ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಖಾಲಿ ಇರುವ 35000 ಸಾವಿರ ನಿಮ್ಮ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು: ಸಿ.ಎಂ ಘೋಷಣೆ

PPeepal Media Desk

Peepal Media Desk ರಾಜಕೀಯ, ರಾಜ್ಯ

• 1 ನಿಮಿಷದ ಓದು

ಖಾಲಿ ಇರುವ 35000 ಸಾವಿರ ನಿಮ್ಮ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು: ಸಿ.ಎಂ ಘೋಷಣೆ

ಬೆಂಗಳೂರು ಜೂ 18: ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ನಿಮ್ಮ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ ವಜ್ರ ಮಹೋತ್ಸವವನ್ನು ಉದ್ಘಾಟಿಸಿ, ವಜ್ರಜ್ಯೋತಿ ಸ್ಮರಣ ಸಂಚಿಕೆ ಲೋಕಾರ್ಪಣೆ ಮಾಡಿ ಮಾತನಾಡಿದರು.

ನಮ್ಮದುನುಡಿದಂತೆನಡೆಯುವ ಸರ್ಕಾರ. ನಿಮ್ಮ ಬೇಡಿಕೆಗಳಪರಿಶೀಲಿಸಿಕ್ರಮ
ನಮ್ಮದು ನುಡಿದಂತೆ ನಡೆಯುವ ಸರ್ಕಾರ. ನಿಮ್ಮ ಬೇಡಿಕೆಗಳ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತೇವೆ. NPS ಜಾರಿ ಮಾಡಿದ್ದು ಕೇಂದ್ರ ಸರ್ಕಾರ. ನಾವು OPS ಜಾರಿಯನ್ನು ಪ್ರಣಾಳಿಕೆಯಲ್ಲೇ ಘೋಷಿಸಿದ್ದೇವೆ. ಈ ಬಗ್ಗೆ ಚರ್ಚಿಸಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಇದೇ ಸಂದರ್ಭದಲ್ಲಿ ಘೋಷಿಸಿದರು.

1964 ರಲ್ಲಿ ಆರಂಭವಾದ ನೌಕರರ ಸಂಘ ಇಷ್ಟು ಮಹತ್ತರ ವರ್ಷಗಳ ಕಾಲ ನಿರಂತರವಾಗಿ ನೌಕರರ ಕಷ್ಟ ಸುಖಗಳಿಗೆ ಸ್ಪಂದಿಸಿ, ಪ್ರಾಮಾಣಿಕ ಹೋರಾಟ ನಡೆಸುತ್ತಿದೆ. ಜೊತೆಗೆ ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಸುವ ಹೊಣೆಗಾರಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದೀರಿ. ಇದಕ್ಕೆ ನೀವೆಲ್ಲರೂ ಅಭಿನಂದನಾರ್ಹರು ಎಂದು ಶ್ಲಾಘಿಸಿದರು.

ಇಡೀ ಏಷ್ಯಾದಲ್ಲಿ ಮೊದಲಿಗೆ ವಿದ್ಯುತ್ ಉತ್ಪಾದನೆ ಆಗಿದ್ದು 1902 ರಲ್ಲಿ ಕರ್ನಾಟಕದಲ್ಲಿ. 1905 ರಲ್ಲಿ ಬೆಂಗಳೂರಿನಲ್ಲಿ ಪ್ರಥಮ ವಿದ್ಯುತ್ ಸರಬರಾಜು ಕಂಪನಿ ಆರಂಭಿಸಲಾಯಿತು. 1908 ರಲ್ಲಿ ಮೊದಲ ಬಾರಿ ಅರಮನೆಗೆ  ವಿದ್ಯುತ್ ಬಂತು. ಅಲ್ಲಿಂದ ಇಲ್ಲೀವರೆಗೆ    ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ನಾವು 34000 ಮೆಘಾ ವ್ಯಾಟ್ ಉತ್ಪಾದನೆ ಮಾಡುತ್ತಿರುವ ರಾಜ್ಯ ಎನ್ನುವ ಹೆಗ್ಗಳಿಕೆ ಕೇವಲ ನಮ್ಮ ರಾಜ್ಯದ್ದಾಗಿದೆ ಎಂದರು.

ಆಹಾರ ಉತ್ಪಾದನೆಯಲ್ಲಿ ನಾವು ಸ್ವಾವಲಂಬಿಗಳಾಗುತ್ತಿರುವುದು ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಿರುವ ಕಾರಣಕ್ಕೇ ಎಂದು ವಿಶ್ಲೇಷಿಸಿದರು.

ರೈತರಿಗೆ, ಕೃಷಿಗೆ, ಪಂಪ್ ಸೆಟ್ ಗಳಿಗೆ ಹಗಲಲ್ಲೂ 7 ಗಂಟೆ ಅಗತ್ಯ ವಿದ್ಯುತ್ ಸರಬರಾಜು ಮಾಡಲು ಶಕ್ತರಾಗುತ್ತೇವೆ. ಈ ಗುರಿ ಇಟ್ಟುಕೊಂಡು ಕೆಲಸಗಳು ನಡೆಯುತ್ತಿವೆ. 60000 ಮೆಘಾ ವ್ಯಾಟ್ ಉತ್ಪಾದನೆ ಗುರಿ ನಾವು ತಲುಪಿದ ತಕ್ಷಣ ಇದು ಸಾಧ್ಯವಗಲಿದೆ. ವಿದ್ಯುತ್ ಪ್ರಮುಖ ಕಚ್ಛಾವಸ್ತು ಎನ್ನುವುದನ್ನು ನಾವು ಮರೆಯಬಾರದು  ಎಂದರು.

ನೌಕರರು ಮತ್ತು ಕಾರ್ಮಿಕರು ಬಹಳ ಶ್ರಮ ವಹಿಸಿ ಕೆಲಸ ನಿರ್ವಹಿಸುತ್ತಿದ್ದೀರಿ. ನಿಮ್ಮ ಎಲ್ಲಾ ಬೇಡಿಕೆಗಳನ್ನೂ ಈಡೇರಿಸಲು ನಮ್ಮ ಸರ್ಕಾರ ಸಿದ್ಧವಿದೆ. ನಾವು ನಿಮ್ಮ ಜೊತೆಗೆ ಇದ್ದೇವೆ. ನೀವು ನಮ್ಮ ಜೊತೆಗೆ ಇರಿ ಎಂದು ಕರೆ ನೀಡಿದರು.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು