Monday, September 15, 2025

ಸತ್ಯ | ನ್ಯಾಯ |ಧರ್ಮ

ಪ್ರಧಾನ ಮಂತ್ರಿ ಆವಾಸ್ ಯೋಜನೆ ಹಗರಣ ಆರೋಪಿ ಎಂ.ಕೆ. ರಾಜೇಶ್ ಬಂಧನ

ಹಾಸನ: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಕೋಟ್ಯಂತರ ರೂಪಾಯಿ ದುರುಪಯೋಗ ಮಾಡಿದ ಪ್ರಕರಣದಲ್ಲಿ ಪ್ರಮುಖ ಆರೋಪಿ ಎಂ.ಕೆ. ರಾಜೇಶ್ ಅವರನ್ನು ಸಕಲೇಶಪುರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಳೆದ ಎರಡು ತಿಂಗಳಿಂದ ಜಿಲ್ಲೆಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದ್ದ ಈ ಹಗರಣದ ಸೂತ್ರಧಾರ ಕೊನೆಗೂ ಪೊಲೀಸರ ಬಲೆಗೆ ಸಿಕ್ಕಿದ್ದಾನೆ. ಎಫ್‌ಐಆರ್ ದಾಖಲಾಗುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದ ರಾಜೇಶ್, ವಿವಿಧ ಸ್ಥಳಗಳಲ್ಲಿ ಅಡಗಿ ಪೊಲೀಸರು ಕಣ್ತುಂಬಿಸದಂತೆ ತಿರುಗಾಡುತ್ತಿದ್ದ. ಅರಸೀಕೆರೆಯ ಮನೆಯೊಂದರಲ್ಲಿ ಅಡಗಿ ಕುಳಿತಿದ್ದ ಖಚಿತ ಮಾಹಿತಿಯ ಆಧಾರದಲ್ಲಿ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏನಿದು ಹಗರಣ : ನಕಲಿ ದಾಖಲೆಗಳನ್ನು ಸೃಷ್ಟಿಸಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಲಾಗಿನ್‌ಗಳನ್ನು ದುರುಪಯೋಗ ಪಡಿಸಿಕೊಂಡು ಕೋಟ್ಯಂತರ ಸರ್ಕಾರದ ಅನುದಾನವನ್ನು ಅಕ್ರಮವಾಗಿ ವಸೂಲಿ ಮಾಡಿರುವ ಆರೋಪ ರಾಜೇಶ್ ವಿರುದ್ಧ ಕೇಳಿ ಬಂದಿದೆ. ಈ ಕುರಿತು ಇನ್ನೂ ಹೆಚ್ಚಿನ ಆರೋಪಿಗಳ ಪತ್ತೆ ಹಾಗೂ ಹಣದ ಹಾದಿ ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page