ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಹಾ ಮೈತ್ರಿಕೂಟಕ್ಕೆ ಮಹತ್ವ ಪಡೆದುಕೊಳ್ಳಲಿದೆಯೇ ಲಾಲೂ, ನಿತೀಶ್, ಸೋನಿಯಾಗಾಂಧಿ ಭೇಟಿ!?

PPeepal Media

Peepal Media • ರಾಜಕೀಯ

• 1 ನಿಮಿಷದ ಓದು

ಮಹಾ ಮೈತ್ರಿಕೂಟಕ್ಕೆ ಮಹತ್ವ ಪಡೆದುಕೊಳ್ಳಲಿದೆಯೇ ಲಾಲೂ, ನಿತೀಶ್, ಸೋನಿಯಾಗಾಂಧಿ ಭೇಟಿ!?

ರಾಷ್ಟ್ರ ಮಟ್ಟದ ಮಹತ್ವದ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಭಾನುವಾರ ನಿತೀಶ್ ಕುಮಾರ್ ಮತ್ತು ಲಾಲೂ ಪ್ರಸಾದ್ ಯಾದವ್ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರ ಭೇಟಿ ಮಾಡಿ ಮುಂದಿನ ರಾಜಕೀಯ ನಿರ್ಧಾರದ ಬಗ್ಗೆ ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಭಾನುವಾರ ದೆಹಲಿಯಲ್ಲಿ ನಡೆಯಬಹುದಾದ ಈ ಚರ್ಚೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಬಂದರೆ ಸೂಕ್ತ ಎಂದು ನಿತೀಶ್ ಕುಮಾರ್ ಮತ್ತು ಲಾಲೂ ಪ್ರಸಾದ್ ಯಾದವ್ ಅಭಿಪ್ರಾಯ ಪಟ್ಟಿದ್ದರೆ ಇತ್ತ, ರಾಹುಲ್ ಗಾಂಧಿ “ಭಾರತ್ ಜೋಡೋ ಯಾತ್ರೆ” ಮುಗಿಯುವ ವರೆಗೂ ಯಾವುದೇ ರಾಜಕೀಯ ಚರ್ಚೆಗೂ ತೊಡಗಿಸಿಕೊಳ್ಳುವುದಿಲ್ಲ ಎಂದು ಅಂದಾಜಿಸಲಾಗಿದೆ.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ನಿತೀಶ್ ಕುಮಾರ್ ಅವರದ್ದು 6 ವರ್ಷಗಳ ನಂತರದ ಭೇಟಿ ಇದಾಗಿದೆ. ಇತ್ತೀಚೆಗೆ ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿಯ ಸಂದರ್ಭದಲ್ಲಿ ನಿತೀಶ್ ಕುಮಾರ್ ಗೆ ಸೋನಿಯಾ ಗಾಂಧಿಯವರ ಭೇಟಿ ಸಾಧ್ಯವಾಗಿರಲಿಲ್ಲ. ಸೋನಿಯಾ ಗಾಂಧಿಯವರು ಹೆಚ್ಚಿನ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಿದ್ದ ಹಿನ್ನೆಲೆಯಲ್ಲಿ ಭಾನುವಾರ ನಡೆಯಬಹುದಾದ ಚರ್ಚೆ ಮಹತ್ವ ಪಡೆದಿದೆ.

ಮೇಲ್ನೋಟಕ್ಕೆ ಇದು ಸೌಹಾರ್ದ ಭೇಟಿ ಎಂದು RJD ಮತ್ತು JDU ಮೂಲಗಳು ತಿಳಿಸಿದರೂ ಸ್ಥಳೀಯ ಮಟ್ಟದಲ್ಲಿ ಆಗಿರುವ ಮಹಾ ಮೈತ್ರಿಕೂಟವನ್ನು ರಾಷ್ಟ್ರ ಮಟ್ಟಕ್ಕೆ ಕೊಂಡೊಯ್ಯಬಹುದಾದ ಮಹತ್ವದ ಚರ್ಚೆ ನಡೆಯುವ ಸಾಧ್ಯತೆ ಇದೆ. ಇದರ ಜೊತೆಗೆ ಮಹಾಮೈತ್ರಿಕೂಟಕ್ಕೆ ಸೇರಬಹುದಾದ ಇನ್ನಿತರ ಪಕ್ಷಗಳ ಜೊತೆಗೆ ಮಾತುಕತೆ ನಡೆಸುವ ಬಗ್ಗೆಯೂ ಚರ್ಚೆ ನಡೆಯಲಿದೆ. ಅನಾರೋಗ್ಯದ ಕಾರಣಕ್ಕೆ ಸಧ್ಯದಲ್ಲೇ ವಿದೇಶಕ್ಕೆ ತೆರಳಲಿರುವ ಲಾಲೂ ಪ್ರಸಾದ್ ಯಾದವ್ ವಿದೇಶ ಪ್ರಯಾಣದ ಒಳಗೇ ಈ ಮಾತುಕತೆ ಮುಗಿಸುವ ತರಾತುರಿಯಲ್ಲಿದ್ದಾರೆ.

ವಿಶೇಷವಾಗಿ 2024 ರ ರಾಷ್ಟ್ರೀಯ ಮಹಾಚುನಾವಣೆ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದಿದೆ. ಸಧ್ಯ ಈ ಭೇಟಿಯಲ್ಲಿ ಜೊತೆಯಾಗುವ ಎಲ್ಲಾ ರಾಜಕೀಯ ಪಕ್ಷಗಳಿಗೂ ಬಿಜೆಪಿ ಪಕ್ಷ ಸಮಾನಾಂತರದ ವಿರೋಧಿ ಆಗಿದ್ದು, ಬಿಜೆಪಿ ಮಣಿಸಲು ಈ ಮಾತುಕತೆ, ಭೇಟಿ ಹಲವು ರೀತಿಯಲ್ಲಿ ಸಹಕಾರಿ ಆಗಲಿದೆ ಎಂದು ಅಂದಾಜಿಸಲಾಗಿದೆ.

ಜೊತೆಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷೀಯ ಚುನಾವಣೆ ಪ್ರಕ್ರಿಯೆಯಲ್ಲಿ ಇದ್ದು, ಮುಂದಿನ ಗುರುವಾರದಿಂದ ಪಕ್ಷದ ಅಧ್ಯಕ್ಷ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆಗಲಿದೆ. ಮುಂದಿನ ಮಹಾಮೈತ್ರಿಯ ನಾಯಕತ್ವ, ಮತ್ತು ಕಾಂಗ್ರೆಸ್ ನಾಯಕತ್ವ ಇವೆರಡೂ ಮುಂಬರುವ ಚುನಾವಣೆಗೆ ವಿಶೇಷ ಪಾತ್ರ ವಹಿಸಬಹುದು ಎಂದು ಹೇಳಲಾಗುತ್ತಿದೆ. ಪ್ರಾಥಮಿಕ ಹಂತದ ಮಾಹಿತಿಯ ಪ್ರಕಾರ ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ಶಶಿ ತರೂರ್, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನಡುವೆ ಸ್ಪರ್ಧೆ ನಿರೀಕ್ಷೆ ಇದ್ದರೂ, ಅಧ್ಯಕ್ಷೀಯ ರೇಸ್ ನಲ್ಲಿ ಮನೀಶ್ ತಿವಾರಿ, ದಿಗ್ವಿಜಯ್ ಸಿಂಗ್ ಅವರು ಕೂಡ ಸ್ಪರ್ಧೆಯ ಕಣಕ್ಕೆ ಬರುವ ಸಾಧ್ಯತೆ ಇದೆ.

ಸಧ್ಯ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಕೂಡಾ ಮೈತ್ರಿಕೂಟದ ಭೇಟಿ ಹಿನ್ನೆಲೆಯಲ್ಲಿ ಮಹತ್ವ ಪಡೆದಿದೆ. ಯಾವ ನಾಯಕ ಮೈತ್ರಿಕೂಟವನ್ನು ಜವಾಬ್ದಾರಿಯುತವಾಗಿ ತಗೆದುಕೊಳ್ಳಬಹುದು ಎಂದು ಅಂದಾಜಿಸಲಾಗುತ್ತಿದೆ.

PPeepal Media

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು