ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಗಬ್ಬರ್ ಸಿಂಗ್ ಈ 8 ವರ್ಷ “GST ಲೂಟಿ ಉತ್ಸವ” ಮಾಡಿದ್ದು ದೇಶ ಮರೆಯುವುದೇ? : ಸಚಿವ ಪ್ರಿಯಾಂಕ್ ಖರ್ಗೆ

PPeepal Media Desk

Peepal Media Desk ರಾಜಕೀಯ

• 1 ನಿಮಿಷದ ಓದು

ಗಬ್ಬರ್ ಸಿಂಗ್ ಈ 8 ವರ್ಷ “GST ಲೂಟಿ ಉತ್ಸವ” ಮಾಡಿದ್ದು ದೇಶ ಮರೆಯುವುದೇ? : ಸಚಿವ ಪ್ರಿಯಾಂಕ್ ಖರ್ಗೆ

“ಗಬ್ಬರ್ ಸಿಂಗ್ ದರೋಡೆಯ ಪ್ರಮಾಣವನ್ನು ಕಡಿಮೆ ಮಾಡಿದ್ದಾನೆ, ಇದಕ್ಕಾಗಿ ಎಲ್ಲರೂ ಉತ್ಸವ ಆಚರಿಸಬೇಕು. ಈ ಗಬ್ಬರ್ ಸಿಂಗ್ 8 ವರ್ಷ ಮಾಡಿದ ಪೂರ್ಣ ಪ್ರಮಾಣದ ಲೂಟಿಯನ್ನು ಎಲ್ಲರೂ ಮರೆತುಬಿಡಬೇಕು! ಕೇಂದ್ರ ಸರ್ಕಾರದ ವರಸೆ ಇದು!” ಎಂದು ಸಚಿವ ಪ್ರಿಯಾಂಕ್ ಖರ್ಗೆ ಮೋದಿ ಆಡಳಿತಕ್ಕೆ ಲೇವಡಿ ಮಾಡಿದ್ದಾರೆ.

“ಈ ದೇಶದ ಜನರನ್ನು ಹೇಗೆ ಬೇಕಾದರೂ ಮರಳು ಮಾಡಬಹುದಾದಷ್ಟು ಮೂರ್ಖರು ಎಂದು ಭ್ರಮಿಸಿದೆ ಬಿಜೆಪಿ. ಆದರೆ ಜನರು ಮೂರ್ಖರಲ್ಲ. ಈಗ “GST ಉಳಿತಾಯ ಉತ್ಸವ“ ಮಾಡಬೇಕಂತೆ, ಕಳೆದ 8 ವರ್ಷದಿಂದ ”GST ಲೂಟಿ ಉತ್ಸವ” ಮಾಡುತ್ತಿದ್ದರಲ್ಲವೇ?” ಎಂದು ತಮ್ಮ ಜಾಲತಾಣದ ಮೂಲಕ ಪ್ರಶ್ನೆ ಎತ್ತಿದ್ದಾರೆ.

“ಜನರನ್ನು ಬಾವಿಗೆ ತಳ್ಳಿದ್ದು ಇವರೇ, ಈಗ ಬಾವಿಯಿಂದ ಮೇಲೇತ್ತಲು ಏಣಿ ಕೊಟ್ಟಿದ್ದೇವೆ ಎನ್ನುತ್ತಿರುವವರೂ ಇವರೇ. ಏಣಿ ಕೊಟ್ಟಿದ್ದಕ್ಕೆ ಕ್ರೆಡಿಟ್ ತೆಗೆದುಕೊಳ್ಳಲು ಹವಣಿಸುತ್ತಿದೆ. 8 ವರ್ಷದಿಂದ ಜನರನ್ನು ಬಾವಿಗೆ ತಳ್ಳಿದ್ದರ ಪಾಪದ ಹೊಣೆಯೂ ಮೋದಿಯವರದ್ದೇ” ಎಂದು ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

GST ಇಳಿಕೆ ಮಾಡಿದ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಮಾಧ್ಯಮಗಳ ಮುಂದೆ ಬಂದು GST ಇಳಿಕೆ ಉತ್ಸವ ಮಾಡಿ ಎಂದು ಜನತೆಗೆ ಕರೆ ನೀಡಿದ್ದರು. ಈ 8 ವರ್ಷಗಳ ಅವಧಿಯಲ್ಲಿ ದೇಶಾದ್ಯಂತ GST ಏರಿಸಿ ಜನರಿಗೆ ಹೊರಿಸಿದ ಹೊರೆ ಎಂತದ್ದು ಎಂಬ ಬಗ್ಗೆ ಈಗ ಪ್ರಿಯಾಂಕ್ ಖರ್ಗೆ ಮೋದಿ ಆಡಳಿತಕ್ಕೆ ಪ್ರಶ್ನೆ ಎತ್ತಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಗಬ್ಬರ್ ಸಿಂಗ್ ಟ್ಯಾಕ್ಸ್ ಕಡಿತಗೊಳಿಸಬೇಕು ಎಂದು ಈ ಹಿಂದೆಯೇ ಹಲವು ಬಾರಿ ಆಗ್ರಹಿಸಿದ್ದಾಗ ಅವರ ಮಾತುಗಳನ್ನು ವ್ಯಂಗ್ಯ ಮಾಡಿದ್ದ ಬಿಜೆಪಿಯವರಿಗೆ ಈಗ ಜನಾಕ್ರೋಶಕ್ಕೆ ಬೆದರಿ GST ಕಡಿತಗೊಳಿಸಿದ್ದರ ಕ್ರೆಡಿಟ್ ತೆಗೆದುಕೊಳ್ಳಲು ನಾಚಿಕೆ ಎನಿಸುವುದಿಲ್ಲವೇ? ಎಂದು ಟೀಕಿಸಿದ್ದಾರೆ.

ದುಬಾರಿ GST ಜಾರಿ ಮಾಡಿದಾಗಲೂ ಮಾಸ್ಟರ್ ಸ್ಟ್ರೋಕ್ ಅಂದರು, ಈಗ GST ಕಡಿತಗೊಳಿಸಿದ್ದನ್ನೂ ಮಾಸ್ಟರ್ ಸ್ಟ್ರೋಕ್ ಅನ್ನುತ್ತಿದ್ದಾರೆ!ಆದರೆ ಈ ಎಂಟು ವರ್ಷಗಳಲ್ಲಿ ಜನತೆಗೆ, ದೇಶದ ಆರ್ಥಿಕತೆಗೆ ಆಗಿರುವ ಹಾನಿಯನ್ನು ಭರಿಸುವವರು ಯಾರು? ಈ 8 ವರ್ಷಗಳಲ್ಲಿ ಹಲವು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು GST ಪರಿಣಾಮದಿಂದ ಮುಚ್ಚಿಹೋಗಿದ್ದಕ್ಕೆ ಜವಾಬ್ದಾರಿ ಯಾರು? ಎಂದು ಪ್ರಶ್ನಿಸಿದ್ದಾರೆ.

ಈ 8 ವರ್ಷಗಳಲ್ಲಿ ದೇಶದ ಆರ್ಥಿಕತೆಗೆ ಬಿದ್ದ ಹೊಡೆತಕ್ಕೆ ಹೊಣೆ ಯಾರು? ಆಗಿರುವ ಉದ್ಯೋಗ ನಷ್ಟಕ್ಕೆ ಜವಾಬ್ದಾರಿ ಯಾರು? ಇದೆಲ್ಲವಕ್ಕೂ ಮೋದಿಯವರೇ ಹೊಣೆಯಲ್ಲವೇ? ಎಂದು ಪ್ರಶ್ನೆ ಎತ್ತಿದ್ದಾರೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು