Tuesday, February 25, 2025

ಸತ್ಯ | ನ್ಯಾಯ |ಧರ್ಮ

ದೆಹಲಿ ಮುಖ್ಯಮಂತ್ರಿ ಕಛೇರಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಭಾವಚಿತ್ರ ತೆರವು : ಎಎಪಿ ಗಂಭೀರ ಆರೋಪ

ದೆಹಲಿ ಮುಖ್ಯಮಂತ್ರಿ ಕಚೇರಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಛಾಯಾಚಿತ್ರಗಳನ್ನು ಕಿತ್ತುಹಾಕಲಾಗಿದೆ ಎಂಬ ಆರೋಪ ಸೋಮವಾರ ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷದ ಎಎಪಿ ನಡುವೆ ಮಾತಿನ ಚಕಮಕಿಗೆ ಕಾರಣವಾಗಿದೆ.

ಮಾಜಿ ಮುಖ್ಯಮಂತ್ರಿ ಅತಿಶಿ ಅವರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತಿದ್ದಾಗ ತಮ್ಮ ಹಿಂದೆ ಬಿ.ಆರ್. ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಛಾಯಾಚಿತ್ರಗಳನ್ನು ಪ್ರದರ್ಶಿಸಿದ ಚಿತ್ರವನ್ನು ಬಿಡುಗಡೆ ಮಾಡಿ, ಬಿಜೆಪಿ ಅಂಬೇಡ್ಕರ್ ಅವರ ಕಟು ವಿರೋಧಿ ಎಂದು ಅತಿಶಿ ಅವರು ದೂರಿದ್ದಾರೆ.

ಅದೇ ಗೋಡೆಯ ಮೇಲೆ ಮಹಾತ್ಮಾ ಗಾಂಧಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರಗಳನ್ನು ಹೊಂದಿರುವ ಪ್ರಸ್ತುತ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಛಾಯಾಚಿತ್ರದೊಂದಿಗೆ ಅತಿಶಿ ಇದನ್ನು ಪ್ರಸ್ತುತ ಸನ್ನಿವೇಶಕ್ಕೆ ಹೋಲಿಸಿದ್ದಾರೆ.

ಬಿಜೆಪಿ ಕೂಡ ಇದಕ್ಕೆ ಪ್ರತಿಯಾಗಿ ಮತ್ತೊಂದು ಚಿತ್ರ ಬಿಡುಗಡೆ ಮಾಡಿ, ಪಕ್ಕದ ಗೋಡೆಯ ಮೇಲೆ ಬಿ.ಆರ್. ಅಂಬೇಡ್ಕರ್ ಅವರ ಛಾಯಾಚಿತ್ರವನ್ನು ಹಾಕಿತ್ತು. ನಂತರ ಒಂದು ವೀಡಿಯೊದಲ್ಲಿ ಮುಖ್ಯಮಂತ್ರಿ ಕುರ್ಚಿಯ ಹಿಂದೆ ಮಹಾತ್ಮ ಗಾಂಧಿ, ರಾಷ್ಟ್ರಪತಿ ಮುರ್ಮು ಮತ್ತು ಪ್ರಧಾನಿ ಮೋದಿ ಅವರ ಛಾಯಾಚಿತ್ರಗಳು ಮತ್ತು ಪಕ್ಕದ ಗೋಡೆಗಳ ಮೇಲೆ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಛಾಯಾಚಿತ್ರಗಳನ್ನು ಇರಿಸಲಾಗಿದೆ ಎಂದು ಪ್ರತಿಯಾಗಿ ದೂರಿದ್ದಾರೆ.

“ಬಿಜೆಪಿಯ ದಲಿತ ವಿರೋಧಿ ಮನಸ್ಥಿತಿ ಎಲ್ಲರಿಗೂ ತಿಳಿದಿದೆ. ಇಂದು, ಅದರ ದಲಿತ ವಿರೋಧಿ ಮನಸ್ಥಿತಿಯ ಪುರಾವೆಗಳನ್ನು ಪ್ರಸ್ತುತಪಡಿಸಲಾಗಿದೆ. ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ದೆಹಲಿ ಸರ್ಕಾರದ ಪ್ರತಿಯೊಂದು ಕಚೇರಿಯಲ್ಲೂ ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಶಹೀದ್ ಭಗತ್ ಸಿಂಗ್ ಅವರ ಫೋಟೋಗಳನ್ನು ಹಾಕಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ, ಅದು ಈ ಎರಡೂ ಫೋಟೋಗಳನ್ನು ಮುಖ್ಯಮಂತ್ರಿ ಕಚೇರಿಯಿಂದ ತೆಗೆದುಹಾಕಿದೆ. ಇದು ಬಿಜೆಪಿ ದಲಿತ ವಿರೋಧಿ ಮತ್ತು ಸಿಖ್ ವಿರೋಧಿ ಪಕ್ಷ ಎಂದು ತೋರಿಸುತ್ತದೆ” ಎಂದು ಅತಿಶಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

“ದೆಹಲಿಯ ಹೊಸ ಬಿಜೆಪಿ ಸರ್ಕಾರ ಬಾಬಾಸಾಹೇಬ್ ಅವರ ಫೋಟೋ ತೆಗೆದು ಪ್ರಧಾನಿ ಮೋದಿಯವರ ಫೋಟೋ ಹಾಕಿದೆ. ಇದು ಸರಿಯಲ್ಲ. ಇದು ಬಾಬಾಸಾಹೇಬ್ ಅವರ ಲಕ್ಷಾಂತರ ಅನುಯಾಯಿಗಳಿಗೆ ನೋವುಂಟು ಮಾಡಿದೆ. ನಾನು ಬಿಜೆಪಿಗೆ ಒಂದು ವಿನಂತಿ ಮಾಡುತ್ತೇನೆ. ನೀವು ಪ್ರಧಾನಿಯವರ ಫೋಟೋ ಹಾಕಬಹುದು, ಆದರೆ ಬಾಬಾಸಾಹೇಬ್ ಅವರ ಫೋಟೋ ತೆಗೆಯಬೇಡಿ. ಅವರ ಫೋಟೋ ಅಲ್ಲೇ ಇರಲಿ” ಎಂದು ಅವರು ಟ್ವೀಟ್ ಮಾಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page