ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಆಗಲೇಬೇಕು : ಕಾರ್ಮಿಕ ಮುಖಂಡ ಮೀನಾಕ್ಷಿ ಸುಂದರಂ

PPeepal Media Desk

Peepal Media Desk ಮೀಡಿಯಾ, ರಾಜಕೀಯ, ರಾಜ್ಯ

• 1 ನಿಮಿಷದ ಓದು

ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಆಗಲೇಬೇಕು : ಕಾರ್ಮಿಕ ಮುಖಂಡ ಮೀನಾಕ್ಷಿ ಸುಂದರಂ

ರಾಜ್ಯದಲ್ಲಿ ನವೆಂಬರ್ ಕ್ರಾಂತಿಯ ಬಗ್ಗೆ ಚರ್ಚೆ ನಡೆಯುತ್ತಿದೆ. ಸಿದ್ದರಾಮಯ್ಯ ಕುರ್ಚಿ ಬಿಟ್ಟು ಕೊಟ್ಟು ಡಿ ಕೆ ಶಿವಕುಮಾರ್ ಮುಖ್ಯಮಂತ್ರಿ ಆಗ್ತಾರೋ ? ಸರ್ಕಾರ ಬಿದ್ದು ಬಿಜೆಪಿ ಅಧಿಕಾರಕ್ಕೆ ಬರುತ್ತೋ ಎಂಬುದು ನವೆಂಬರ್ ಕ್ರಾಂತಿಯಲ್ಲ. ನವೆಂಬರ್ 1 ರಿಂದ ಜಾರಿಗೆ ಬಂದಿರುವ ಲೇಬರ್ ಕೋಡ್ (ಕಾರ್ಮಿಕ ಸಂಹಿತೆ)ಯನ್ನು ಕೇರಳದ ಮಾದರಿಯಲ್ಲಿ ಕಸದ ಬುಟ್ಟಿಗೆ ಎಸೆಯುವ ಕ್ರಾಂತಿ ನಡೆಯಬೇಕಿದೆ ಎಂದು ಕಾರ್ಮಿಕ ಮುಖಂಡ ಮೀನಾಕ್ಷಿ ಸುಂದರಂ ಹೇಳಿದರು.

ಇಂದು ಸಿಪಿಐಎಂ ವತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ನಡೆದ ಜನದನಿ ರ‌್ಯಾಲಿಯಲ್ಲಿ ಅವರು ಮಾತನಾಡುತ್ತಿದ್ದರು.

“ಭಾರತ ಸರ್ಕಾರವು ‘ಶಾಂತಿ ಕಾಯ್ದೆ’ಯನ್ನು ತಂದಿದೆ‌. SHANTI Bill ಪರಮಾಣು ಶಕ್ತಿ ಕ್ಷೇತ್ರದ ಖಾಸಗೀಕರಣವನ್ನು ಬೆಂಬಲಿಸುತ್ತದೆ. ಈ ಮೂಲಕ ಪರಮಾಣು ಶಕ್ತಿ ಕ್ಷೇತ್ರದಲ್ಲಿ ಖಾಸಗಿ ವಲಯದ ಪಾತ್ರವನ್ನು ವಿಸ್ತರಿಸುವ ಉದ್ದೇಶವಿದೆ. ಈ ಕ್ಷೇತ್ರದ ಸ್ವಭಾವವೇ ಅತಿ ಸಂವೇದನಾಶೀಲವಾದುದರಿಂದ ಹಲವು ಗಂಭೀರ ಅಪಾಯಗಳು ಎದುರಾಗಬಹುದು.‌ ಪರಮಾಣು ಸ್ಥಾವರಗಳ ಅಪಘಾತಗಳ ಹೊಣೆಗಾರಿಕೆ ಪ್ರಶ್ನೆಗೆ ಸರ್ಕಾರ ಉತ್ತರ ನೀಡಬೇಕಿದೆ‌.  ಪರಮಾಣು ಅಪಘಾತಗಳ ಪರಿಣಾಮಗಳು ದೀರ್ಘಕಾಲಿಕ ಮತ್ತು ಭೀಕರ. ಅಪಘಾತವಾದರೆ ಯಾರು ಹೊಣೆ? ಉದ್ಯೋಗದ ಖಾತರಿಯೂ ಇರುವುದಿಲ್ಲ ಖಾಸಗಿಕರಣದಿಂದಾಗಿ  ಕಂಪನಿಗಳು ಎಲ್ಲಾ ಹೊಣೆಗಳಿಂದ ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ. ಅಂತಿಮವಾಗಿ ಸರ್ಕಾರ ಮತ್ತು ಜನರ ಮೇಲೇ ಹೊರೆ ಬೀಳುವ ಅಪಾಯ ಇದೆ” ಎಂದರು.

“ಕೇಂದ್ರ ಸರ್ಕಾರ ಕಾರ್ಮಿಕ ಸಂಹಿತೆಗಳನ್ನು ತಂದಿದೆ‌‌. ಆ ಮೂಲಕ ಕಾರ್ಮಿಕರಿಗೆ ಅನ್ಯಾಯ ಆದರೆ ಅದರ ವಿರುದ್ದ ದ್ವನಿಗೂಡಿಸುವ ಅವಕಾಶ ಇಲ್ಲ. ಮುಷ್ಕರ ಹೂಡುವ ಅವಕಾಶವೂ ಇಲ್ಲ. ಎಷ್ಟು ಬೇಕಾದರೂ ಶೋಷಣೆ ಮಾಡಬಹುದು ಎನ್ನುದನ್ನು ಲೇಬರ್ ಕೋಡ್ ಹೇಳುತ್ತದೆ‌. ಕಾರ್ಮಿಕರಿಗೆ ರಕ್ಷಣೆ ಕೊಡದೇ ಇರುವ ಸಂಹಿತೆಗೆ ಕಾರ್ಮಿಕ ಸಂಹಿತೆ ಎಂದು ಹೆಸರು ನೀಡಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು. 

“ಕಾರ್ಮಿಕ ಸಂಹಿತೆಯನ್ನು ಜಾರಿ ಮಾಡದಿರಲು ಪಿನರಾಯಿ ವಿಜಯನ್ ನೇತೃತ್ವದ ಕೇರಳ ಸರ್ಕಾರ ಘೋಷಿಸಿದೆ. ಕಾರ್ಮಿಕ ಹಕ್ಕು ಎನ್ನುವುದು ಬಿಕ್ಷೆ ಅಲ್ಲ, ಕಾರ್ಮಿಕರು ಹೋರಾಟದ ಮೂಲಕ ಪಡೆದುಕೊಂಡ ಹಕ್ಕು ಎಂದು ಕೇರಳ ಸರ್ಕಾರ ಹೇಳಿದೆ. ಕರ್ನಾಟಕ ರಾಜ್ಯ ಸರ್ಕಾರ ಯಾಕೆ ಕೇರಳ ಮಾಧರಿಯಲ್ಲಿ ಕಾರ್ಮಿಕ ಸಂಹಿತೆ ವಿರುದ್ದ ನಿಲುವು ತೆಗೆದುಕೊಳ್ಳುವುದಿಲ್ಲ ? ಕರ್ನಾಟಕ ರಾಜ್ಯದ ವಿಧಾನಸಭೆಯಲ್ಲಿ ಕಾರ್ಮಿಕ ಸಂಹಿತೆಯ ಬಗ್ಗೆ ಚರ್ಚೆಯೇ ಆಗಿಲ್ಲ. ಕಾರ್ಮಿಕ ಮತ್ತು ಆರ್ಥಿಕ‌ ನೀತಿಗಳಲ್ಲಿ ಕಾಂಗ್ರೆಸ್ ಗೂ ಬಿಜೆಪಿಗೂ ಯಾವುದೇ ವ್ಯತ್ಯಾಸ ಇಲ್ಲ ಎಂದರ್ಥ” ಎಂದು ಮೀನಾಕ್ಷಿ ಸುಂದರಂ ಹೇಳಿದರು.

ಆರ್ಥಿಕ ನೀತಿಗಳ ವಿಷಯದಲ್ಲಿ ಕಾಂಗ್ರೆಸ್ ಗೆ ಬಿಜೆಪಿ ಪರ್ಯಾಯವಲ್ಲ. ಬಿಜಪಿಗೆ ಕಾಂಗ್ರೆಸ್ ಪರ್ಯಾಯವಲ್ಲ. ಕಾಂಗ್ರೆಸ್ ಬಿಜೆಪಿ ಪಕ್ಷಗಳಿಗೆ ಜೆಡಿಎಸ್ ಪರ್ಯಾಯ ಅಲ್ಲವೆ ಅಲ್ಲ. ಪರ್ಯಾಯವಾಗಬೇಕಿರುವುದು ಎಡಪ್ರಜಾಸತ್ತಾತ್ಮಾಕ ಪರ್ಯಾಯ ರಾಜಕಾರಣ ಮಾತ್ರ. ರೈತರ ಭೂಸ್ವಾಧೀನದ ಪ್ರಶ್ನೆ , ಅಂಗನವಾಡಿ, ಬಿಸಿಯೂಟ, ಪಂಚಾಯತ್ ನೌಕರರು, ಅಸಂಘಟಿತ ಕಾರ್ಮಿಕರು, ಹಮಾಲಿ ಕಾರ್ಮಿಕರ ಶೋಷಣೆ ತಡೆಯಲು ಆಗದ ಸರ್ಕಾರ ರಾಜ್ಯದಲ್ಲಿದೆ ಎಂದು ಮೀನಾಕ್ಷಿ ಸುಂದರಂ ಹೇಳಿದರು.

ನವೆಂಬರ್ ಕ್ರಾಂತಿಯೆಂದರೆ ಡಿಕೆಶಿ ಸಿಎಂ ಆಗುವುದೋ, ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳುವುದೊ ಅಲ್ಲ.  ಒಂದು ಮುಕ್ಕಾಲು ಕೋಟಿ ಜನರಿಗೆ ಕನಿಷ್ಟ ಕೂಲಿ ಸಿಗುವುದೇ ನಿಜವಾದ ಕ್ರಾಂತಿ. ಇದನ್ನೇ ಪರ್ಯಾಯ ರಾಜಕಾರಣ ಎನ್ನುತ್ತೇವೆ ಎಂದು ಕಾರ್ಮಿಕ ಮುಖಂಡ ಮೀನಾಕ್ಷಿ ಸುಂದರಂ ಹೇಳಿದರು.

PPeepal Media Desk

Peepal Media Desk

Peepal Media · ಮೀಡಿಯಾ ವಿಭಾಗ

ಸಂಬಂಧಿತ ಸುದ್ದಿಗಳು