Sunday, June 16, 2024

ಸತ್ಯ | ನ್ಯಾಯ |ಧರ್ಮ

ಬಿಬಿಎಂಪಿ ಚುನಾವಣೆ ಮುಂದೂಡಿಕೆ ಸಾಧ್ಯತೆ : ಹೈಕೋರ್ಟ್‌ಗೆ ಮತ್ತೆ ಕಾಲಾವಕಾಶ ಕೋರಿದ ಸರ್ಕಾರ!

ಬೆಂಗಳೂರು: ನವೆಂಬರ್ 30 ರೊಳಗೆ BBMP 243 ವಾರ್ಡ್‌ಗಳಿಗೆ ಮೀಸಲಾತಿ ನಿಗದಿಪಡಿಸಿ, ಡಿಸೆಂಬರ್ ಅಂತ್ಯದೊಳಗೆ ಚುನಾವಣೆ ನಡೆಸಬೇಕು ಎಂದು ಹೈಕೋರ್ಟ್‌ ಸೆಪ್ಟೆಂಬರ್ 30ರಂದು ಆದೇಶ ಹೊರಡಿಸಿತ್ತು. ಈಗ ಈ ಆದೇಶ ಪಾಲನೆಗೆ ಮೂರು ತಿಂಗಳ ಕಾಲ ಅವಧಿ ವಿಸ್ತರಿಸುವಂತೆ ಕೋರಿ ನಗರಾಭಿವೃದ್ಧಿ ಇಲಾಖೆ ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದೆ.

ಹೈಕೋರ್ಟ್‌ಗೆ ಬರೆದ ಪ್ರಮಾಣ ಪತ್ರದಲ್ಲಿ ಏನಿದೆ?

ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ನ್ಯಾಯಮೂರ್ತಿ ಭಕ್ತವತ್ಸಲ ಆಯೋಗ ವರದಿ ಸಲ್ಲಿಸಿತ್ತು. ಆದರೆ, ಹೈಕೋರ್ಟ್ ನಿರ್ದೇಶನಗಳ ಆಧಾರದಲ್ಲಿ ವರದಿಯನ್ನು ಪುನರ್ ಪರಿಶೀಲಿಸಿ ಪರಿಷ್ಕೃತ ವರದಿ ಸಲ್ಲಿ ಸಲು ನ್ಯಾಯಮೂರ್ತಿ ಭಕ್ತವತ್ಸಲ ಆಯೋಗಕ್ಕೆ ಮನವಿ ಮಾಡಲಾಗಿತ್ತು. ಅದರಂತೆ, ಅಕ್ಟೋಬರ್ 31ಕ್ಕೆ ಪೂರಕ ವರದಿ ಸಲ್ಲಿಸಿದ ಆಯೋಗ, ‘ಈ ಹಿಂದೆ ಸಲ್ಲಿಸಿದ್ದ ವರದಿ ಕಾನೂನುಬದ್ಧವಾಗಿದ್ದು, ಬದಲಾವಣೆಯ ಅವಶ್ಯಕತೆ ಇಲ್ಲ’ ಎಂದು ಸ್ಪಷ್ಟಪಡಿಸಿತ್ತು.

‘243 ವಾರ್ಡ್‌ಗಳಲ್ಲಿ ಎಸ್ಸಿ, ಎಸ್ಟಿ ವರ್ಗಗಳಿಗೆ ಮೀಸಲಾತಿ ನಿಗದಿಪಡಿಸಿದ ಬಳಿಕ ಹಿಂದುಳಿದ ವರ್ಗ ಎ ಮತ್ತು ಬಿ ಗೆ ಮೀಸಲಾತಿ ನಿಗದಿಪಡಿಸಲು ಇರುವ ವಿಧಾನವೇನು?, ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್‌ನ ನಿರ್ದೇಶನದ ಪ್ರಕಾರ ರಾಜಕೀಯ ಮೀಸಲಾತಿಗೆ ಅರ್ಹರಿರುವ ಹಿಂದುಳಿದ ವರ್ಗಗಳ ವಿವರವಾದ ಪಟ್ಟಿಯನ್ನು ಸಲ್ಲಿಸುವಂತೆ ಹಾಗೂ ಪೂರಕ ವರದಿಯಲ್ಲಿ ಸಲ್ಲಿಸಲಾಗಿರುವ ಹಿಂದುಳಿದ ವರ್ಗಗಳ ಜನಸಂಖ್ಯೆಯ ವಾಸ್ತವ ದತ್ತಾಂಶದ (ಎಂಪೆರಿಕಲ್ ಡಾಟಾ) ದೃಢೀಕರಣವೇನು? ಎಂಬ ಅಂಶಗಳನ್ನು ಪರಿಶೀಲಿಸುವಂತೆ ನವೆಂ ಬರ್ 17 ರಂದು ಆಯೋಗಕ್ಕೆ ಪತ್ರ ಬರೆಯಲಾಗಿದೆ. ಇದನ್ನು ಪರಿಶೀಲಿಸಿ ಆದಷ್ಟು ಬೇಗ ಪ್ರತಿಕ್ರಿಯಿಸುವುದಾಗಿ ಆಯೋಗ ಹೇಳಿದೆ.

ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಹೊಸದಾಗಿ ಮೀಸಲಾತಿ ನಿಗದಿಪಡಿಸಬೇಕೇ ಬೇಡವೇ ಎಂಬ ತೀರ್ಮಾನಕ್ಕೆ ಬರಲು ಆಯೋಗದ ನಿಲುವು ಮುಖ್ಯವಾಗಿದೆ. ತದ ನಂತರವಷ್ಟೇ ಅರ್ಹ ಹಿಂದುಳಿದ ವರ್ಗಗಳಿಗೆ ನ್ಯಾಯಸಮ್ಮತ ಮೀಸಲಾತಿ ಒದಗಿಸಲು ಸರ್ಕಾರಕ್ಕೆ ಸಾಧ್ಯವಾಗಲಿದೆ’ ಎಂದು ಉಲ್ಲೇಖಿಸಲಾಗಿದೆ.

ಏಪ್ರಿಲ್- ಮೇ ತಿಂಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆ :ಇನ್ಯಾವಾಗ ಬಿಬಿಎಂಪಿ ಚುನಾವಣೆ?

ಕಳೆದ ಎರಡು ಮೂರು ವರ್ಷಗಳಿಂದ ಸ್ಥಳೀಯ ಸರ್ಕಾರವಿಲ್ಲದೆ ಬೆಂಗಳೂರಿನ ಜನರು ನಲುಗಿರುವ ಇಂತಹ ಸಂದರ್ಭದಲ್ಲಿ ಬಿಬಿಎಂಪಿ ಮೀಸಲಾತಿ ನಿಗದಿ ಮತ್ತು ಚುನಾವಣೆಗೆ ಇನ್ನೂ ಮೂರು ತಿಂಗಳು ಕೇಳುತ್ತಿರೋದು ನೋಡಿದರೆ 2023ರ ಏಪ್ರಿಲ್‌-ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆದ ನಂತರವೇ BBMP ಚುನಾವಣೆ ನಡೆಯುವ ಸಾಧ್ಯತೆ ದಟ್ಟವಾಗಿದೆ.

ಒಂದೇ ವಾರ್ಡ್‌ನ ಮತದಾರನ್ನು ಎರಡು ವಿಧಾನಸಭಾ ಕ್ಚೇತ್ರಗಳಿಗೆ ಹಂಚಿಕೆ ಮಾಡಿರುವ ಸಂಬಂಧ ಏಕ ಸದಸ್ಯಪೀಠದ ಆದೇಶದಲ್ಲಿ ಯಾವುದೇ ಪ್ರಸ್ತಾಪ ಮಾಡದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ಸಂಬಂಧ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಸತೀಶ್ ರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಪಿ.ಬಿ.ವರಲೆ ಅವರಿದ್ದ ನ್ಯಾಯಪೀಠ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿದೆ.

Related Articles

ಇತ್ತೀಚಿನ ಸುದ್ದಿಗಳು