ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಿ.ಮೋದಿಯವರೇ, ಆಪರೇಷನ್‌ ಕಮಲಕ್ಕೆ ಸಾವಿರ ಕೋಟಿ ಹಣ ಎಲ್ಲಿಂದ ಬಂತು? ಸಿದ್ದರಾಮಯ್ಯ ಪ್ರಶ್ನೆ

P

Peepal Media Desk • ರಾಜಕೀಯ

• 2 ನಿಮಿಷದ ಓದು

ಮಿ.ಮೋದಿಯವರೇ, ಆಪರೇಷನ್‌ ಕಮಲಕ್ಕೆ ಸಾವಿರ ಕೋಟಿ ಹಣ ಎಲ್ಲಿಂದ ಬಂತು? ಸಿದ್ದರಾಮಯ್ಯ ಪ್ರಶ್ನೆ

ಮಿಸ್ಟರ್ ಮೋದಿಯವರೇ, ಆಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ಎಲ್ಲಿಂದ ಬಂತು ? ದೇಶದ ಜನಕ್ಕೆ ಉತ್ತರಿಸಿ. ಚಿತ್ರದುರ್ಗ ಕಾಂಗ್ರೆಸ್ ಪಕ್ಷದ ಭದ್ರ ಕೋಟೆ. ನಮ್ಮ ಅಭ್ಯರ್ಥಿ ಚಂದ್ರಪ್ಪ 2 ಲಕ್ಷಕ್ಕೂ ಹೆಚ್ಚು ಅಂತರದಿಂದ ಗೆಲ್ತಾರೆ BJP ಯ ಕಾರಜೋಳ ಅವರ ಬಳಿ ಸಿಕ್ಕಾಪಟ್ಟೆ ಹಣ ಇರಬಹುದು. ಚಂದ್ರಪ್ಪ ಅವರಲ್ಲಿ ಜನಸೇವೆ ಮಾಡುವ ಸಜ್ಜನಿಕೆ, ಕಾಳಜಿ ಇದೆ. ಆದ್ದರಿಂದ ಚಿತ್ರದುರ್ಗದ ಜನತೆ ಮಿಸ್ಟರ್ ಕಾರಜೋಳ್ ಪ್ಲೀಸ್ ಗೋ ಬ್ಯಾಕ್ ಎಂದು ಒಕ್ಕೋರಲಿನಿಂದ ಹೇಳಬೇಕು: ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ ಏ. 4: ಆಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ಎಲ್ಲಿಂದ ಬಂತು ಮಿಸ್ಟರ್ ಮೋದಿಯವರೇ? ಕಾಂಗ್ರೆಸ್ ಮತ್ತು ಬೇರೆ ಪಕ್ಷದ ಶಾಸಕರುಗಳಿಗೆ ಕೋಟಿ ಕೋಟಿ ಕೊಡುವುದಕ್ಕೆ ಸಾವಿರಾರು ಕೋಟಿ ಹಣ ಎಲ್ಲಿಂದ ಬಂತು, ಅದು ಕಪ್ಪು ಹಣ ಅಲ್ಲವೇ ದೇಶದ ಜನಕ್ಕೆ ಉತ್ತರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು.

ಚಿತ್ರದುರ್ಗ ಲೋಕಸಭಾ ಅಭ್ಯರ್ಥಿ ಚಂದ್ರಪ್ಪ ಅವರ ಪರವಾಗಿ ಆಯೋಜಿಸಿದ್ದ ಬೃಹತ್ ಬಹಿರಂಗ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಇವರು, “ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬ ಭಾರತೀಯನ ಕುಟುಂಬಕ್ಕೆ 15 ಲಕ್ಷ ರೂಪಾಯಿ ಕೊಡ್ತೀವಿ ಅಂದ್ರಲ್ಲಾ ಕೊಟ್ರಾ? ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂತ ಭಾಷಣ ಮಾಡಿದ್ರು. ಆದಾಯ ಒಂದು ರೂಪಾಯಿ ಕೂಡ ಹೆಚ್ಚಾಗಲಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀವಿ ಅಂದ್ರಲ್ಲಾ? ಮಾಡಿದ್ರಾ ಮೋದಿಯವರೇ?” ಎಂದು ಪ್ರಶ್ನಿಸಿದ್ದಾರೆ.

“ಪೆಟ್ರೋಲ್, ಡೀಸೆಲ್, ಅಡುಗೆ ಗ್ಯಾಸ್, ರಸಗೊಬ್ಬರ, ಎಣ್ಣೆ, ಕಾಳು ಬೇಳೆ ಎಲ್ಲವೂ ಅತ್ಯಂತ ಕಡಿಮೆ ಬೆಲೆಗೆ ಸಿಗುವಂತೆ ಮಾಡ್ತೀನಿ ಅಂದಿದ್ರಲ್ಲಾ ಮಾಡಿದ್ರಾ ಮಿಸ್ಟರ್ ಮೋದಿ?”

“ನಿಮ್ಮ ಕಾಲದಲ್ಲಿ ಆದ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಕುಟುಂಬಗಳಿಗೆ ಕೊಂಚ ನೆಮ್ಮದಿ ನೀಡಬೇಕು ಎನ್ನುವ ಕಾರಣದಿಂದ ಐದು ಗ್ಯಾರಂಟಿ ಜಾರಿ ಮಾಡಿದೆವು. ಪ್ರತೀ ಕುಟುಂಬಕ್ಕೆ 4 ರಿಂದ 6 ಸಾವಿರ ರೂಪಾಯಿ ಉಳಿತಾಯವಾಗಿ ನನ್ನ ಜನರ ಕೊಳ್ಳುವ ಶಕ್ತಿ ಹೆಚ್ಚಾಯಿತು. ಇದು ನಮ್ಮ ಸಾಧ್ಯವಾಗಿದ್ದು ಕಾಂಗ್ರೆಸ್ ಸರ್ಕಾರದಿಂದ ಮಿಸ್ಟರ್ ಮೋದಿಯವರೇ…”

“ಈ ದೇಶದ ಶೇ 95 ರಷ್ಟು ಬಹುಸಂಖ್ಯಾತ ಜನ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳನ್ನು ಒದಗಿಸುತ್ತಿರುವುದು ನಮ್ಮ ಸಂವಿಧಾನ. ಈ ಸಂವಿಧಾನವನ್ನು ಬದಲಾಯಿಸುತ್ತೀವಿ ಎನ್ನುವುದು ಬಿಜೆಪಿಯ ಅಜೆಂಡಾ. ಇದನ್ನು ಬಿಜೆಪಿ ಕೇಂದ್ರ ಸಚಿವರಾಗಿದ್ದವರೇ ಬಹಿರಂಗವಾಗಿ ಹೇಳಿದ್ದಾರೆ. ಆದ್ದರಿಂದ ದೇಶದ ಸಂವಿಧಾನವನ್ನು ಬದಲಾಯಿಸಿ ಮನುಸ್ಮೃತಿ ಜಾರಿಗೆ ತರಲು ಅವಕಾಶ ಕೊಡಬೇಡಿ,” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಅಧಿಕಾರದಲ್ಲಿದ್ದಾಗ ಹಣ ಲೂಟಿ ಮಾಡೋದು, ಆಮೇಲೆ ಜನರನ್ನು ಭಾವನಾತ್ಮಕವಾಗಿ ಕೆರಳಿಸಿ ಬಕ್ರಾ ಮಾಡೋದು ಅವರ ಅವಕಾಶ. ಚಿತ್ರದುರ್ಗದ ಬಿಜೆಪಿ ಅಭ್ಯರ್ಥಿ ಕಾರಜೋಳ ಅವರು ಇಲ್ಲಿಯವರಲ್ಲ. ಕಾಂಗ್ರೆಸ್ ಚಂದ್ರಪ್ಪ ಅವರು ಸೋತಾಗಲೂ ಜನರ ನಡುವೆ ಇದ್ದು ತಪಸ್ಸಿನಂತೆ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಸಮಾಜ ಕಲ್ಯಾಣ ಸಚಿವರಾಗಿ ಕಾರಜೋಳ ಅವರು ಹಿಂದುಳಿದವರು, ದಲಿತರು, ಶ್ರಮಿಕರು, ದುಡಿಯುವ ವರ್ಗಗಳಿಗೆ ಏನೇನೂ ಮಾಡಿಲ್ಲ. ಕಾರಜೋಳ ಅವರ ಬಳಿ ಸಿಕ್ಕಾಪಟ್ಟೆ ಹಣ ಇರಬಹುದು. ಆದರೆ ಚಂದ್ರಪ್ಪ ಅವರಲ್ಲಿ ಜನಸೇವೆ ಮಾಡುವ ಸಜ್ಜನಿಕೆ, ಕಾಳಜಿ ಇದೆ. ಆದ್ದರಿಂದ ಚಿತ್ರದುರ್ಗದ ಜನತೆ ಮಿಸ್ಟರ್ ಕಾರಜೋಳ್ ಪ್ಲೀಸ್ ಗೋ ಬ್ಯಾಕ್ ಎಂದು ಒಕ್ಕೋರಲಿನಿಂದ ಹೇಳಬೇಕು ಎಂದು ಕರೆ ನೀಡಿದರು.

ಇವತ್ತಿನವರೆಗೂ ಬಿಜೆಪಿ ರಾಜ್ಯದಲ್ಲಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದಿಲ್ಲ. ಎರಡೂ ಬಾರಿ ಹಿಂಬಾಗಿಲಿನಿಂದಲೇ ಅಧಿಕಾರಕ್ಕೆ ಬಂದಿದ್ದಾರೆ. ವಾಮ ಮಾರ್ಗದ ಬಿಜೆಪಿಗೆ ನಾಡಿನ ಜನತೆ ತಕ್ಕ ಪಾಠ ಕಲಿಸಿದ್ದಾರೆ ಎಂದರು.

ಬಿಜೆಪಿ ರಾಜ್ಯಕ್ಕೆ ಮಾಡಿದ ದ್ರೋಹ ಒಂದಾ, ಎರಡಾ? ಮೋದಿ ಮಹಾದ್ರೋಹಕ್ಕೆ ತಕ್ಕ ಪಾಠ ಕಲಿಸಿ

ಬಿಜೆಪಿ ರಾಜ್ಯಕ್ಕೆ ಮಾಡಿದ ದ್ರೋಹ ಒಂದೆರಡಲ್ಲ. ರಾಜ್ಯಕ್ಕೆ ಪ್ರವಾಹ ಬಂದಾಗ, ಬರಗಾಲ ಬಂದಾಗ ರಾಜ್ಯದ ಜನರ ಕಡೆ ತಿರುಗಿ ಕೂಡ ನೋಡಲಿಲ್ಲ. ರಾಜ್ಯದ ಪಾಲಿನ ಬರಗಾಲದ ಅನುದಾನವನ್ನು ಒಂದು ರೂಪಾಯಿ ಕೂಡ ಕೊಡಲಿಲ್ಲ. ರಾಜ್ಯಕ್ಕೆ ಆದ ಅನ್ಯಾಯವನ್ನು ಬಿಜೆಪಿ ಸಂಸದರು ನೆಪಕ್ಕೂ ಪ್ರಶ್ನಿಸಲಿಲ್ಲ. ರಾಜ್ಯದ ನೀರಾವರಿಗೆ ಹಣ ಕೊಡ್ತೀವಿ ಅಂತ ಕೇಂದ್ರ ಬಜೆಟ್ ನಲ್ಲೂ ಘೋಷಿಸಿದರು. ಅದರಲ್ಲಿ ಒಂದು ರೂಪಾಯಿಯನ್ನೂ ನಮ್ಮ ರಾಜ್ಯಕ್ಕೆ ಕೊಡಲಿಲ್ಲ. ಮೇಲಿಂದ ಮೇಲೆ ರಾಜ್ಯಕ್ಕೆ ದ್ರೋಹ ಮಾಡುತ್ತಿರುವ ತಕ್ಕ ಪಾಠ ಕಲಿಸಿ ಎಂದರು.

ಅಮಿತ್ ಶಾ ಹಸಿ ಸುಳ್ಳುಗಾರ

RSS ನಲ್ಲಿ ಈ BJP ಯವರಿಗೆ ಸುಳ್ಳು ಹೇಳುವ ತರಬೇತಿ ಕೊಡ್ತಾರೆ. ಸುಳ್ಳಿನ ಮೇಲೆ ಸುಳ್ಳು ಹೇಳಿಕೊಂಡು ತಿರುಗ್ತಾ ಇದಾರೆ. ರಾಜ್ಯದ ಜನರ ಪಾಲಿನ ಬರಗಾಲದ ಹಣ ಏಕೆ ವಾಪಾಸ್ ಕೊಡಲಿಲ್ಲ ಎಂದು ನಾಡಿನ ಜನತೆ ಪ್ರಶ್ನೆ ಕೇಳಿದ್ರು. ಆದರೆ ರಾಜ್ಯ ಸರ್ಕಾರ 3 ತಿಂಗಳು ಲೇಟಾಗಿ ಮನವಿ ಮಾಡಿದ್ದಾಗಿ ಅಮಿತ್ ಶಾ ಭಯಾನಕ ಹಸಿ ಸುಳ್ಳು ಹೇಳಿದರು.

ಬಡವರ ರಕ್ತ ಕುಡಿಯುತ್ತಾ ನಾಚಿಕೆ, ಮಾನ, ಮರ್ಯಾದೆ ಇಲ್ಲ ಇವರಿಗೆ. ಇಷ್ಟು ಭೀಕರ ಬರಗಾಲ ಬಂದಿದ್ದರೂ ಒಂದೇ ಒಂದು ರೂಪಾಯಿ ರಾಜ್ಯದ ಪಾಲಿನ ಹಣ ಕೊಡದೆ ಸುಳ್ಳು ಹೇಳಿಕೊಂಡು ತಿರುಗ್ತೀರಲ್ಲಾ, ನಾಚಿಕೆ ಇಲ್ವಾ ಇವರಿಗೆ ಎಂದು ಖಾರವಾಗಿ ಪ್ರಶ್ನಿಸಿದರು.

ಸಚಿವರಾದ ಸತೀಶ್ ಜಾರಕಿಹೊಳಿ, ಡಿ.ಸುಧಾಕರ್, ಲೋಕಸಭಾ ಅಭ್ಯರ್ಥಿ ಚಂದ್ರಪ್ಪ, ದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಶಾಸಕರಾದ ಎನ್.ವೈ.ಗೋಪಾಲಕೃಷ್ಣ, ರಘುಮೂರ್ತಿ,ವೀರೇಂದ್ರ ಪಪ್ಪಿ, ಪಾವಗಡ ವೆಂಕಟೇಶ್, ಗೋವಿಂದಪ್ಪ, ಬಸಂತಪ್ಪ ಸೇರಿ ಚಿತ್ರದುರ್ಗ ದಾವಣಗೆರೆ ಜಿಲ್ಲೆಯ ಶಾಸಕರುಗಳು, ಮಾಜಿ ಶಾಸಕರುಗಳು ಹಾಗೂ ಜಿಲ್ಲೆ ಮತ್ತು ತಾಲ್ಲೂಕು , ಬ್ಲಾಕ್ ಮುಖಂಡರುಗಳು ಉಪಸ್ಥಿತರಿದ್ದರು.

P

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version