ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಿದ್ಯಾರ್ಥಿಗಳಲ್ಲಿ ಜ್ಞಾನ ದಾಹ ಮತ್ತು ವಿವೇಕದ ಹಸಿವು “ಜ್ವರ” ದಂತೆ ಕಾಡಬೇಕು: ಕೆ.ವಿ.ಪ್ರಭಾಕರ್

PPeepal Media Desk

Peepal Media Desk ಮೀಡಿಯಾ, ರಾಜಕೀಯ, ರಾಜ್ಯ

• 2 ನಿಮಿಷದ ಓದು

ವಿದ್ಯಾರ್ಥಿಗಳಲ್ಲಿ ಜ್ಞಾನ ದಾಹ ಮತ್ತು ವಿವೇಕದ ಹಸಿವು “ಜ್ವರ” ದಂತೆ ಕಾಡಬೇಕು: ಕೆ.ವಿ.ಪ್ರಭಾಕರ್

ಮಲೆಮಹದೇಶ್ವರ ಬೆಟ್ಟೆ ಜೂ 21: ಕಲಿಯುವ ವಯಸ್ಸಿನಲ್ಲಿ ವಿದ್ಯಾರ್ಥಿಗಳಲ್ಲಿ ಜ್ಞಾನದ ದಾಹ ಮತ್ತು ಕಲಿಕೆಯ ಹಂಬಲ ಜ್ವರದಂತೆ ಕಾಡಬೇಕು.

ಪ್ರತಿಭೆ ಅಂದರೆ ಕೇವಲ ಪರೀಕ್ಷಾ ಫಲಿತಾಂಶ ಅಲ್ಲ. ಜ್ಞಾನ ಮತ್ತು ನಿರಂತರ ಸಾಧನೆ ಮತ್ತು ನೀವು ಪಟ್ಟ ಪರಿಶ್ರಮ ಮೂರೂ ಬೆರೆತ ಮಿಶ್ರಣ.

ಇಂದು ಪ್ರತಿಭಾ ಪುರಸ್ಕಾರ ಸ್ವೀಕರಿಸುತ್ತಿರುವ ಎಲ್ಲಾ ಮಕ್ಕಳಿಗೂ ಎಲ್ಲಾ ಪೋಷಕರ ಪರವಾಗಿ ನಾನು ಅಭಿನಂದನೆ ಸಲ್ಲಿಸುತ್ತೇನೆ.

ಇವತ್ತು ಶಿಕ್ಷಣ ವ್ಯವಸ್ಥೆ ಹೇಗಾಗಿದೆ, ಎಷ್ಟು ದುಬಾರಿ ಆಗಿದೆ‌ ಎಂದರೆ, ಪೋಷಕರು ಸದಾ ಮಕ್ಕಳ ಶಿಕ್ಷಣದ ಬಗ್ಗೆಯೇ ಯೋಚಿಸುವಂತಾಗಿದೆ. ಮಕ್ಕಳ ಶಿಕ್ಷಣ ಮತ್ತು ಭವಿಷ್ಯಕ್ಕಾಗಿ ಪೋಷಕರು ತಮ್ಮ ಅಗತ್ಯ ಮತ್ತು ಅನುಕೂಲಗಳ ಜೊತೆ ರಾಜಿ ಮಾಡಿಕೊಳ್ಳುತ್ತಾರೆ. ಪೋಷಕರ ಈ ತಪಸ್ಸಿಗೆ ಸಾರ್ಥಕತೆ ಬರುವುದು ಅವರ ಮಕ್ಕಳು ಸಾಧನೆ ಮಾಡಿದಾಗ, ಮಕ್ಕಳ  ಪ್ರತಿಭಾ ಪುರಸ್ಕಾರವನ್ನು ಕಣ್ಣಲ್ಲಿ ಕಾಣುವ ಪೋಷಕರಿಗೆ ಇದಕ್ಕಿಂತ ದೊಡ್ಡ ಸಮಾಧಾನ ಬೇರೆ ಇರುವುದಿಲ್ಲ. ಜೊತೆಗೆ ಮಕ್ಕಳು ಪರಿಶ್ರಮದಿಂದ ಕಲಿತರೆ ಪೋಷಕರ ಮೇಲಿನ ಆರ್ಥಿಕ ಹೊರೆಯೂ ಕಡಿಮೆ ಆಗುತ್ತದೆ. ಆರ್ಥಿಕ ಹೊರೆ ಕಡಿಮೆ ಇದ್ದಾಗ ಸಹಜವಾಗಿ ಪೋಷಕರ ಆರೋಗ್ಯ ಮತ್ತು ಮನೆಯ ಆರೋಗ್ಯವೂ ಚನ್ನಾಗಿರುತ್ತದೆ. ಹೀಗಾಗಿ SSLC ಮತ್ತು PUC ದಾಟಿದ ನಿಮ್ಮಗಳ ಮೇಲೆ ಪೋಷಕರನ್ನು ಖುಷಿಯಾಗಿಡುವ ಜವಾಬ್ದಾರಿ ಇರುತ್ತದೆ. ನಿಮ್ಮ ಪರಿಶ್ರಮ ಮತ್ತು ಜ್ಞಾನದಾಹ ಹಾಗೂ ಕಲಿಕೆಯ ಹಸಿವು ಹೆಚ್ಚಾಗಬೇಕು. ಈ ದಾಹ ಮತ್ತು ಹಸಿವು ನಿಮಗೆ ಜ್ವರದಂತೆ ಕಾಡಬೇಕು.

ಇಲ್ಲಿ ಪ್ರತಿಭಾ ಸ್ವೀಕಾರಕ್ಕೆ ಬಂದಿರುವ ಮಕ್ಕಳ ಜೊತೆ ಎರಡು ವಿಚಾರಗಳನ್ನು ಹಂಚಿಕೊಳ್ಳಲು ಬಯಸುತ್ತೇನೆ.

ಒಂದು, ನಮ್ಮ ಎಲ್ಲಾ ಸಾಧನೆಗಳಿಗೂ ನಾವು ಬದುಕುತ್ತಿರುವ ಸಮಾಜದ ಕೊಡುಗೆ ಇರುತ್ತದೆ.

ಪರೀಕ್ಷಾ ಫಲಿತಾಂಶದ ಜೊತೆ ಸಾಮಾಜಿಕ ಜೀವನದ ಫಲಿತಾಂಶವೂ ಅಷ್ಟೇ ಮುಖ್ಯವಾಗಲಿ
ಸಮಾಜ ಎಂದರೆ ಶರೀರ ಇದ್ದ ಹಾಗೆ. ನಾವು ಈ ಶರೀರದೊಳಗೆ ಬದುಕುತ್ತಿದ್ದೇವೆ. ನಾವು ಇರುವ ಶರೀರವನ್ನು ಕಟ್ಟುಮಸ್ತಾಗಿ, ಆರೋಗ್ಯಕರವಾಗಿ, ಆನಂದಮಯವಾಗಿ ಇಟ್ಟುಕೊಳ್ಳುವುದೇ ನಮ್ಮ ಪ್ರತಿಭೆಗೆ, ನಮ್ಮ ಸಾಧನೆಗೆ ಸಿಗುವ ನಿಜವಾದ ಪುರಸ್ಕಾರ ಎಂದು ಭಾವಿಸುತ್ತೇನೆ.

ಎರಡು, ಇಂದು ಸಮಾಜದಲ್ಲಿ ಭ್ರಷ್ಟಾಚಾರ ಇರುವುದಕ್ಕೆ ಮುಖ್ಯ ಕಾರಣ ಆರೋಗ್ಯ ಮತ್ತು ಶಿಕ್ಷಣ ಅತ್ಯಂತ ದುಬಾರಿ ಆಗಿರುವುದೇ ಕಾರಣ ಆಗಿದೆ. ಮಕ್ಕಳ ಓದಿನ ಖರ್ಚು, ಹಿರಿಯರ ಆಸ್ಪತ್ರೆ ಖರ್ಚು ನಮ್ಮ ನಿದ್ದೆಗೆಡಿಸುತ್ತದೆ. ಸಮಾಜದಲ್ಲಿ ಇದು ಬದಲಾಗಬೇಕು. ಈ ಬದಲಾವಣೆಗೆ ಪೂರಕವಾಗಿ ನೀವುಗಳು ವಿದ್ಯಾರ್ಥಿ ಜೀವನದಿಂದಲೇ ಯೋಚಿಸಬೇಕು. ನಾವು ಬದುಕುತ್ತಿರುವ ಸಮಾಜವೆಂಬ ಈ ಶರೀರ ಇನ್ನಷ್ಟು ಆನಂದವಾಗಿರಲು, ಇನ್ನಷ್ಟು ಆರೋಗ್ಯಕರವಾಗಿರಲು ನಾವೇನು ಮಾಡಬೇಕು ಎನ್ನುವ ದಿಕ್ಕಿನಲ್ಲಿ ಸದಾ ಚಿಂತನಾಶೀಲರಾಗಿರಬೇಕು. ಈ ಚಿಂತನಶೀಲತೆ ನಮ್ಮ ಜ್ಞಾನ ದಾಹ ಮತ್ತು ವಿವೇಕದ ಹಸಿವನ್ನು ಹೆಚ್ಚಿಸುತ್ತದೆ.

ಈ ಎರಡು ಸಂಗತಿಗಳನ್ನು ಮಕ್ಕಳ ಜೊತೆ ಹಂಚಿಕೊಳ್ಳುವುಕ್ಕಾಗಿ ಮತ್ತು ಪೋಷಕರನ್ನು ವೃದ್ದಾಶ್ರಮಗಳಿಗೆ ಕಳುಹಿಸದಂತೆ ನಾವು ಜವಾಬ್ದಾರರಾಗಬೇಕು ಎನ್ನುವ ನನ್ನ ಕೋರಿಕೆಗಳನ್ನು ನಿಮ್ಮ ಮುಂದೆ ಇಡಲು ನಾನು ಇಲ್ಲಿಗೆ ಬಂದಿದ್ದೇನೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸತತ ಐದನೇ ವರ್ಷ ಈ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಿದೆ. ಇದಕ್ಕಾಗಿ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪದಾಧಿಕಾರಿಗಳನ್ನೂ  ನಾನು ಅಭಿನಂದಿಸುತ್ತೇನೆ ಎಂದರು.

ಜುಲೈ 1 ಕ್ಕೆ ಪತ್ರಕರ್ತರಿಗೆ ಉಚಿತ ಬಸ್ ಪಾಸ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರ ವೃತ್ತಿ ಮತ್ತು ಬದುಕಿನ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುತ್ತಿದ್ದಾರೆ. ಜುಲೈ 1 ಕ್ಕೆ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ.

ಹಾಗೆಯೇ 5 ಲಕ್ಷ ರೂಪಾಯಿ ವರೆಗಿನ ಆರೋಗ್ಯ ಚಿಕಿತ್ಸಾ ವೆಚ್ಚವನ್ನು ಒದಗಿಸುವ ಪತ್ರಕರ್ತರ ಆರೋಗ್ಯ ಕಾರ್ಡ್ ವ್ಯವಸ್ಥೆಯನ್ನೂ ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದು, ಆರೋಗ್ಯ ಸಂಜೀವಿನಿ ಕಾರ್ಡ್ ಕೂಡ ಜುಲೈ 1 ರಂದು ನೀಡಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾ ಪತ್ರಕರ್ತರ ಭವನ ಮತ್ತು ತಾಲ್ಲೂಕು ಪತ್ರಕರ್ತರ ಭವನದ ನಿರ್ಮಾಣಕ್ಕೂ ಸರ್ಕಾರದ ಜೊತೆ ಮಾತನಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

PPeepal Media Desk

Peepal Media Desk

Peepal Media · ಮೀಡಿಯಾ ವಿಭಾಗ

ಸಂಬಂಧಿತ ಸುದ್ದಿಗಳು