ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜ್ಯದಲ್ಲಿ ಬರಗಾಲ ಎದುರಾಗಿದೆ ಕೃಷಿ ಮಂತ್ರಿ ಎಲ್ಲಿ – ಆರ್‌.ಅಶೋಕ್‌ ಕಿಡಿ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜಕೀಯ, ರಾಜ್ಯ

• 1 ನಿಮಿಷದ ಓದು

ರಾಜ್ಯದಲ್ಲಿ ಬರಗಾಲ ಎದುರಾಗಿದೆ ಕೃಷಿ ಮಂತ್ರಿ ಎಲ್ಲಿ – ಆರ್‌.ಅಶೋಕ್‌ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಮುಂಗಾರು ಕ್ಷೀಣದ ಭೀತಿ, ಇನ್ನೊಂದೆಡೆ ಕೃಷಿ ಸಚಿವರೇ ಇಲ್ಲದ ಅನಾಥ ಪರಿಸ್ಥಿತಿ ಎದುರಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕಮಿಷನ್ ಮಾಸ್ಟರ್ ಡಿ.ಕೆ.ಶಿವಕುಮಾರ್ ಅವರೇ, ರಾಜ್ಯದಲ್ಲಿ ಬರಗಾಲ ಎದುರಿಸಲು ಸಜ್ಜಾಗಿ ಎಂದು ಮಾಧ್ಯಮಗಳಿಗೆ ಪೋಸ್ ಕೊಟ್ಟರೆ ಏನೂ ಪ್ರಯೋಜನವಿಲ್ಲ. ನೀವೇ ಒಪ್ಪಿಕೊಂಡಿರುವಂತೆ ರಾಜ್ಯದಲ್ಲಿ ಇನ್ನೂ ಶೇ.೩೦ ರಷ್ಟು ಮಳೆಯೂ ಆಗಿಲ್ಲ. ಪರಿಸ್ಥಿತಿ ಹೀಗಿರುವಾಗ ಬರೀ ಎಸಿ ಕೋಣೆಯಲ್ಲಿ ಕೂತು ಕಾಟಾಚಾರದ ಸಭೆ ನಡೆಸಿದರೆ, ಮಾಧ್ಯಮಗಳಿಗೆ ಒಂದು ಹಾರಿಕೆ ಹೇಳಿಕೆ ಕೊಟ್ಟುಬಿಟ್ಟರೆ ಬರ ನೀಗುತ್ತದೆಯೇ ಎಂದು ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ. ಬರಗಾಲ ಎದುರಿಸೋಕೆ, ರೈತರ ಕಷ್ಟ ಕೇಳೋಕೆ ರಾಜ್ಯದಲ್ಲಿ ಕೃಷಿ ಸಚಿವರು ಎಲ್ಲಿದ್ದಾರೆ ಸ್ವಾಮಿ ಎಂದು ಕೇಳಿರುವ ಅವರು, ಬರಪೀಡಿತ ತಾಲೂಕುಗಳಲ್ಲಿ ಜನ-ಜಾನುವಾರುಗಳು ಕುಡಿಯುವ ನೀರಿಲ್ಲದೆ ತತ್ತರಿಸುತ್ತಿವೆ.

ಈ ತಾಪತ್ರಯ ವಿಚಾರಿಸಬೇಕಾದ ನಿಮ್ಮ ಜಿಲ್ಲಾ ಉಸ್ತುವಾರಿ ಮಂತ್ರಿಗಳು ಎಲ್ಲಿದ್ದಾರೆ ಸ್ವಾಮಿ ಎಂದು ಪ್ರಶ್ನಿಸಿದ್ದಾರೆ. ನಿಮ್ಮದೇ ಶಾಸಕರ ಮುನಿಸು, ಆಂತರಿಕ ಅಸಮಾಧಾನವನ್ನು ಎದುರಿಸಲಾಗದೆ ಮುಕ್ಕಾಲು ಸಂಪುಟವನ್ನು ಖಾಲಿ ಇಟ್ಟುಕೊಂಡಿರುವ ತಾವು, ರಾಜ್ಯದ ಬರಗಾಲ ಪರಿಸ್ಥಿತಿಯನ್ನು ಹೇಗೆ ಎದುರಿಸುತ್ತೀರಿ ಎಂದು ಕನ್ನಡಿಗರು ಹೇಗೆ ತಾನೇ ನಂಬಿಯಾರು ಎಂದು ಕಾಲೆಳೆದಿದ್ದಾರೆ.

ವಿಷಯಗಳು: #karnataka #news #state politics
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು