Home ಬೆಂಗಳೂರು ಪೊಲೀಸ್ ಅಧಿಕಾರಿಗೆ ಏಕವಚ ಪ್ರತಾಪ್ ಸಿಂಹ ವಿರುದ್ಧ – ಪ್ರದೀಪ್ ಈಶ್ವರ್ ವಾಗ್ದಾಳಿ

ಪೊಲೀಸ್ ಅಧಿಕಾರಿಗೆ ಏಕವಚ ಪ್ರತಾಪ್ ಸಿಂಹ ವಿರುದ್ಧ – ಪ್ರದೀಪ್ ಈಶ್ವರ್ ವಾಗ್ದಾಳಿ

0

ಬೆಂಗಳೂರು: ಮೈಸೂರು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕರ್ತವ್ಯನಿರತ ಪೊಲೀಸ್ ಅಧಿಕಾರಿಯೊಬ್ಬರ ಬಗ್ಗೆ ಏಕವಚನದಲ್ಲಿ ಮಾತನಾಡಿರುವುದನ್ನು ಖಂಡಿಸಿರುವ ಅವರು, ಪ್ರತಾಪ್ ಸಿಂಹ ಅವರ ಹೇಳಿಕೆಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರದೀಪ್ ಈಶ್ವರ್, ಮಸೀದಿ ಮುಂದೆ ಪೊಲೀಸ್ ಅಧಿಕಾರಿಯೊಬ್ಬರ ಕುರಿತು ಪ್ರತಾಪ್ ಸಿಂಹ ಮಾತನಾಡಿರುವ ರೀತಿಯನ್ನು ಪ್ರಶ್ನಿಸಿದರು. ಸಾರ್ವಜನಿಕವಾಗಿ ಪೊಲೀಸ್ ಅಧಿಕಾರಿಗಳ ಬಗ್ಗೆ ಈ ರೀತಿಯ ಭಾಷೆ ಬಳಸುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ದಲಿತ ಸಮುದಾಯ ಹಾಗೂ ನೀಲಿ ಶಾಲು ಕುರಿತು ಪ್ರತಾಪ್ ಸಿಂಹ ನೀಡಿರುವ ಹೇಳಿಕೆಗಳನ್ನೂ ಪ್ರಸ್ತಾಪಿಸಿದ ಅವರು, ದಲಿತ ಸಮುದಾಯದ ಭಾವನೆಗಳಿಗೆ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡಬಾರದು ಎಂದು ಹೇಳಿದರು. ದಲಿತ ಸಂಘರ್ಷ ಸಮಿತಿ ಹಾಗೂ ಸಮುದಾಯದ ಸಂಕೇತಗಳ ಬಗ್ಗೆ ಮಾತನಾಡುವಾಗ ಸಂಯಮ ವಹಿಸಬೇಕು ಎಂದು ಒತ್ತಾಯಿಸಿದರು.

ಧಾರ್ಮಿಕ ಹಾಗೂ ಸಮುದಾಯದ ಸಂಕೇತಗಳನ್ನು ಮುಂದಿಟ್ಟುಕೊಂಡು ವಿವಾದಕ್ಕೆ ಕಾರಣವಾಗುವಂತಹ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕು ಎಂದು ಪ್ರದೀಪ್ ಈಶ್ವರ್ ಆಗ್ರಹಿಸಿದರು. ದಲಿತ ಸಮುದಾಯದ ಬಗ್ಗೆ ನೀಡಿರುವ ಹೇಳಿಕೆಗಳಿಗೆ ಪ್ರತಾಪ್ ಸಿಂಹ ಕ್ಷಮೆಯಾಚಿಸಬೇಕು ಎಂದೂ ಅವರು ಒತ್ತಾಯಿಸಿದರು.

ಈ ಹಿಂದೆ ಟಿ. ನರಸೀಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಧನಂಜಯ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಪ್ರತಾಪ್ ಸಿಂಹ, ಇದೇ ರೀತಿಯ ಹೇಳಿಕೆ ಮತ್ತೊಮ್ಮೆ ನೀಡಿದರೆ ಪೊಲೀಸ್ ಠಾಣೆಗೆ ನುಗ್ಗುವುದಾಗಿ ಎಚ್ಚರಿಕೆ ನೀಡಿದ್ದರು. ಈ ವಿಚಾರವಾಗಿ ಪ್ರದೀಪ್ ಈಶ್ವರ್ ಹಾಗೂ ಪ್ರತಾಪ್ ಸಿಂಹ ನಡುವೆ ರಾಜಕೀಯ ವಾಕ್ಸಮರವೂ ನಡೆದಿತ್ತು.

You cannot copy content of this page

Exit mobile version