ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಾವು ರೆಡಿ, ಕೂಡಲೇ ಎಲೆಕ್ಷನ್‌ ನಡೆಸ್ತೀರಾ?: ಮೋದಿಗೆ ದೀದಿ ಸವಾಲು

PPeepal Media

Peepal Media • ರಾಜಕೀಯ

• 1 ನಿಮಿಷದ ಓದು

ನಾವು ರೆಡಿ, ಕೂಡಲೇ ಎಲೆಕ್ಷನ್‌ ನಡೆಸ್ತೀರಾ?: ಮೋದಿಗೆ ದೀದಿ ಸವಾಲು

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಸಮಯ ಬಾಕಿ ಇರುವಂತೆಯೇ ರಾಜಕೀಯ ವಾತಾವರಣ ಕಾವೇರಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಮಮತಾ ಬ್ಯಾನರ್ಜಿ ನಡುವೆ ಮಾತಿನ ಸಮರ ಆರಂಭವಾಗಿದೆ.

ಅಲಿಪುರ್ದೂರ್‌ನಲ್ಲಿ ಬಿಜೆಪಿ ಆಯೋಜಿಸಿದ್ದ ರ್ಯಾಲಿಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ, ತೃಣಮೂಲ ಕಾಂಗ್ರೆಸ್ ಸರ್ಕಾರವನ್ನು ತೀವ್ರವಾಗಿ ಟೀಕಿಸಿದರು. ಸರ್ಕಾರವು ಜನರ ಬಗ್ಗೆ ನಿರ್ದಯವಾಗಿ ವರ್ತಿಸುತ್ತಲೇ ಇದೆ ಮತ್ತು ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಅವರು ಆರೋಪಿಸಿದರು. ಬಂಗಾಳದ ಜನರು ಬದಲಾವಣೆಯನ್ನು ಬಯಸುತ್ತಾರೆ ಎಂದು ಅವರು ಹೇಳಿದರು.

”ಶಿಕ್ಷಕರ ನೇಮಕಾತಿಯಲ್ಲಿ ಹಗರಣ ನಡೆದಿದೆ. ಸಾವಿರಾರು ಕುಟುಂಬಗಳ ಭವಿಷ್ಯ ಪ್ರಶ್ನಾರ್ಹವಾಗಿದೆ. ಬಂಗಾಳದ ಶಿಕ್ಷಣ ವ್ಯವಸ್ಥೆ ನಾಶವಾಗಿದೆ. ಟಿಎಂಸಿ ನಾಯಕರು ಅನೇಕ ಅಪರಾಧಗಳನ್ನು ಮಾಡಿದ್ದಾರೆ. ಆದರೆ, ತಮ್ಮ ತಪ್ಪುಗಳನ್ನು ಒಪ್ಪಿಕೊಳ್ಳುವ ಬದಲು, ಅವರು ನ್ಯಾಯಾಂಗ ನೀಡಿದ ತೀರ್ಪುಗಳನ್ನು ಟೀಕಿಸುತ್ತಿದ್ದಾರೆ. ಬಡವರ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ. ನಿರುದ್ಯೋಗದಿಂದಾಗಿ ರಾಜ್ಯದ ಯುವಕರು ತೀವ್ರ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ತುಷ್ಟೀಕರಣ ಮತ್ತು ಗೂಂಡಾಗಿರಿಯ ರಾಜಕೀಯವನ್ನು ನಿಲ್ಲಿಸಿ” ಎಂದು ಮೋದಿ ಸಲಹೆ ನೀಡಿದರು.

ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ದೀದಿ ತಮ್ಮ ಅಸಹನೆಯನ್ನು ವ್ಯಕ್ತಪಡಿಸಿದರು. ಕೂಡಲೇ ಚುನಾವಣೆ ನಡೆಸುವಂತೆ ಸವಾಲು ಹಾಕಿದರು.

“ಪಹಲ್ಗಾಮ್ ಘಟನೆಯಿಂದ ಇಡೀ ದೇಶ ಆಘಾತಗೊಂಡಿದೆ. ನಾವು ಆಪರೇಷನ್ ಸಿಂಧೂರ್ ಮೂಲಕ ಭಯೋತ್ಪಾದನೆಯ ವಿರುದ್ಧ ಹೋರಾಡಿದ್ದೇವೆ. ಸರ್ವಪಕ್ಷ ಪ್ರತಿನಿಧಿಗಳು ವಿದೇಶ ಪ್ರವಾಸ ಮಾಡುತ್ತಿರುವಾಗ, ನಾವೆಲ್ಲರೂ ಒಂದೇ, ಭಯೋತ್ಪಾದನೆಯನ್ನು ಸಹಿಸಲಾಗುವುದಿಲ್ಲ, ಏಕತೆ ನಮ್ಮ ಶಕ್ತಿ ಎಂಬ ಸಂದೇಶವನ್ನು ರವಾನಿಸಲು ಪ್ರಧಾನಿ ಮೋದಿ ಈ ರೀತಿ ಮಾತನಾಡುತ್ತಿರುವುದು ದುಃಖಕರ. ಅವರ ಇಂತಹ ಹೇಳಿಕೆಗಳನ್ನು ಕೇಳಿ ನನಗೆ ಆಶ್ಚರ್ಯವಾಯಿತು. ಬಂಗಾಳದ ಜನರು ನನ್ನೊಂದಿಗಿದ್ದಾರೆ. ಅವರ ಬೆಂಬಲ ಟಿಎಂಸಿಗೆ. ತಕ್ಷಣ ವಿಧಾನಸಭಾ ಚುನಾವಣೆಗಳನ್ನು ನಡೆಸಿ” ಎಂದು ಅವರು ಸವಾಲು ಹಾಕಿದರು.

PPeepal Media

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು