ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

“ಪ್ರತಾಪ್ ಸಿಂಹ ಅವರೇ.. ನಿಮ್ಮ ಕತ್ತಲೆ ಜಗತ್ತಿನ ರಹಸ್ಯಗಳ ಬಗ್ಗೆ ಭಯವೇಕೆ?” : ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ

PPeepal Media Desk

Peepal Media Desk ರಾಜಕೀಯ, ರಾಜ್ಯ

• 1 ನಿಮಿಷದ ಓದು

“ಪ್ರತಾಪ್ ಸಿಂಹ ಅವರೇ.. ನಿಮ್ಮ ಕತ್ತಲೆ ಜಗತ್ತಿನ ರಹಸ್ಯಗಳ ಬಗ್ಗೆ ಭಯವೇಕೆ?” : ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ

“ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ ಸುದ್ದಿಯಲ್ಲಿರಲು ಸಲುವಾಗಿ ಮೈಸೂರಿನ ಪತ್ರಕರ್ತರ ಕೈಕಾಲು ಹಿಡಿದು ಪ್ರತಿದಿನವೂ ನನ್ನ ಪ್ರತಿಕ್ರಿಯೆ ತಗೋಳಿ ಅಂತ ಅಂಗಲಾಚುತ್ತಿದ್ದಾರೆ ಎಂಬುದು ಮಾಧ್ಯಮ ಮಿತ್ರರ ಆಫ್ ದಿ ರೆಕಾರ್ಡ್ ವರದಿ!” ಎಂದು ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹರನ್ನು ಉಲ್ಲೇಖಿಸಿದ ಸಚಿವ ಪ್ರಿಯಾಂಕ್ ಖರ್ಗೆ “ಎಲ್ಲಾ ವಿಷಯಕ್ಕೂ ಬಾಯಿ ಹಾಕುವ ಪ್ರತಾಪ್ ಸಿಂಹರವರು ಬಿಜೆಪಿ ಪಕ್ಷದ ಯಾವ “ಪೊಸಿಷನ್”ನಲ್ಲಿದ್ದಾರೆ ಎನ್ನುವುದನ್ನು ಮೊದಲು ಸ್ಪಷ್ಟಪಡಿಸಬೇಕು!” ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ನಲ್ಲಿ ಪ್ರಿಯಾಂಕ್ ಖರ್ಗೆಯ ಅರ್ಹತೆ ಏನು ಎಂಬ ಬಗ್ಗೆ ಕೇಳಿದ ಪ್ರತಾಪ್ ಸಿಂಹರಿಗೆ “ನನ್ನ ಅರ್ಹತೆಯನ್ನು ಪ್ರಶ್ನಿಸುವ ಪ್ರತಾಪ್ ಸಿಂಹರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದು ಅವರಿಗೆ ಅರ್ಹತೆ ಇಲ್ಲದ್ದಕ್ಕೆ ಅಲ್ಲವೇ? ನನ್ನ ಅರ್ಹತೆಯ ಬಗ್ಗೆ, ಇಲಾಖೆಗಳಲ್ಲಿ ನನ್ನ ಕಾರ್ಯವೈಖರಿಯ ಬಗ್ಗೆ ನಾನು ಹೇಳಿಕೊಳ್ಳುವುದಕ್ಕಿಂತ ಬಿಜೆಪಿಯ ಕೇಂದ್ರ ಸರ್ಕಾರದ ದಾಖಲೆಗಳು, ಅಂಕಿ ಅಂಶಗಳು ಹೇಳುತ್ತವೆ” ಎಂದು ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.

“ಪಂಚಾಯತ್ ರಾಜ್ ವಿಕೇಂದ್ರಿಕರಣದಲ್ಲಿ ಕರ್ನಾಟಕ ನಂ1 ಸ್ಥಾನದಲ್ಲಿದೆ ಎಂದು ಹೇಳಿದ್ದು ಕೇಂದ್ರ ಸರ್ಕಾರ. ಕರ್ನಾಟಕದ ಗ್ರಾಮ ಪಂಚಾಯಿತಿಗಳು ತೆರಿಗೆ ಸಂಗ್ರಹದಲ್ಲಿ ದಾಖಲೆಯ ಸಾಧನೆ ಮಾಡಿದೆ ಎಂದು ಒಪ್ಪಿಕೊಂಡಿದ್ದು ಕೇಂದ್ರ ಸರ್ಕಾರ. ಐಟಿ ರಫ್ತಿನಲ್ಲಿ 38% ಪಾಲು ಹೊಂದುವ ಮೂಲಕ ಕರ್ನಾಟಕ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದೆ, ಅತಿ ಹೆಚ್ಚು R&D ಕೇಂದ್ರಗಳನ್ನು ಹೊಂದುವ ಮೂಲಕ ನವೋದ್ಯಮಗಳಿಗೆ ಉತ್ತೇಜನ ನೀಡುವ ಪ್ರಥಮ ರಾಜ್ಯ ಕರ್ನಾಟಕ. ಪ್ರತಾಪ್ ಸಿಂಹ ಅವರು ಒಂದಿಷ್ಟು ಅಧ್ಯಯನ ನಡೆಸುವ, ಆಗುಹೋಗುಗಳ ಸುದ್ದಿಯನ್ನು ಓದುವ ಅಭ್ಯಾಸ ಹೊಂದಿದ್ದರೆ ಇದೆಲ್ಲವೂ ತಿಳಿಯುತ್ತಿತ್ತು” ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

“ಅಂದಹಾಗೆ ಪ್ರತಾಪ್ ಸಿಂಹ ಅವರೇ, ನಿಮ್ಮ ನರೇಂದ್ರ ಮೋದಿಯವರ ವಿದ್ಯಾರ್ಹತೆ ಏನು? ಸರ್ಟಿಫಿಕೇಟ್ ಎಲ್ಲಿ?” ಎಂದು ಪ್ರತಾಪ್ ಸಿಂಹರಿಗೆ ಮೋದಿ ಬಗ್ಗೆ ಪ್ರಶ್ನೆ ಎತ್ತಿದ್ದಾರೆ.

“ಪೇಪರ್ ಸಿಂಹ, ನಿಮ್ಮ ಕತ್ತಲೆ ಜಗತ್ತಿನಲ್ಲಿ ಎಂತೆಂತಹ ಕರಾಳ ಕತೆಗಳ ರಹಸ್ಯ ಅಡಗಿವೆ? ಕತ್ತಲೆ ಜಗತ್ತಿನ ರಹಸ್ಯಗಳ ಪುಸ್ತಕಕ್ಕೆ ನೀವು ತಡೆಯಾಜ್ಞೆ ತಂದಿರುವುದೇಕೆ? ಕತ್ತಲೆ ಜಗತ್ತಿನ ರಹಸ್ಯಗಳ ಬಗ್ಗೆ ಭಯವೇಕೆ?” ಎಂದು ಗಂಭೀರವಾಗಿ ಪ್ರಶ್ನಿಸಿದ್ದಾರೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು