Thursday, June 20, 2024

ಸತ್ಯ | ನ್ಯಾಯ |ಧರ್ಮ

ಪ್ರಚೋದನಾಕಾರಿ ಬರಹ: ವಾಮದಪದವಿನ ಪದ್ಮನಾಭ ಸಾವಂತ್‌ ಗೆ ನ್ಯಾಯಾಂಗ ಬಂದನ

ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸಮಾಜದಲ್ಲಿ ಸ್ವಾಸ್ಥ್ಯ ಕಡಿಸುತ್ತಿದ್ದ ಎಂಬ ಆರೋಪದಲ್ಲಿ ಪುಂಜಾಲಕಟ್ಟೆ ಪೊಲೀಸರು ವಾಮದಪದವಿನ ಪದ್ಮನಾಭ ಸಾವಂತ್‌ ಎನ್ನುವವರಿಗೆ ತಾಲೂಕು ದಂಡಾಧಿಕಾರಿ ಡಾ. ಸ್ಮಿತಾರಾಮು ಅವರು 5 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಿಧಿಸಲಾಗಿದೆ

ಈತನ ಮೇಲೆ ಇಂತಹ 5 ಪ್ರಕರಣಗಳಿದ್ದು, ಮುಂದಿನ ದಿನಗಳಲ್ಲಿ ಈತ ಯಾವುದೇ ರೀತಿಯ ಸಮಾಜದ ಹಿತ ಕಾಯುವ ದೃಷ್ಟಿಯಿಂದ ಯಾವುದೇ ಪೋಸ್ಟ್ ಗಳನ್ನು ಹಾಕದಂತೆ ಮುಚ್ಚಳಿಕೆ ಬರೆಸುವಂತೆ ಪುಂಜಾಲಕಟ್ಟೆ ಎಸ್. ಐ. ಸುತೇಶ್ ತಹಶೀಲ್ದಾರ್ ಅವರಿಗೆ ಪಿ.ಎ.ಅರ್ ಸಲ್ಲಿಸಿದ್ದರು.

ತಾಲೂಕು ದಂಡಾಧಿಕಾರಿ ಕೋರ್ಟಿನಲ್ಲಿ ಪ್ರಕರಣವೊಂದರ ತನಿಖಾ ಹಂತದಲ್ಲಿರುವಾಗಲೇ ಈತ ಮತ್ತೊಂದು ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ ಎಂಬ ದೂರಿನ ಹಿನ್ನೆಲೆಯಲ್ಲಿ ತಾಲೂಕು ದಂಡಾಧಿಕಾರಿಯವರ ಮುಂದೆ ಮುಚ್ಚಳಿಕೆ ನೀಡುವಂತೆ ಸೂಚಿಸಲಾಗಿತ್ತು. ಆದರೆ ಈತ ಇದನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಈತನಿಗೆ 5 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇದನ್ನೂ ನೋಡಿ: https://www.youtube.com/watch?v=ZdRXyjUEkXg&list=UU-xt7Mk2bvdfuq9QVofcWCw&index=4

Related Articles

ಇತ್ತೀಚಿನ ಸುದ್ದಿಗಳು