ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನನ್ನನ್ನು ಬಂಧಿಸಲು ನೂರು ಸಿದ್ದರಾಮಯ್ಯರು ಹುಟ್ಟಿ ಬರಬೇಕು: ಹೆಚ್​ಡಿಕೆ ಕಿಡಿ

PPeepal Media Desk

Peepal Media Desk • ರಾಜಕೀಯ, ರಾಜ್ಯ

• 1 ನಿಮಿಷದ ಓದು

ನನ್ನನ್ನು ಬಂಧಿಸಲು ನೂರು ಸಿದ್ದರಾಮಯ್ಯರು ಹುಟ್ಟಿ ಬರಬೇಕು: ಹೆಚ್​ಡಿಕೆ ಕಿಡಿ

ಬೆಂಗಳೂರು: ನನ್ನನ್ನು ಬಂಧಿಸುವುದಕ್ಕೆ ನೂರು ಸಿದ್ದರಾಮಯ್ಯರು ಹುಟ್ಟಿ ಬರಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್ ಕಚೇರಿ ಜೆ.ಪಿ.ಭವನದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಗತ್ಯಬಿದ್ದರೆ ಕುಮಾರಸ್ವಾಮಿಯವರನ್ನು ಬಂಧಿಸಲಾಗುವುದು ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಕುಮಾರಸ್ವಾಮಿಗೆ ಭಯ ಶುರುವಾಗಿದೆ ಎಂಬ ಟೀಕೆಗೆ ಪ್ರತಿಕ್ರಿಯಿಸಿ, ನನಗೆ ಭಯ ಶುರುವಾಗಿದೆಯಾ?. ನನ್ನ ನೋಡಿದರೆ ಹಾಗೆ ಅನಿಸುತ್ತಾ? ಎಂದು ಪ್ರಶ್ನಿಸಿದರು.

ಅವರು ಕಳೆದ ವಾರದಿಂದ ಹೇಗೆ ನಡೆದುಕೊಡಿದ್ದಾರೆ ನೋಡಿದ್ದೀರಲ್ಲ. ಜನ ನೋಡಿದ್ದಾರೆ. ಮೈಸೂರಿನ ದಾಖಲೆ ಇದೆಯಲ್ಲ. ಮುಡಾ ಆಸ್ತಿಯನ್ನು ನನ್ನ ಆಸ್ತಿ ಅಂತ ಹೇಳ್ತಿದ್ದಾರೆ. ಇಂತಹ ಭಂಡತನದಿಂದ ಯಾವ ಸಿಎಂ ಕೂಡ ನಡೆದುಕೊಂಡಿಲ್ಲ ಎಂದು ವಾಗ್ದಾಳಿ ನಡೆಸಿದರು.

ಸಿಎಂ ಸಿದ್ದರಾಮಯ್ಯ ಪತ್ನಿ ಹೆಸರಿನ ದಾಖಲೆ ತಿದ್ದುಪಡಿ ಕುರಿತು ಪ್ರತಿಕ್ರಿಯಿಸಿ, ಹೆಲಿಕಾಪ್ಟರ್​ನಲ್ಲಿ ತೆಗೆದುಕೊಂಡು ಹೋದ್ರಲ್ವಾ?. ಈಗ ರೋಡ್ ಚೆನ್ನಾಗಿದೆ, ಒಂದೂವರೆ ಗಂಟೆಯಲ್ಲಿ ರೀಚ್ ಆಗಬಹುದು. ಒಳ್ಳೆಯ ಪೈಲೆಟ್ ಕರೆದುಕೊಂಡು ಹೋಗಿದ್ದಾರೆ. ಯಾವ ಪೇಪರ್‌ಗೆ ವೈಟ್ನರ್ ಹಾಕಿದ್ದಾರೆ. ಮೊದಲೇ ದಿನದಿಂದ ಎಷ್ಟು ಸುಳ್ಳು ಹೇಳಿಕೊಂಡು ಬಂದ್ರು. ಮೃತಪಟ್ಟಿರುವ ವ್ಯಕ್ತಿಯ ಹೆಸರಲ್ಲಿ ಡಿನೋಟಿಫಿಕೇಷನ್ ಮಾಡಿದ್ದಾರೆ‌. ಡಿನೋಟಿಫಿಕೇಷನ್ ಮಾಡೋದಾದ್ರೆ ಅವನ ಮಗನ ಹೆಸರಲ್ಲಿ ಮಾಡಬಹುದಿತ್ತು. ಮುಡಾ ಹೆಸರಲ್ಲೇ ಪ್ರಾಪರ್ಟಿ ಇದೆ. ನಿಮ್ಮ ಬಾಮೈದ ಅಷ್ಟು ದಡ್ಡನಾ ಸಿದ್ದರಾಮಯ್ಯನವರೇ?. ಚೇಂಜ್ ಆಫ್ ಲ್ಯಾಂಡ್ ಯೂಸ್ ಯಾವ ಆಧಾರದ ಮೇಲೆ ಮಾಡಿದರು. 2010ರಲ್ಲಿ ದಾನ ಮಾಡಿದ್ನಲ್ಲ. ಆಗಲೇ ಅದು ಯಾವ ಆಸ್ತಿ ಅಂತ ಗೊತ್ತಾಗುವುದಿಲ್ಲವೇ ಎಂದು ಪ್ರಶ್ನಿಸಿದರು.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು