ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಒಂದು ಪೈಸೆಯೂ ಲಂಚವಿಲ್ಲದೆ 1,000 ಜನರಿಗೆ ಗ್ರಾಮ ಆಡಳಿತ ಹುದ್ದೆ: ಕೃಷ್ಣ ಬೈರೇಗೌಡ

PPeepal Media Desk

Peepal Media Desk ಮೀಡಿಯಾ, ರಾಜಕೀಯ, ರಾಜ್ಯ

• 3 ನಿಮಿಷದ ಓದು

ಒಂದು ಪೈಸೆಯೂ ಲಂಚವಿಲ್ಲದೆ 1,000 ಜನರಿಗೆ ಗ್ರಾಮ ಆಡಳಿತ ಹುದ್ದೆ: ಕೃಷ್ಣ ಬೈರೇಗೌಡ

• ಒಂದೇ ಹಂತದಲ್ಲಿ 1,000 ವಿಎ ಗಳ ನೇಮಕಕ್ಕೆ ಆದೇಶ
• ರಾಜ್ಯಾದ್ಯಂತ 6‌,33,916 ಜನರಿಂದ ಪರೀಕ್ಷೆಗೆ ಅರ್ಜಿ
• ಎಲ್ಲೂ ಅಕ್ರಮಗಳಿಗೆ ಆಸ್ಪದ ಇಲ್ಲದೆ ಪಾರದರ್ಶಕ ಪರೀಕ್ಷೆ
• 4,000 ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್‌ಟಾಪ್ ವಿತರಣೆ

ರಾಜ್ಯದ ಇತಿಹಾಸದಲ್ಲೇ 1,000 ಜನ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಕ್ಕೆ ಒಂದೇ ಹಂತದಲ್ಲಿ ಆದೇಶ ಹೊರಡಿಸಿದ್ದು ಇದೇ ಮೊದಲು. ಅಲ್ಲದೆ, ಒಂದು ಪೈಸೆಯೂ ಲಂಚಕ್ಕೆ ಆಸ್ಪದ ನೀಡದೆ ಪಾರದರ್ಶಕವಾಗಿ ನೇಮಕ ಮಾಡಲಾಗಿದೆ ಎಂದು ಹೇಳಲು ಸಂತಸವಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ನಲ್ಲಿ ನೂತನವಾಗಿ ಆಯ್ಕೆಯಾಗಿರುವ 1,000 ಗ್ರಾಮ ಆಡಳಿತ ಅಧಿಕಾರಿಗಳಿಗೆ ನೇಮಕಾತಿ ಆದೇಶ, ಕಂದಾಯ ಇಲಾಖೆಯನ್ನು ಸಂಪೂರ್ಣ ಡಿಜಿಟಲೀಕರಿಸುವ ನಿಟ್ಟಿನಲ್ಲಿ 4,000 ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣಾ ಹಾಗೂ ಕಂದಾಯ ಇಲಾಖೆಯ ಎರಡು ವರ್ಷದ ʼಸಾಧನೆಯ ಹಾದಿʼ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ರಾಜ್ಯದ ಇತಿಹಾಸದಲ್ಲೇ ಏಕ ಕಾಲದಲ್ಲಿ ಸಾವಿರ ಜನರ ನೇಮಕ ಇದೆ ಮೊದಲು. ಇದೊಂದು ದಾಖಲೆ. ಈ ಹಿಂದೆ ಪಿಯುಸಿ ಅಂಕದ ಆಧಾರದಲ್ಲಿ ಆಯಾ ಜಿಲ್ಲೆಯಲ್ಲಿ ಸೀಮಿತ ಸ್ಥಾನಗಳಿಗೆ ನೇಮಕಾತಿ ಆಗುತ್ತಿತ್ತು. ಆದರೆ, ಹುದ್ದೆ ನೇಮಕಾತಿ ಪ್ರಕ್ರಿಯೆಯಲ್ಲಿ ಹಲವು ಜಿಲ್ಲೆಗಳಲ್ಲಿ ಪಾರದರ್ಶಕತೆ ಇಲ್ಲ ಎಂಬ ದೂರು ಇತ್ತು. ಹೀಗಾಗಿ ನಮ್ಮ ಸರ್ಕಾರ ಬಂದ ಮೇಲೆ ಇಡೀ ರಾಜ್ಯದಲ್ಲಿ ಒಂದೇ ಬಾರಿ ಪಾರದರ್ಶಕವಾಗಿ ನೇಮಕವಾಗಬೇಕು, ಎಲ್ಲ ಜಿಲ್ಲೆಯವರಿಗೂ ಸಮಾನ ಸವಕಾಶ ಸಿಗಬೇಕು  ಎಂಬ ದೃಷ್ಟಿಯಲ್ಲಿ ಕ್ರಮವಹಿಸಲಾಗಿತ್ತು” ಎಂದರು.

“ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಒಂದೇ ಬಾರಿ ಅರ್ಜಿ ಕರೆದು, ಒಂದೇ ಬಾರಿ ಪರೀಕ್ಷೆ ನಡೆಸಿ ಮಧ್ಯವರ್ತಿಗಳ ಅವಕಾಶ ಇಲ್ಲದೆ ನೇಮಕಾತಿ ಮಾಡಿದ್ದೇವೆ. ಈ ಹುದ್ದೆಗೆ 6,33,916 ಜನ ಅರ್ಜಿ ಸಲ್ಲಿಸಿದ್ದರು. ಭಾಗಶಃ ಕರ್ನಾಟಕ ಬೇರೆ ಯಾವುದೇ ನೇಮಕಾತಿಗೆ ಇಷ್ಟು ಅರ್ಜಿ ಬಂದಿಲ್ಲ. ಇಲ್ಲಿ ಕೆಲಸ ಗಿಟ್ಟಿಸಿದವರು ಎಷ್ಟು ಪುಣ್ಯವಂತರೆಂದರೆ ಅರ್ಜಿ ಸಲ್ಲಿಸಿದವರ ಪೈಕಿ ಶೇ. 0.0016 ಜನ ಮಾತ್ರ ಆಯ್ಕೆಯಾಗಿದ್ದೀರಿ” ಎಂದು ತಿಳಿಸಿದರು.

ಮುಂದುವರೆದು, “ಗ್ರಾಮ ಆಡಳಿತ ಅಧಿಕಾರಿ ಕೆಲಸಕ್ಕೆ ಶಿಫಾರಸು ಮಾಡುವಂತೆ ಏಳೆಂಟು ಜನ ನನ್ನ ಬಳಿಯೂ ಬಂದಿದ್ದರು. ಆದರೆ, ನಾನೇ ಮನಸ್ಸು ಮಾಡಿದರೂ ಶಿಫಾರಸು ಮಾಡಲು ಸಾಧ್ಯವಾಗದಂತೆ ಪಾರದರ್ಶಕವಾಗಿ ಪರೀಕ್ಷೆ ನಡೆಸಲಾಗಿದೆ. ಪರೀಕ್ಷೆಯ ಉತ್ತರ ಪತ್ರಿಕೆ ತಿದ್ದುವುದು ಸೇರಿದಂತೆ ಯಾವ ಅಕ್ರಮ ಚಟುವಟಿಕೆಗಳಿಗೂ ಆಸ್ಪದ ಇಲ್ಲದಂತೆ ಪರೀಕ್ಷೆ ನಡೆಸಲಾಗಿದೆ. ಇಲ್ಲಿ ಕೆಲಸ ಗಿಟ್ಟಿಸಿದವರು ಹುದ್ದೆಗಾಗಿ ಒಂದು ಪೈಸೆಯಾದರೂ ಯಾರಿಗಾದರೂ ಲಂಚ ಕೊಟ್ಟಿದ್ದೀರ . ಇದೇ ಕಾರಣಕ್ಕೆ ಈ ಬಗ್ಗೆ ಈವರೆಗೆ ಒಂದೂ ತಕರಾರು ಬಂದಿಲ್ಲ. ಒಂದು ಪೈಸೆಯೂ ಲಂಚ ಇಲ್ಲದೆ ಹುದ್ದೆ ನೀಡಿದ್ದೇವೆ ಎಂದು ಹೇಳಲು ನನಗೂ ಸಂತೋಷವಾಗುತ್ತದೆ” ಎಂದು ಹರ್ಷ ವ್ಯಕ್ತಪಡಿಸಿದರು

ಈ ಕಾರ್ಯಕ್ರಮವನ್ನು ಸ್ಥಳದ ಅಭಾವದ ನೆಪವೊಡ್ಡೆ ಬೇರೆಡೆ ಸ್ಥಳಾಂತರಿಸಲು ಅಧಿಕಾರಿಗಳು ಸೂಚಿಸಿದರು. ಆದರೆ, ನಾನು ಈ ಸಿಎಂ ಅವರ ಕೈಯಿಂದಲೇ ಎಲ್ಲಾ ಅಧಿಕಾರಿಗಳಿಗೂ ವಿಧಾನಸೌಧದಲ್ಲೇ ಆದೇಶ ಪ್ರತಿ ನೀಡಬೇಕು ಎಂದು ಹೇಳಿ ಸಿದ್ದರಾಮಯ್ಯನವರನ್ನು ಒಪ್ಪಿಸಿದೆ. ಮೊದಲ ಬಾರಿಗೆ ಸಾವಿರ ಜನ ಸರ್ಕಾರಿ ಸೇವೆಗೆ ಕಾಲಿಡುತ್ತಿದ್ದಾರೆ. ಅವರು ಮೊದಲ ಸಲ ವಿಧಾನಸೌಧಕ್ಕೆ ಕಾಲಿಟ್ಟರೆ ಅವರಿಗೆ ವಿಧಾನಸೌಧ ಕಟ್ಟಿದ ಆಶಯ ಅರ್ಥವಾಗುತ್ತೆ, ಆಗಲಾದರೂ ಅವರು ಜನಪರ ಕೆಲಸ ಮಾಡುತ್ತಾರೆ ಎಂಬ ಉದ್ದೇಶದಿಂದಲೇ ಕಾರ್ಯಕ್ರಮವನ್ನು ಇಲ್ಲಿ ಆಯೋಜಿಸಲಾಗಿದೆ” ಎಂದರು.

ನೂತನವಾಗಿ ಆಯ್ಕೆಯಾಗಿರುವ ಅಧಿಕಾರಿಗಳಿಗೂ ಕಿವಿಮಾತು ಹೇಳಿದ ಅವರು, “ವಿಧಾನಸೌಧದಲ್ಲಿ ಆದೇಶ ಪ್ರತಿ ಸ್ವೀಕರಿಸುತ್ತಿರುವ ಹೊಸ ಉದ್ಯೋಗಿಗಳಿಗೂ ಈ ಸಂದರ್ಭದಲ್ಲಿ ಅರಿವು ಇರಬೇಕು ಎಂಬ ಕಾರಣಕ್ಕೆ ಆದೇಶ ಪ್ರತಿಯನ್ನು ಸಿಎಂ ಸಿದ್ದರಾಮಯ್ಯ ಅವರ ಕೈಯಿಂದ ನೀಡಲಾಗುತ್ತಿದೆ. ಬಹುತೇಕರು ಸರ್ಕಾರಿ ಕೆಲಸ ಗಿಟ್ಟಿಸಿದ ಕುಟುಂಬದ ಮೊದಲಿಗರಾಗಿದ್ದಾರೆ. ಈ ಹುದ್ದೆಗೆ ನೀವು ಋಣ ತೀರಿಸಬೇಕು ಎಂತಿದ್ದರೆ ಜನರ ಪ್ರಮಾಣಿಕ ಸೇವೆ ಮಾಡುವ ಮೂಲಕ ಈ ಋಣ ತೀರಿಸಿ” ಎಂದರು

4000 ಜನರಿಗೆ ಲ್ಯಾಪ್ಟಾಪ್ ವಿತರಣೆ;
ಕಾರ್ಯಕ್ರಮದಲ್ಲಿ ನಾಲ್ಕು ಸಾವಿರ ಜನ ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ಟಾಪ್ (ಕ್ರೋಮ್ ಬುಕ್) ವಿತರಿಸಲಾಯಿತು.

ಈ ಬಗ್ಗೆ ಮಾತನಾಡಿದ ಅವರು, “ದಿನ ಬೆಳಗಾದರೆ ಗ್ರಾಮ ಆಡಳಿತ ಅಧಿಕಾರಿಗಳು  ತಾಲೂಕು ಕಚೇರಿಗಳಿಗೆ ಟಪಾಲು ಕೊಡೋದು ತಗೋಳೋದೆ ಅವರಿಗೆ ಕೆಲಸವಾಗಿದೆ. ಕೆಲಸ ಮಾಡೋದು ಬಿಟ್ಟು ಓಡಾಡೋದರಲ್ಲೇ ಸಮಯ ವ್ಯರ್ಥವಾಗುತ್ತಿದೆ. ಈ ಟಪಾಲು ವ್ಯವಸ್ಥೆ 200 ವರ್ಷಗಳಷ್ಟು ಹಳೆಯದು. ಈ ವ್ಯವಸ್ಥೆಗೆ ಏನಾದ್ರೂ ಅರ್ಥ ಇದೆಯಾ? ಇದು ಎಷ್ಟಯ ಅನಗತ್ಯ ಹೊರೆ. ಈ ಹೊರೆ ಕಡಿಮೆ ಮಾಡುವ ಉದ್ದೇಶದಿಂದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ಟ್ಯಾಪ್” ನೀಡಲಾಗುತ್ತಿದೆ.

ಟಪಾಲು ವ್ಯವಸ್ಥೆಯಿಂದ ಕೆಲಸ ಸಾಕಷ್ಟು ವಿಳಂಭವಾಗುತ್ತಿದೆ. ಪರಿಣಾಮ ಅರ್ಜಿ ನೀಡಿದ ಜನ ಆಕಾಶ ಭೂಮಿ ನೋಡುವಂತಾಗಿದೆ. ಅಧಿಕಾರಿಗಳು ಕೆಲಸ ಮಾಡಿಲ್ಲ ಅಂದ್ರೆ ಕಚೇರಿಗೆ ಅಲೆಯುವ ಜನರಿಗೂ ಸಂಕಷ್ಟ. ಎಲ್ಲದಕ್ಕೂ ಸಂಪೂರ್ಣ ವಿರಾಮ ಹಾಕುವ ಉದ್ದೇಶದಿಂದ ಎಲ್ಲಾ ಕೆಲಸವೂ ಸಂಪೂರ್ಣ ಡಿಜಿಟಲೀಕರಣಗೊಳಿಸಬೇಕು ಎಂದು ವಿಎ ಯಿಂದ ಸಚಿವರ ವರೆಗೆ ಎಲ್ಲಾ ಫೈಲು ದಾಖಲೆ ಡಿಜಿಟಲ್ ರೂಪದಲ್ಲೇ ಕೆಲಸ ಆಗಬೇಕು ಎಂದು ನಿರ್ಧಾರ ಮಾಡಿದ್ದೇವೆ.

ನಾವು 4000 ಲ್ಯಾಪ್ಟ್ಯಾಪ್ ಕೇಳಿದ್ದೆವು. ಆದರೆ, ಕ್ಯಾಬಿನೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ನವರು 6,000 ಲ್ಯಾಪ್ಟಾಪ್ ಗಳಿಗೆ ಅನುಮೋದನೆ ನೀಡಿದ್ದಾರೆ. 20025-26ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ವಿಎ ಗಳಿಗೆ ಲ್ಯಾಪ್ಟಾಪ್ ನೀಡಲಾಗುವುದು. ಎಲ್ಲಾ ಕಡತ ವಿಲೇವಾರಿಯನ್ನೂ ಆನ್ಲೈನ್ಗೆ ತಂದು ಪಾರದರ್ಶಕವಾಗಿ ಕೆಲಸ ಆಗುವಂತೆ ಹಾಗೂ ಕೆಲಸದ ವಿಳಂಭ ಸೇರಿದಂತೆ ದಾಖಲೆಗಳು ಕಳೆದುಹೋಗದಂತೆ ನೋಡಿಕೊಳ್ಳುವುದು ಡಿಜಿಟಲೀಕರಣದ ಉದ್ದೇಶ ಎಂದರು.

ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ, ಬೆಂಗಳೂರು ವಲಯ ಆಯುಕ್ತರಾದ ಆದಿತ್ಯ ಆಮ್ಲನ್ ಬಿಶ್ವಾಸ್, ಕಂದಾಯ ಆಯುಕ್ತರಾದ ಸುನೀಲ್ ಕುಮಾರ್ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ. ಜಗದೀಶ್ ಉಪಸ್ಥಿತರಿದ್ದರು.

PPeepal Media Desk

Peepal Media Desk

Peepal Media · ಮೀಡಿಯಾ ವಿಭಾಗ

ಸಂಬಂಧಿತ ಸುದ್ದಿಗಳು