ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

‘ಅಜಿತ್ ಪವಾರ್ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಲಿದ್ದಾರೆ’ ; ಅಚ್ಚರಿ ಮೂಡಿಸಿದ ‘ಸಾಮ್ನಾ’ ವರದಿ

PPeepal Media Desk

Peepal Media Desk • ರಾಜಕೀಯ

• 1 ನಿಮಿಷದ ಓದು

‘ಅಜಿತ್ ಪವಾರ್ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಲಿದ್ದಾರೆ’ ; ಅಚ್ಚರಿ ಮೂಡಿಸಿದ ‘ಸಾಮ್ನಾ’ ವರದಿ

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಮಹಾರಾಷ್ಟ್ರದ ಎನ್ಸಿಪಿ ನಾಯಕ ಅಜಿತ್ ಪವಾರ್ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇತ್ತ ಇದನ್ನೇ ಉಲ್ಲೇಖಿಸಿ ಶಿವಸೇನೆಯ ಮುಖವಾಣಿ ಸಾಮ್ನಾ ಪತ್ರಿಕೆಯು ಎನ್‌ಸಿಪಿಯ ಅಜಿತ್‌ ಪವಾರ್‌ ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ಹೇಳಿಕೆಯನ್ನು ನೀಡಿ ಮಹಾರಾಷ್ಟ್ರ ರಾಜ್ಯದ ರಾಜಕೀಯ ಬೆಳವಣಿಗೆಯಲ್ಲಿ ಅಚ್ಚರಿ ಹುಟ್ಟಿಸಿದೆ.

ಭಾನುವಾರದ ದಿನ ಸುಮಾರು 40 ಶಾಸಕರ ಬಲಾಬಲದೊಂದಿಗೆ ಅಜಿತ್ ಪವಾರ್, ಏಕನಾಥ್ ಶಿಂಧೆ ಸರ್ಕಾರಕ್ಕೆ ಬೆಂಬಲ ಸೂಚಿಸಿದ ಹಿನ್ನೆಲೆಯಲ್ಲಿ NCP ಪಕ್ಷ, NDA ಜೊತೆಗೆ ಅಧಿಕೃತವಾಗಿ ಗುರುತಿಸಿಕೊಂಡಂತಾಗಿದೆ. ಇತ್ತ ಶಿವಸೇನೆಯ ಮುಖವಾಣಿ ‘ಸಾಮ್ನಾ’ ಮಾಡಿದ ವರದಿ ಈಗ ಮಹಾರಾಷ್ಟ್ರ ಭಾಗದಲ್ಲಿ ಹೆಚ್ಚು ಚರ್ಚಿತ ವಿಚಾರವಾಗಿದೆ. ಇದಕ್ಕೆ ಸರಿಯಾಗಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾದ ದೇವೇಂದ್ರ ಫಡ್ನವೀಸ್ ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ‘ಸಾಮ್ನಾ’ ವರದಿಗೆ ಸರಿಯಾದ ಬೆಳವಣಿಗೆ ಎಂದೇ ರಾಜಕೀಯ ವಲಯದ ಚರ್ಚೆಯಾಗಿದೆ.

ಇತ್ತ ಬಿಜೆಪಿ ಜೊತೆಗೆ ಗುರುತಿಸಿಕೊಂಡು ಬಹುತೇಕ ಬಹುಮತದೊಂದಿಗೆ ಸರ್ಕಾರ ರಚಿಸಿದ ಏಕನಾಥ್ ಶಿಂಧೆಗೂ ಸಹ ಅಜಿತ್ ಪವಾರ್ ಬೆಂಬಲಿಗ ಶಾಸಕರ ಬೆಂಬಲ ಅನಗತ್ಯವಾಗಿತ್ತು. ಆ ಹಿನ್ನೆಲೆಯಲ್ಲಿ ಏಕನಾಥ್ ಶಿಂಧೆಗೂ ಸಹ ಅಜಿತ್ ಪವಾರ್ ಬೆಂಬಲದಿಂದ ಅಸಮಾಧಾನ ಇದೆ ಎಂದಂತಾಗಿದೆ.

ಒಂದರ್ಥದಲ್ಲಿ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಸೇರ್ಪಡೆ ಆಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆ ಮುಂದಿನ ದಿನಗಳಲ್ಲಿ ಅನಿರೀಕ್ಷಿತ ಘಟ್ಟಕ್ಕೆ ತಲುಪುವ ಸಾಧ್ಯತೆ ಬಂದರೂ ಅಚ್ಚರಿ ಇಲ್ಲ. ಈ ಹಿನ್ನೆಲೆಯಲ್ಲಿ ಅವರು ತಮ್ಮ ಪಕ್ಷದ ಮುಖಂಡರ ಸಭೆಯನ್ನು ಇಂದು ಸಂಜೆ ಕರೆದಿದ್ದಾರೆ. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಹೊಂದಿರುವ ಎನ್‌ಸಿಪಿ ನಾಯಕರನ್ನು ಬಿಜೆಪಿಗೆ ಸೇರಿಸಿಕೊಂಡಿರುವುದು ಏಕನಾಥ್‌ ಶಿಂಧೆ ಬಳಗಕ್ಕೆ ಆಕ್ರೋಶ ತರಿಸಿದೆ ಎಂದು ಹೇಳಲಾಗುತ್ತಿದೆ.

ಇತ್ತ NCP ನಾಯಕ ಶರದ್ ಪವಾರ್ ಸಹ ಈ ಬೆಳವಣಿಗೆಯಿಂದ ನನಗೆ ಯಾವ ಆಘಾತವೂ ಆಗಿಲ್ಲ. ಹಿಂದೆ 6 ಶಾಸಕರ ಬಲ ಹೊಂದಿದ್ದ ನನಗೆ ಈಗ ಈ ಮಟ್ಟಕ್ಕೆ ಪಕ್ಷ ಬೆಳೆಸಿದ್ದೇನೆ. ಮುಂದೆಯೂ ಕೂಡಾ ಪಕ್ಷವನ್ನು ಸದೃಢವಾಗಿ ಕಟ್ಟಲು ನನಗೆ ಶಕ್ತಿ ಇದೆ ಎಂದು ಹೇಳಿದ್ದಾರೆ. ಇದರ ಜೊತೆಗೆ ಶಾಸಕರ ಮೇಲಿನ ಶಿಸ್ತು ಕ್ರಮ ನನ್ನ ವ್ಯಾಪ್ತಿಗೆ ಬರುವಂತದ್ದಲ್ಲ. ಅದನ್ನು ರಾಜ್ಯ ಘಟಕದ ಮುಖ್ಯಸ್ಥರಾದ ಜಯಂತ್ ಪಾಟೀಲ್ ತಗೆದುಕೊಳ್ಳಲಿದ್ದಾರೆ ಎಂದೂ ಸ್ಪಷ್ಟಪಡಿಸಿದ್ದಾರೆ.

ಇನ್ನು ಮಹಾರಾಷ್ಟ್ರದ ವಿರೋಧ ಪಕ್ಷದ ಸ್ಥಾನವನ್ನು ಕಾಂಗ್ರೆಸ್ ವಹಿಸಿಕೊಳ್ಳಲಿದೆ. ಪಕ್ಷದ ಬಲಾಬಲದ ಆಧಾರದಲ್ಲಿ ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನಕ್ಕೆ ಬಂದು ಕೂರಲಿದೆ ಎಂಬ ಸುಳಿವನ್ನು ಶರದ್ ಪವಾರ್ ನೀಡಿದ್ದಾರೆ. ಜೊತೆಗೆ ಪ್ರತಿಪಕ್ಷದ ಸ್ಥಾನಕ್ಕೆ ಕಾಂಗ್ರೆಸ್ ಕೂರುವುದಾದರೆ ನನ್ನ ಬೆಂಬಲವಿದೆ ಎಂದೂ ಸಹ ಶರದ್ ಪವಾರ್ ತಿಳಿಸಿದ್ದಾರೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು