ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಟಿಎಂಸಿ ಬಿಕ್ಕಟ್ಟಿನ ನಡುವೆ ಆಪರೇಷನ್ ಕಮಲ ವಿಫಲ: ಅಮಿತ್ ಶಾ ವಿರುದ್ಧ ಸಂಸದ ಕೀರ್ತಿ ಆಜಾದ್ ಗಂಭೀರ ಆರೋಪ; 19 ಸಂಸದರ ಪಟ್ಟಿ ವೈರಲ್!

PPeepal Media

Peepal Media ರಾಜಕೀಯ

• 2 ನಿಮಿಷದ ಓದು

ಟಿಎಂಸಿ ಬಿಕ್ಕಟ್ಟಿನ ನಡುವೆ ಆಪರೇಷನ್ ಕಮಲ ವಿಫಲ: ಅಮಿತ್ ಶಾ ವಿರುದ್ಧ ಸಂಸದ ಕೀರ್ತಿ ಆಜಾದ್ ಗಂಭೀರ ಆರೋಪ; 19 ಸಂಸದರ ಪಟ್ಟಿ ವೈರಲ್!

ದೆಹಲಿ: ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ತೀವ್ರ ಆಂತರಿಕ ಕಲಹ ಮತ್ತು ರಾಜಕೀಯ ಬಿಕ್ಕಟ್ಟು ಮುಂದುವರಿದಿರುವ ನಡುವೆಯೇ, ಪಶ್ಚಿಮ ಬಂಗಾಳದ ಆಡಳಿತಾರೂಢ ಟಿಎಂಸಿ ಪಕ್ಷವನ್ನು ಒಡೆಯಲು ಬಿಜೆಪಿ ನಡೆಸಿದ್ದ ‘ಆಪರೇಷನ್ ಕಮಲ’ (Operation Lotus) ತಂತ್ರವು ಸಂಪೂರ್ಣವಾಗಿ ವಿಫಲವಾಗಿದೆ ಎಂದು ಟಿಎಂಸಿ ಸಂಸದ ಕೀರ್ತಿ ಆಜಾದ್ ಶುಕ್ರವಾರ ಗಂಭೀರ ಆರೋಪ ಮಾಡಿದ್ದಾರೆ.

ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷದಿಂದ ಸಂಸದರನ್ನು ಮತ್ತು ನಾಯಕರನ್ನು ಸೆಳೆಯಲು ಬಿಜೆಪಿ ವ್ಯವಸ್ಥಿತ ಸಂಚು ರೂಪಿಸುತ್ತಿದೆ ಎಂದು ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್ (X) ಪೋಸ್ಟ್‌ನಲ್ಲಿ ಆಜಾದ್ ದೂರಿದ್ದಾರೆ. ಇದಕ್ಕೆ ಸಾಕ್ಷಿಯಾಗಿ, ರಾಜ್ಯಸಭಾ ಸಂಸದ ಪ್ರಕಾಶ್ ಚಿಕ್ ಬಾರೈಕ್ ಅವರು ಬಿಜೆಪಿ ನಾಯಕ ನಿಶಿಕಾಂತ್ ದುಬೆ ಅವರ ದೆಹಲಿ ನಿವಾಸದ ಹೊರಗೆ ಮಾಧ್ಯಮಗಳೊಂದಿಗೆ ನಡೆಸಿದ ಸಂವಾದ, ಕೇಂದ್ರ ಸಚಿವ ಭೂಪೇಂದರ್ ಯಾದವ್ ಅವರ ನಿವಾಸದಲ್ಲಿ ಭಿನ್ನಮತೀಯ ಟಿಎಂಸಿ ಸಂಸದರು ನಡೆಸಿದ ರಹಸ್ಯ ಸಭೆ ಹಾಗೂ ಟಿಎಂಸಿ ಸಂಸದೆ ಶತಾಬ್ದಿ ರಾಯ್ ಅವರ ನಿವಾಸಕ್ಕೆ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಭೇಟಿ ನೀಡಿರುವುದನ್ನು ಅವರು ಉಲ್ಲೇಖಿಸಿದ್ದಾರೆ. “ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ಟಿಎಂಸಿ ವಿರುದ್ಧ ಆಪರೇಷನ್ ಕಮಲ ನಡೆಯುತ್ತಿದೆ, ಆದರೆ ಅದು ಇದುವರೆಗೆ ಯಶಸ್ವಿಯಾಗಿಲ್ಲ,” ಎಂದು ಆಜಾದ್ ಹೇಳಿದ್ದಾರೆ.

19 ಸಂಸದರ ಸಹಿಯಿರುವ ಪಟ್ಟಿ ವೈರಲ್: ಪಕ್ಷದಲ್ಲಿ ಭುಗಿಲೆದ್ದಿರುವ ಈ ಬಿಕ್ಕಟ್ಟಿನ ಮಧ್ಯೆಯೇ, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಿಗೆ ಬರೆಯಲಾಗಿದೆ ಎನ್ನಲಾದ ಪತ್ರವೊಂದರಲ್ಲಿ ಟಿಎಂಸಿಯ 19 ಲೋಕಸಭಾ ಸಂಸದರ ಹೆಸರು ಮತ್ತು ಸಹಿಯಿರುವ ಪಟ್ಟಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಈ ಪಟ್ಟಿಯ ಅಧಿಕೃತತೆಯನ್ನು ಸ್ವತಂತ್ರವಾಗಿ ದೃಢೀಕರಿಸಲು ಸಾಧ್ಯವಾಗಿಲ್ಲವಾದರೂ, ಭಿನ್ನಮತೀಯ ನಾಯಕರು ಈ ದಾಖಲೆಯು ತಮಗೆ ಇರುವ ಬೆಂಬಲವನ್ನು ತೋರಿಸುತ್ತದೆ ಎಂದು ವಾದಿಸುತ್ತಿದ್ದಾರೆ.

ಈ ಪಟ್ಟಿಯಲ್ಲಿ ಕಾಕೋಲಿ ಘೋಷ್ ದಸ್ತಿದಾರ್, ಶತಾಬ್ದಿ ರಾಯ್, ಬಾಪಿ ಹಲ್ದಾರ್, ಶರ್ಮಿಳಾ ಸರ್ಕಾರ್, ಪ್ರಸೂನ್ ಬಂದ್ಯೋಪಾಧ್ಯಾಯ, ಜಗದೀಶ್ ಬರ್ಮಾ ಬಸುನಿಯಾ, ಅಸಿತ್ ಕುಮಾರ್ ಮಾಲ್, ಅರೂಪ್ ಚಕ್ರವರ್ತಿ, ರಚನಾ ಬ್ಯಾನರ್ಜಿ, ಸಾಯೋನಿ ಘೋಷ್, ಖಲೀಲರ್ ರೆಹಮಾನ್, ಅಬು ತಾಹರ್ ಖಾನ್, ಯೂಸುಫ್ ಪಠಾಣ್, ಮಿತಾಲಿ ಬಾಗ್, ಮಾಲಾ ರಾಯ್, ಕಾಲಿಪದ ಸೋರೆನ್, ದೀಪಕ್ ಅಧಿಕಾರಿ (ದೇವ್), ಜೂನ್ ಮಾಲಿಯಾ ಮತ್ತು ಪಾರ್ಥ ಭೌಮಿಕ್ ಅವರ ಸಹಿಗಳಿವೆ ಎಂದು ವರದಿಯಾಗಿದೆ.

ಇತ್ತೀಚಿನ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಅನುಭವಿಸಿದ ಹಿನ್ನಡೆ ಹಾಗೂ ಶಾಸಕರ ಬಂಡಾಯದ ನಂತರ ಆರಂಭವಾದ ಈ ಬಿಕ್ಕಟ್ಟು ಇದೀಗ ಸಂಸತ್ತಿನವರೆಗೂ ವ್ಯಾಪಿಸಿದ್ದು, ಬಂಡಾಯಗಾರರು ತಮಗೆ 20 ಕ್ಕೂ ಹೆಚ್ಚು ಲೋಕಸಭಾ ಸದಸ್ಯರ ಬೆಂಬಲವಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ.

ಮೂವರು ಸಂಸದರ ರಾಜೀನಾಮೆ; ಅಭಿಷೇಕ್ ಬ್ಯಾನರ್ಜಿ ವಿರುದ್ಧ ಕಲ್ಯಾಣ್ ಬ್ಯಾನರ್ಜಿ ವಾಗ್ದಾಳಿ: ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಹಿರಿಯ ನಾಯಕರಾದ ಸುಖೇಂದು ಶೇಖರ್ ರಾಯ್ ಮತ್ತು ಸುಸ್ಮಿತಾ ದೇವ್ ಅವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಗುರುವಾರ ರಾಜ್ಯಸಭಾ ಸಂಸದ ಪ್ರಕಾಶ್ ಚಿಕ್ ಬಾರೈಕ್ ಅವರು ಪಕ್ಷ ಹಾಗೂ ಸಂಸತ್ತಿನ ಮೇಲ್ಮನೆ ಸದಸ್ಯತ್ವ ಎರಡಕ್ಕೂ ರಾಜೀನಾಮೆ ನೀಡುವ ಮೂಲಕ ಈ ವಾರದಲ್ಲಿ ಹೊರನಡೆದ ಮೂರನೇ ಸಂಸದರಾಗಿದ್ದಾರೆ.

ಈ ಬೆಳವಣಿಗೆಗಳು ಪಕ್ಷದ ಆಂತರಿಕ ಭಿನ್ನಾಭಿಪ್ರಾಯಗಳನ್ನು ಸಂಪೂರ್ಣವಾಗಿ ಬೀದಿಗೆ ತಂದಿವೆ. ಟಿಎಂಸಿ ಹಿರಿಯ ನಾಯಕ ಕಲ್ಯಾಣ್ ಬ್ಯಾನರ್ಜಿ ಅವರು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ವಿರುದ್ಧ ಬಹಿರಂಗವಾಗಿಯೇ ತೀವ್ರ ವಾಗ್ದಾಳಿ ನಡೆಸಿದ್ದು, “ಅಭಿಷೇಕ್ ಬ್ಯಾನರ್ಜಿ ಅವರನ್ನು ಪಕ್ಷದ ಎಲ್ಲಾ ನಾಯಕತ್ವದ ಹುದ್ದೆಗಳಿಂದ ಮುಕ್ತಗೊಳಿಸಿದರೆ ಮಾತ್ರ ನಾನು ಟಿಎಂಸಿಯಲ್ಲಿ ಮುಂದುವರಿಯುತ್ತೇನೆ,” ಎಂದು ಗಡುವು ನೀಡಿದ್ದಾರೆ.

ಆದರೆ ಕಲ್ಯಾಣ್ ಬ್ಯಾನರ್ಜಿ ಅವರ ಹೇಳಿಕೆಯನ್ನು ತಳ್ಳಿಹಾಕಿರುವ ಕೀರ್ತಿ ಆಜಾದ್, ಕಲ್ಯಾಣ್ ಬ್ಯಾನರ್ಜಿ ಅವರು ಭಾವನಾತ್ಮಕವಾಗಿ ಆ ಮಾತುಗಳನ್ನಾಡಿದ್ದಾರೆ. ಅವರು ಮಮತಾ ಬ್ಯಾನರ್ಜಿ ಅವರ ಕಷ್ಟದ ದಿನಗಳಲ್ಲಿ ಜೊತೆಯಾಗಿದ್ದವರು, ಎಂದಿಗೂ ದೀದಿಗೆ ಬೆನ್ನಿಗೌರಿ ಹಾಕುವುದಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಮಮತಾ ಪರ ನಿಂತ ಗಣ್ಯರು; ಹೆದರುವುದಿಲ್ಲ ಎಂದ ಆಜಾದ್: ಪಕ್ಷದಲ್ಲಿ ಬಂಡಾಯದ ಅಲೆ ಜೋರಾಗುತ್ತಿದ್ದರೂ ಸೌಗತ ರಾಯ್, ಶತ್ರುಘ್ನ ಸಿನ್ಹಾ, ಪ್ರತಿಮಾ ಮೊಂಡಲ್ ಮತ್ತು ರಾಜ್ಯಸಭಾ ಸಂಸದ ಬಾಬುಲ್ ಸುಪ್ರಿಯೋ ಸೇರಿದಂತೆ ಹಲವು ಹಿರಿಯ ಸಂಸದರು ತಾವು ಯಾವುದೇ ಭಿನ್ನಮತೀಯ ಗುಂಪಿನಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದ್ದು, ಮಮತಾ ಬ್ಯಾನರ್ಜಿ ಅವರ ನಾಯಕತ್ವಕ್ಕೆ ತಮ್ಮ ಬೆಂಬಲವನ್ನು ಪುನರುಚ್ಚರಿಸಿದ್ದಾರೆ.

ಇದೇ ವೇಳೆ ಟಿಎಂಸಿ ನಾಯಕರ ಭದ್ರತಾ ಸಿಬ್ಬಂದಿಯನ್ನು ಹಿಂಪಡೆಯುವ ಮೂಲಕ ಕೇಂದ್ರ ಸರ್ಕಾರ ನಮ್ಮ ಮೇಲೆ ಒತ್ತಡ ಹೇರಲು ಯತ್ನಿಸುತ್ತಿದೆ ಎಂದು ಆಜಾದ್ ಆರೋಪಿಸಿದ್ದಾರೆ. “ನಾವು ರಾಜಕೀಯಕ್ಕೆ ಬಂದಿರುವುದೇ ಹೋರಾಟ ಮಾಡಲು, ಇಂತಹ ಬೆದರಿಕೆಗಳಿಗೆ ನಾವು ಹೆದರುವುದಿಲ್ಲ. ನಾನು ಅಂತರರಾಷ್ಟ್ರೀಯ ಕ್ರಿಕೆಟಿಗನಾಗಿದ್ದವನು, ನನಗೇ ಆದ ಸ್ವಂತ ಗುರುತು ಮತ್ತು ಗೌರವವಿದೆ. ಕೀರ್ತಿ ಆಜಾದ್ ಯಾರ ಕೈಗೂ ಸಿಗುವವನಲ್ಲ ಮತ್ತು ಯಾರಿಗೂ ಹೆದರುವವನಲ್ಲ,” ಎಂದು ಅವರು ಕೇಂದ್ರದ ವಿರುದ್ಧ ಗುಡುಗಿದ್ದಾರೆ.

PPeepal Media

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು