ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮೋದಿ ಮೋದಿ ಎನ್ನುವ ಯುವಕರ ಕಪಾಳಕ್ಕೆ ಬಾರಿಸಬೇಕು – ಶಿವರಾಜ ತಂಗಡಗಿ

PPeepal Media Desk

Peepal Media Desk ರಾಜಕೀಯ

• 1 ನಿಮಿಷದ ಓದು

ಮೋದಿ ಮೋದಿ ಎನ್ನುವ ಯುವಕರ ಕಪಾಳಕ್ಕೆ ಬಾರಿಸಬೇಕು – ಶಿವರಾಜ ತಂಗಡಗಿ

ಕೊಪ್ಪಳ: ಬಿಜೆಪಿಯ ಕೇಂದ್ರ ಸರ್ಕಾರವು ವರ್ಷಕ್ಕೆ ಎರಡು ಕೋಟಿ ಉದ್ಯೋಗಗಳನ್ನು ನೀಡುವುದಾಗಿ ಭರವಸೆ ನೀಡಿ ಅಧಿಕಾರಕ್ಕೆ ಬಂದಿತ್ತು. ಅದರ ಭರವಸೆಯಂತೆ ಅದು ಹತ್ತು ವರ್ಷಕ್ಕೆ ಇಪ್ಪತ್ತು ಕೋಟಿ ಉದ್ಯೋಗ ಸೃಷ್ಟಿಸಬೇಕಿತ್ತು ಆದರೆ ಹಾಗೆ ಉದ್ಯೋಗ ಸೃಷ್ಟಿಸದೆ ಅದು ಯುವಕರನ್ನು ವಂಚಿಸಿದೆ ಎಂದು ಸಚಿವ ಶಿವರಾಜ ತಂಗಡಗಿ ಆರೋಪಿಸಿದ್ದಾರೆ. ಈಂತಹ ವಂಚಕ ಸರ್ಕಾರವನ್ನು ಬೆಂಬಲಿಸಿ ʼಮೋದಿ, ಮೋದಿʼ ಎನ್ನುತ್ತಿರುವ ಯುವಕರಿಗೆ ಕಪಾಳಮೋಕ್ಷ ಮಾಡಬೇಕಿದೆ ಎಂದು ಕಿಡಿಕಾರುವ ಮೂಲಕ ಸಚಿವ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ನಿನ್ನೆ ದಿನ ಕಾರಟಗಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಿವರಾಜ್ ತಂಗಡಗಿ, ಪ್ರಧಾನಿ ಮೋದಿ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ಹೇಳಿದರು.

“ಬಿಜೆಪಿಯವರು ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದಾರೆ. ಪ್ರಧಾನಿ ಮೋದಿಯವರು ಯುವಕರಿಗೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು. ಅವರು ಉದ್ಯೋಗ ನೀಡಿದ್ದಾರಾ? ಅವರಿಗೆ ನಾಚಿಕೆಯಾಗಬೇಕು. ಇನ್ನೂ ‘ಮೋದಿ ಮೋದಿ’ ಎಂದು ಜಪಿಸುತ್ತಿರುವ ಅವರ ಯುವ ಬೆಂಬಲಿಗರ ಕಪಾಳಕ್ಕೆ ಹೊಡೆಯಬೇಕು” ಎಂದು ತಂಗಡಗಿ ಕಿಡಿ ಕಾರಿದರು.

“ಇನ್ನೂ 5 ವರ್ಷಗಳ ಕಾಲ ಜನರನ್ನು ಮೂರ್ಖರನ್ನಾಗಿ ಮಾಡಬಹುದು ಎಂದು ಅವರು(ಬಿಜೆಪಿ) ಭಾವಿಸಿದ್ದಾರೆ. ಪ್ರಧಾನಿ ಮೋದಿ ಅವರು ಭಾರತದಲ್ಲಿ 100 ಸ್ಮಾರ್ಟ್ ಸಿಟಿಗಳ ಭರವಸೆ ನೀಡಿದರು. ಅವು ಎಲ್ಲಿವೆ? ಹೆಸರಿಸಿ ಪ್ರಧಾನಿ ಮೋದಿ ಸಮುದ್ರದ ಆಳಕ್ಕೆ ಹೋಗಿ ಅಲ್ಲಿ ಪೂಜೆ ಮಾಡುತ್ತಾರೆ. ಒಬ್ಬ ಪ್ರಧಾನಿ ಮಾಡಬೇಕಾದ ಕೆಲಸ ಇದೇನಾ?” ತಂಗಡಗಿ ಪ್ರಶ್ನಿಸಿದರು.

ಇದೇ ರೀತಿ ಮೋದಿ ಮೋದಿ ಎನ್ನುತ್ತಿದ್ದ ಸಂಗಣ್ಣ ಕರಡಿಯವರಿಗೂ ಬಿಜೆಪಿ ಮೋಸ ಮಾಡಿದೆ.  ಪಾಪ ಒಳ್ಳೆಯ ಮನುಷ್ಯ ಅವರಿಗೆ ಟಿಕೆಟ್ ನೀಡದೆ ಮನೆಯಲ್ಲಿ ಕೂಡಿಸಿದ್ದಾರೆ. ಅವರಿಗೆ ಟಿಕೆಟ್‌ ನೀಡದಿರುವ ಕಾರಣ ನಮ್ಮ ಅಭ್ಯರ್ಥಿ ರಾಜಣ್ಣ ಗೆದ್ದಂತೆ ಎಂದು ಅವರು ತಿಳಿಸಿದ್ದಾರೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು