ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಪ್ಪ ಕೊಡುವ ಸಂಸ್ಕೃತಿ ಕಾಂಗ್ರೆಸ್ಸಿನದ್ದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

P

Peepal Media • ರಾಜಕೀಯ

• 1 ನಿಮಿಷದ ಓದು

ಕಪ್ಪ ಕೊಡುವ ಸಂಸ್ಕೃತಿ ಕಾಂಗ್ರೆಸ್ಸಿನದ್ದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬಳ್ಳಾರಿ, ಅಕ್ಟೋಬರ್ 13: ಕಪ್ಪ ಕೊಡುವ ಸಂಸ್ಕೃತಿ ಕಾಂಗ್ರೆಸ್ಸಿನದ್ದು, ಐದು ವರ್ಷ ಕರ್ನಾಟಕವನ್ನು ಎಟಿಎಂ ಮಾಡಿದ್ದೀರಿ, ಕಪ್ಪ ಕೊಡುವ ಸಂಸ್ಕೃತಿ ನಮ್ಮ ಪಕ್ಷದಲ್ಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದರು.

ಅವರು ಇಂದು ಹೂವಿನಹಡಗಲಿ ಜನಸಂಕಲ್ಪ ಯಾತ್ರೆಯಲ್ಲಿ ಉದ್ಘಾಟಿಸಿ ಮಾತನಾಡಿದರು.

ಹಿಂದಿನ ಮುಖ್ಯಮಂತ್ರಿ ಕಪ್ಪ ಕೊಡುವ ಬಗ್ಗೆ ಮಾತನಾಡುತ್ತಾರೆ. ಆ ಸಂಸ್ಕೃತಿ ಇರೋದು ಕಾಂಗ್ರೆಸ್ ನಲ್ಲಿ ಮಾತ್ರ. ತಾವು ಅಧಿಕಾರದಲ್ಲಿದ್ದಾಗ ಐದು ವರ್ಷ ಕರ್ನಾಟಕವನ್ನು ಎಟಿಎಂ ಮಾಡಿದ್ದೀರಿ, ಕಪ್ಪ ಕೊಡುವ ಸಂಸ್ಕೃತಿ ನಮ್ಮ ಪಕ್ಷದಲ್ಲಿಲ್ಲ. ಕಾಂಗ್ರೆಸ್‌ ರಾಜ್ಯಾಧ್ಯಕ್ಷರು ಕಪ್ಪ ಕೊಡಲು ಹೋಗಿಯೇ ಇಡಿ ಕೈಗೆ ಸಿಲುಕಿಕೊಂಡಿದ್ದಾರೆ. ನಿಮ್ಮಿಂದ ಪಾಠ ಕಲಿಯುವ ಅಗತ್ಯವಿಲ್ಲ. ಜನರು ಈಗ ಜಾಗೃತರಾಗಿದ್ದಾರೆ‌‌ . ನಿಮ್ಮ ಆ ಭಾಗ್ಯ ಈ ಭಾಗ್ಯ ಅಂತ ಲೂಟಿ ಮಾಡಿದಿರಿ, ಅನ್ನಭಾಗ್ಯ ಅಂತ ಹೇಳಿ ಕನ್ನ ಭಾಗ್ಯ ಮಾಡಿದಿರಿ, ಎಸ್ಸಿ ಎಸ್ಟಿಗೆ ಕೊಳವೆಬಾವಿ ಕೊರೆಸಿದ್ದೇವೆ ಅಂತ ಲೂಟಿ ಮಾಡಿದಿರಿ. ನೀವು ಭಾಗ್ಯ ಕೊಟ್ಟಿದ್ದ ರೆ ಜನರು ನಿಮ್ಮನ್ನು ಯಾಕೆ ಸೋಲಿಸುತ್ತಿದ್ದರು‌ ಎಂದು ಪ್ರಶ್ನಿಸಿ, ಕರ್ನಾಟಕದಲ್ಲಿ ಅಭಿವೃದ್ಧಿಗೆ ಹಿನ್ನಡೆಯಾಗಿದ್ದರೆ, ಅದು ಕಾಂಗ್ರೆಸ್ ನ ಭ್ರಷ್ಟಾಚಾರದಿಂದ ಆಗಿದೆ ಎಂದರು.

ಸುಳ್ಳು ಆಶ್ವಾಸನೆಗಳನ್ನು ನೀಡಿದ ಕಾಂಗ್ರೆಸ್ :

ನಾಳೆ ಕಾಂಗ್ರೆಸ್ ಪಾದಯಾತ್ರೆ ಬಳ್ಳಾರಿಗೆ ಬರುತ್ತಿದೆ. ನೀವೆಲ್ಲಾ ಸೇರಿ ಸೋನಿಯಾ ಗಾಂಧಿಗೆ ಎಂಪಿ ಮಾಡಿ ಆರಿಸಿ ಕಳುಹಿಸಿದಿರಿ. ಅವರು ಆರಿಸಿ ಬಂದ ಮೆಲೆ ಇಲ್ಲಿನ ಸ್ಥಾನಕ್ಕೆ ರಾಜಿನಾಮೆ ನೀಡಿ ಉತ್ತರ ಪ್ರದೇಶಕ್ಕೆ ಹಾರಿ ಹೋದರು. ಆಗ 3000 ಕೋಟಿ ರೂ. ಪ್ಯಾಕೇಜ್ ಕೊಡುತ್ತೇನೆ ಎಂದು ಹೇಳಿದ್ದರು. 3000 ಕೋಟಿ ಎಲ್ಲಿ ಹೋಯಿತು. ನಿಮ್ಮ ಮತವನ್ನು ಪಡೆದುಕೊಂಡು, ಈ ಕ್ಷೇತ್ರವನ್ನು ತಿರುಗಿಯೂ ನೋಡದ ಕಾಂಗ್ರೆಸ್ ನವರು ಸುಳ್ಳು ಆಶ್ವಾಸನೆಗಳನ್ನು ನೀಡಿದ್ದಾರೆ.ಈಗ ಅವರ ಮಗ ಬರುತ್ತಿದ್ದಾನೆ. ನಿಮ್ಮ ತಾಯಿಯನ್ನು ಆರಿಸಿ ಕಳುಹಿಸಿದ್ದೇವು ಅವರು ಏನು ಮಾಡಿದರು. ಈಗ ನೀವು ಏನು ಸುಳ್ಳು ಹೇಳಲು ಬಂದಿದ್ದೀರಿ ಎಂದು ಜನ ಪ್ರಶ್ನಿಸಬೇಕು. ಈ ಭಾಗದಲ್ಲಿ ಸುಳ್ಳು ನಡೆಯುವುದಿಲ್ಲ ಎಂಬ ಸಂದೇಶ ನೀಡಬೇಕು. ಎಂದರು.

ಪಕ್ಷದ ನಿಷ್ಠೆಯೇ ನಮ್ಮ ಶಕ್ತಿ :

ಹೂವಿನ ಹಡಗಲಿಯಲ್ಲಿ ಈ ಬಾರಿ ಕಮಲ ಅರಳುತ್ತದೆ. ನಾಯಕರುಗಳು ನಿಮ್ಮಲ್ಲಿರುವ ಸಣ್ಣ ಪುಟ್ಟ ವ್ಯತ್ಯಾಸವನ್ನು ಬದಿಗಿಟ್ಟು ಯಾರಿಗೆ ಟಿಕೆಟ್ ನೀಡಿದರೂ ನಿಷ್ಟೆಯಿಂದ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಕಾರ್ಯಕರ್ತರ ಬಳಿ ಮುಖ್ಯಮಂತ್ರಿಗಳು ಪ್ರಮಾಣ ಮಾಡಿಸಿದರು.

ನಮ್ಮ ಹಿರಿಯರಾದ ಎಂ.ಪಿ.ಪ್ರಕಾಶ್ ಅವರು ಇಡೀ ಜೀವನವನ್ನು ಕಾಂಗ್ರೆಸ್‌ ವಿರೋಧ ಮಾಡುತ್ತ ಬಂದಿದ್ದರು‌. ಅವರು ಯಾಕೆ ಕಾಂಗ್ರೆಸ್ ಗೆ ಹೋದರೊ ಗೊತ್ತಿಲ್ಲ. ಕಾಂಗ್ರೆಸ್ ಅಂದರೆ ಸೋಲು, ಅಲ್ಲಿಗೆ ಹೋದರೆ ಸೋಲುವುದು ಖಚಿತ. ಆದರೆ ಅವರ ಕನಸಿನ ಯೋಜನೆಗಳನ್ನು ನಾನು ಜಾರಿಗೊಳಿಸುವ ಕೆಲಸ ಮಾಡುತ್ತೇನೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಜಲ ಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ, ಬಿ.ಶ್ರೀರಾಮುಲು, ಆನಂದಸಿಂಗ್ ಹಾಗೂ ಮತ್ತಿತರರು ಹಾಜರಿದ್ದರು.

P

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version