ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಆಂದೋಲನದ ಮಾದರಿಯಲ್ಲಿ ಬಗರ್ ಹುಕುಂ ಅರ್ಜಿಗಳ ವಿಲೇವಾರಿ : ಸಚಿವ ಕೃಷ್ಣ ಬೈರೇಗೌಡ

PPeepal Media

Peepal Media ರಾಜಕೀಯ, ರಾಜ್ಯ

• 1 ನಿಮಿಷದ ಓದು

ಆಂದೋಲನದ ಮಾದರಿಯಲ್ಲಿ ಬಗರ್ ಹುಕುಂ ಅರ್ಜಿಗಳ ವಿಲೇವಾರಿ : ಸಚಿವ ಕೃಷ್ಣ ಬೈರೇಗೌಡ

ಕಾರವಾರ, ಡಿ.4:- ರಾಜ್ಯದಲ್ಲಿ ಬಗರ್ಹುಕುಂ ಅರ್ಜಿಗಳು ಲಕ್ಷಾಂತರ ಸಂಖ್ಯೆಯಲ್ಲಿ ಬಂದಿದ್ದು, ಅವುಗಳನ್ನು ಅದನ್ನು ಮುಂದಿನ ಆರು ತಿಂಗಳಲ್ಲಿ ಆಂದೋಲನ ಮಾದರಿಯಲ್ಲಿ ವಿಲೇವಾರಿ ಮಾಡುತ್ತೇವೆ. ಅರ್ಹರಿಗೆ ಎಲ್ಲ ದಾಖಲಾತಿಯನ್ನು ಮಾಡಿಕೊಡುತ್ತೇವೆ, ರಾಜ್ಯದಲ್ಲಿ ಇದೇ ಪ್ರಪ್ರಥಮ ಬಾರಿಗೆ ಬಗರುಹುಕುಂ ಕುರಿತು ಮಂಜೂರಾತಿಯನ್ನು ಪ್ರಾರಂಭದಿಂದ ಕೊನೆಯವರಿಗೆ ಸಂಪೂರ್ಣವಾಗಿ ಆನ್ ಲೈನ್ ಮೂಲಕ ಶಿರಸಿಯಲ್ಲಿ ಮಾಡುವ ಮೂಲಕ ಈ ಅಭಿಯಾನ ಆರಂಭಿಸುತ್ತಿದ್ದೇವೆ ಎಂದು ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಅವರು ಇಂದು ಶಿರಸಿಯ ಅಂಬೇಡ್ಕರ್ ಭವನದಲ್ಲಿ ಬುಧವಾರ, ಫಲಾನುಭವಿಗಳಿಗೆ ಬಗರ್ಹುಕುಂ ಸಾಗುವಳಿ ಚೀಟಿ, ಪಹಣಿಪತ್ರಿಕೆ, ಪೋಡಿ ದಾಖಲೆ, ಕಂದಾಯ ಗ್ರಾಮಗಳ ಹಕ್ಕುಪತ್ರ ವಿತರಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಅರಣ್ಯ ಹೊರತುಪಡಿಸಿ ಸುಮಾರು ವರ್ಷಗಳಿಂದ ಸರಕಾರಿ ಹಾಗೂ ಖಾಸಗಿ ಜಮೀನಿನಲ್ಲಿ ಮನೆ ಕಟ್ಟಿಕೊಂಡು ಊರಾಗಿ ಬೆಳೆದು ದಾಖಲೆಯಲ್ಲಿ ಗ್ರಾಮವಾಗದ ತಾಂಡಾ, ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುತ್ತೇವೆ. ತ್ರಿಶಂಕು ಪರಿಸ್ಥಿತಿಯಲ್ಲಿರುವ 3800 ತಾಂಡಾ, ಹಟ್ಟಿ ವಸತಿ ಪ್ರದೇಶಗಳಲ್ಲಿ ವಾಸಿಸುವ 1.5 ಲಕ್ಷ ಕುಟುಂಬಗಳಿಗೆ ಶಾಶ್ವತ ಹಕ್ಕುಪತ್ರ ನೀಡುತ್ತೇವೆ ಎಂದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಅನಧಿಕೃತವಾಗಿ ಸರಕಾರಿ ಜಮೀನು ಸಾಗುವಳಿ ಮಾಡಿಕೊಂಡು ಹಕ್ಕುಪತ್ರ ಪಡೆಯುವುದಕ್ಕೆ ಫಾರ್ಮ್ 57ರಲ್ಲಿ ಬಗರ್ ಹುಕುಂ ಸಮಿತಿಗೆ ಅರ್ಜಿ ಸಲ್ಲಿಸಿದವರಲ್ಲಿ 630 ರೈತರಿಗೆ ಮುಂದಿನ ಒಂದು ತಿಂಗಳೊಳಗೆ ಹಕ್ಕುಪತ್ರ ನೀಡುತ್ತೇವೆ ಎಂದರು.

ಜಿಲ್ಲೆಯಲ್ಲಿ 16 ದಾಖಲೆ ರಹಿತ ಸಹಿತ ಇಂತಹ ಗ್ರಾಮಗಳಿವೆ. ನೂರಾರು ವರ್ಷದಿಂದ ಬಡವರು ಅಲ್ಲಿ ಬದುಕುತ್ತಿದ್ದಾರೆ. ಅದರಲ್ಲಿ ಮುಂಡಗೋಡದಲ್ಲಿ 8 ಹಾಗೂ ಹಳಿಯಾಳದಲ್ಲಿ 8ಗ್ರಾಮಗಳಿದ್ದು ಅವುಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುತ್ತಿದ್ದೇವೆ. ಅಲ್ಲಿ ವಾಸಿಸುವ 50 ಕುಟುಂಬಗಳಿಗೆ ಈಗ ಹಕ್ಕುಪತ್ರ ನೀಡುತ್ತಿದ್ದು ವಾರದಲ್ಲಿ 1125 ಕುಟುಂಬಕ್ಕೂ ನೀಡುತ್ತೇವೆ. ಬಾಕಿ 300 ಕುಟುಂಬಗಳು ಕನಿಷ್ಠ ಶುಲ್ಕ ತುಂಬಬೇಕಿದ್ದು ಅದಾದ ನಂತರ ಅವರಿಗೂ ನೀಡುತ್ತೇವೆ ಎಂದರು.

ಅರಣ್ಯ ಹಕ್ಕು ಅರ್ಜಿಗಳು ದೊಡ್ಡ ಸಂಖ್ಯೆಯಲ್ಲಿ ವಿಲೇವಾರಿ ಆಗಬೇಕಾಗಿದೆ. ಜಿಪಂ, ತಾಪಂ ಸದಸ್ಯರು ಇಲ್ಲ ಎಂದು ಅರಣ್ಯ ಹಕ್ಕು ಸಮಿತಿ ಸ್ಥಗಿತವಾಗಬಾರದು ಎಂದು ಸಿಎಂ ಸೂಚನೆ ನೀಡಿದ್ದಾರೆ. ಆದ್ದರಿಂದ ಸ್ಥಳಿಯ ಸಂಸ್ಥೆಗಳಲ್ಲಿ ಜನಪ್ರತಿನಿಧಿಗಳಿಲ್ಲದ್ದಿದ್ದರೂ ಆಯಾ ಆಡಳಿತಾಧಿಕಾರಿಗಳೇ ಇದರ ಸದಸ್ಯರನ್ನಾಗಿ ಮಾಡಿಕೊಂಡು ಅರಣ್ಯ ಹಕ್ಕು ಸಮಿತಿ ಕೆಲಸ ಮಾಡಬೇಕು ಎಂದು ಸಚಿವರು ಜಿಲ್ಲಾಧಿಕಾರಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕರಾದ ಭೀಮಣ್ಣ ನಾಯ್ಕ, ಶಿವರಾಮ ಹೆಬ್ಬಾರ, ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಸಹಾಯಕ ಆಯುಕ್ತೆ ಕೆ.ವಿ.ಕಾವ್ಯಾರಾಣಿ ಮುಂತಾದವರು ಇದ್ದರು.

PPeepal Media

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು