ಮೂರೂ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದಾರೆ.

ಮೇ 31 ಕ್ಕೆ ಬೆಂಗಳೂರಿಗೆ ಬರುವುದಾಗಿ ಹೇಳಿಕೆ ಬಿಡುಗಡೆ ಮಾಡಿದ ಬೆನ್ನಲ್ಲೇ ಈಗ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು ತಿಳಿದು ಬಂದಿದೆ. ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರು ತಮ್ಮ ವಕೀಲರ ಮೂಲಕ ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಮೂರು ಪ್ರಕರಣಗಳಲ್ಲಿ ನಿರೀಕ್ಷಣ ಜಾಮೀನುಗೆ ಅರ್ಜಿ ಸಲ್ಲಿಸಿದ್ದಾರೆ. ಸಿಐಡಿ ಠಾಣೆ ಕ್ರೈಂ ನಂಬರ್ 20/2024 ಸೈಬರ್ ಕ್ರೈಂ ಠಾಣೆ ಕ್ರೈಂ ನಂಬರ್ 2/ 2024 ಹಾಗೂ ಹೊಳೆನರಸೀಪುರ ಠಾಣೆ ಕ್ರೈಂ ನಂಬರ್ 107/ 2024 ಸೇರಿದಂತೆ ಮೂರು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

Related Articles

ಇತ್ತೀಚಿನ ಸುದ್ದಿಗಳು