ಅವರು ದೂರಿದರು.

“ಯಾವ ಏಜೆನ್ಸಿ Form-7 ಪ್ರಿಂಟ್ ಮಾಡಿದೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಇದೆಲ್ಲವೂ ಪೂರ್ವನಿಯೋಜಿತವಾಗಿರುವುದು ಗೊತ್ತಾಗುತ್ತಿದೆ. ಕೊಪ್ಪಳದ ಮತದಾರನ Form-7 ಬೆಂಗಳೂರಿನಲ್ಲಿ ಹೇಗೆ ಪ್ರಿಂಟ್ ಆಗುತ್ತದೆ?” ಎಂದು ಸತೀಶ್ ಜಾರಕಿಹೊಳಿ ಪ್ರಶ್ನಿಸಿದರು.

ಕರ್ನಾಟಕದಲ್ಲಿ Form-7 ಬಳಸಿ ಮತದಾರರ ಹೆಸರುಗಳನ್ನು ಅಳಿಸುವ ಕುರಿತು ಕಾಂಗ್ರೆಸ್ ನಾಯಕರು ಈಗಾಗಲೇ ಚುನಾವಣಾ ಅಧಿಕಾರಿಗಳ ಬಳಿ ತನಿಖೆ ಮತ್ತು ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.

ED ನೋಟಿಸ್ ಬಂದಿಲ್ಲ
ತಮ್ಮ ಹಾಗೂ ಆಪ್ತರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ನಡೆದಿದ್ದ ಜಾರಿ ನಿರ್ದೇಶನಾಲಯದ (ED) ಶೋಧ ಕಾರ್ಯಾಚರಣೆ ಕುರಿತು ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಇದುವರೆಗೆ ತನಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಹೇಳಿದರು.

“ನೋಟಿಸ್ ಬಂದಾಗ ಸೂಕ್ತ ರೀತಿಯಲ್ಲಿ ಉತ್ತರಿಸುತ್ತೇನೆ. ನೋಟಿಸ್ ಬಂದರೆ ನಿಮಗಿಂತಲೂ ಮೊದಲು ನಮಗೆ ಗೊತ್ತಾಗುತ್ತದೆ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಸೆಪ್ಟೆಂಬರ್ 9 ಮತ್ತು 10ರಂದು ED, ಸತೀಶ್ ಜಾರಕಿಹೊಳಿ, ಅವರ ಕುಟುಂಬ ಸದಸ್ಯರು ಹಾಗೂ ಆಪ್ತರಿಗೆ ಸಂಬಂಧಿಸಿದ 21 ಸ್ಥಳಗಳಲ್ಲಿ ಶೋಧ ನಡೆಸಿತ್ತು. ಈ ವೇಳೆ ₹3.3 ಕೋಟಿ ಮೌಲ್ಯದ ಅಘೋಷಿತ ಭಾರತೀಯ ಕರೆನ್ಸಿ ಹಾಗೂ ಸುಮಾರು ₹15 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ವಶಪಡಿಸಿಕೊಂಡಿರುವುದಾಗಿ ED ತಿಳಿಸಿತ್ತು. FEMA ಅಡಿಯಲ್ಲಿ ವಿದೇಶಿ ಹೂಡಿಕೆಗಳು, ಗಡಿಯಾಚೆಗಿನ ವ್ಯವಹಾರಗಳು ಹಾಗೂ ಹಣಕಾಸು ಅಕ್ರಮಗಳ ಕುರಿತು ತನಿಖೆ ನಡೆಯುತ್ತಿದೆ ಎಂದು ಸಂಸ್ಥೆ ಹೇಳಿತ್ತು.

PWD ಟೆಂಡರ್‌ಗಳಿಗೆ ಸಂಬಂಧಿಸಿದ ಹಣಕಾಸು ಅಕ್ರಮಗಳು ಹಾಗೂ ಆಫ್ರಿಕಾದಲ್ಲಿನ ಕೆಲವು ಗಣಿಗಾರಿಕೆ ಸಂಸ್ಥೆಗಳಲ್ಲಿ ಹೂಡಿಕೆ ಮಾಡಿರುವ ಕುರಿತು ತನಿಖೆ ನಡೆಯುತ್ತಿದೆ ಎಂಬುದನ್ನೂ ED ಹೇಳಿತ್ತು. ಈ ಆರೋಪಗಳಿಗೆ ಸಂಬಂಧಿಸಿದಂತೆ ಮುಂದಿನ ಕ್ರಮ ತನಿಖೆಯ ದಾಖಲೆಗಳು ಮತ್ತು ಸಂಬಂಧಪಟ್ಟವರ ಪ್ರತಿಕ್ರಿಯೆಗಳ ಆಧಾರದ ಮೇಲೆ ನಡೆಯಲಿದೆ.

ಹೆಲಿಕಾಪ್ಟರ್ ವಿವಾದದ ಬಗ್ಗೆ
ಕಮಿಷನ್ ಹಣದಲ್ಲಿ ಹೆಲಿಕಾಪ್ಟರ್ ಬಳಸಲಾಗಿದೆ ಎಂಬ ವರದಿಗಳ ಕುರಿತು ಪ್ರತಿಕ್ರಿಯಿಸಿದ ಸಚಿವರು, ತಮ್ಮ ವಿರುದ್ಧ ಸುಳ್ಳು ಸುದ್ದಿ ಹರಡುತ್ತಿರುವವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ ಎಂದು ಹೇಳಿದರು.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು