ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮೋದಿಯ ಕುರಿತಾದ ಒಳ್ಳೆಯ ಮಾತುಗಳು ನಾನು ಬಿಜೆಪಿ ಸೇರುತ್ತಿರುವುದರ ಸಂಕೇತವಲ್ಲ: ಶಶಿ ತರೂರ್‌

P

Peepal Media • ರಾಜಕೀಯ

• 1 ನಿಮಿಷದ ಓದು

ಮೋದಿಯ ಕುರಿತಾದ ಒಳ್ಳೆಯ ಮಾತುಗಳು ನಾನು ಬಿಜೆಪಿ ಸೇರುತ್ತಿರುವುದರ ಸಂಕೇತವಲ್ಲ: ಶಶಿ ತರೂರ್‌

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಪದೇ ಪದೇ ಹೊಗಳುವ ಮೂಲಕ ತನ್ನ ಪಕ್ಷವನ್ನು ಮುಜುಗರಕ್ಕೆ ಸಿಲುಕಿಸುತ್ತಿರುವ ಶಶಿ ತರೂರ್‌ ಇದೀಗ ಮಾಧ್ಯಮಗಳ ಪಾಲಿನ ಆಸಕ್ತಿಯ ಕೇಂದ್ರವಾಗಿ ಬದಲಾಗಿದ್ದಾರೆ.

ಇದೀಗ ತನ್ನ ಮೋದಿ ಹೊಗಳಿಕೆಯ ಕುರಿತಾಗಿ ಪ್ರತಿಕ್ರಿಯಿಸಿರುವ ತರೂರ್‌ ತನ್ನ ಹೊಗಳಿಕೆಗಳನ್ನು ತಾನು ಬಿಜೆಪಿ ಸೇರುವುದರ ಸಂಕೇವಾಗಿ ಭಾವಿಸಬಾರದು ಎಂದು ಹೇಳಿದ್ದಾರೆ.

ಇತ್ತೀಚೆಗೆ, ಮೋದಿ ಸರ್ಕಾರದ ವಿದೇಶಾಂಗ ನೀತಿಗಳನ್ನು ಹೊಗಳಿ ಅವರು ಇಂಗ್ಲಿಷ್ ನಿಯತಕಾಲಿಕೆಯಲ್ಲಿ ಬರೆದ ಲೇಖನವು ಚರ್ಚೆಯ ವಿಷಯವಾಗಿದೆ. ಅವರು ಬಿಜೆಪಿ ಸೇರುವುದು ಖಚಿತ ಎಂಬ ಊಹಾಪೋಹಗಳು ಜೋರಾಗಿವೆ. ಅದರಲ್ಲೂ ಮೋದಿ ಸರ್ಕಾರದ ವಿದೇಶಾಂಗ ನೀತಿಯನ್ನು ವಿರೋಧ ಪಕ್ಷವಾದ ಕಾಂಗ್ರೆಸ್‌ ಹಾಗೂ ಅದರ ನಾಯಲ ರಾಹುಲ್‌ ಗಾಂಧಿ ಕಟುವಾಗಿ ಟೀಕಿಸುತ್ತಿರುವಾಗಲೇ ತರೂರ್‌ ಇಂತಹದದ್ದೊಂದು ಲೇಖನ ಬರೆದಿದ್ದು ಪಕ್ಷಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿತ್ತು.

ಈ ಕುರಿತು ಪ್ರತಿಕ್ರಿಯಿಸಿರುವ ತರೂರ್‌ “ಆಪರೇಷನ್ ಸಿಂಧೂರ್‌ನ ಯಶಸ್ಸನ್ನು ಆ ಲೇಖನ ವಿವರಿಸಿದೆ. ಇದು ಎಲ್ಲಾ ಪಕ್ಷಗಳ ಒಗ್ಗಟ್ಟಿನ ಬಗ್ಗೆ ಮಾತನಾಡುತ್ತದೆ. ಪ್ರಧಾನಿ ಮೋದಿ ಇತರ ದೇಶಗಳೊಂದಿಗೆ ಸಂಬಂಧಗಳನ್ನು ಬಲಪಡಿಸುವಲ್ಲಿ ಶಕ್ತಿ ಮತ್ತು ಚೈತನ್ಯವನ್ನು ತೋರಿಸಿದ್ದಾರೆ ಎಂದು ನಾನು ಹೇಳಿದೆ. ನಾನು ಕಾಂಗ್ರೆಸ್‌ ಅಥವಾ ಬಿಜೆಪಿಯ ವಿದೇಶಾಂಗ ನೀತಿಯ ಕುರಿತು ಮಾತನಾಡಿಲ್ಲ. ನಾನು ಮಾತನಾಡಿದ್ದು ಭಾರತದ ವಿದೇಶಾಂಗ ನೀತಿಯ ಕುರಿತು. 11 ವರ್ಷಗಳ ಹಿಂದೆ ನಾನು ಸಂಸತ್ತಿನ ವಿದೇಶಾಂಗ ವ್ಯವಹಾರಗಳ ಸಮಿತಿಯ ಅಧ್ಯಕ್ಷನಾಗಿದ್ದಾಗಲೂ ಇದೇ ವಿಷಯವನ್ನು ಉಲ್ಲೇಖಿಸಿದ್ದೆ” ಎಂದು ಹೇಳಿದ್ದಾರೆ.


P

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version