ಬೆಂಗಳೂರು: ಹಾಸನದ ಅಶ್ಲೀಲ ವಿಡಿಯೋಗಳಿರುವ ಪೆನ್‌ಡ್ರೈವ್ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದ ಎಸ್‌ಐಟಿ ಕಸ್ಟಡಿ ಅವಧಿ ಇಂದು ಅಂತ್ಯವಾಗಿದೆ.
ಇಂದು ಅವರನ್ನು ಮತ್ತೆ ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ಹಾಜರುಪಡಿಸಲಿದ್ದಾರೆ.
ವಿದೇಶದಿಂದ ಭಾರತಕ್ಕೆ ಮೇ 31ರಂದು ಆಗಮಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ಎಸ್‌ಐಟಿ ವಶಕ್ಕೆ ಪಡೆದಿತ್ತು. ಅದಾದ ಬಳಿಕ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿದ್ದಾರೆ. ಕೃತ್ಯ ಎಸಗಿದ್ದ ಸ್ಥಳ ಮಹಜರು ಮಾಡಲಾಗಿತ್ತು.
ಪ್ರಜ್ವಲ್ ವಿರುದ್ಧ ಇನ್ನೂ ಎರಡು ಅತ್ಯಾಚಾರ ಪ್ರಕರಣ ತನಿಖೆ ಬಾಕಿ ಇರುವ ಕಾರಣ ಮತ್ತೆ ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಅದಕ್ಕಾಗಿ ಎಸ್‌ಐಟಿ ತನಿಖಾಧಿಕಾರಿಗಳು ಪ್ರಕರಣದ ವಿಚಾರಣೆ ಬಾಕಿ ಇದೆ. ಪ್ರಕರಣ ಕುರಿತು ವಶಕ್ಕೆ ಪಡೆದುಕೊಳ್ಳುವ ಅಗತ್ಯತೆ ಬಗ್ಗೆ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಲಿದ್ದಾರೆ. ಪ್ರಜ್ವಲ್ ರೇವಣ್ಣನಿಗೆ ಇಂದು ಮತ್ತೆ ನ್ಯಾಯಾಂಗ ಬಂಧನವಾಗುತ್ತದೆಯೋ, ಅಥವಾ ಎಸ್‌ಐಟಿ ವಶಕ್ಕೆ ಮತ್ತೆ ನೀಡಲಾಗುತ್ತದೆಯೋ ಎನ್ನುವುದು ಇಂದು ತೀರ್ಮಾನವಾಗಲಿದೆ.
ಭವಾನಿ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಇಂದು
ಕೆ.ಆರ್.ನಗರದ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ಕೂಡ ಇಂದು ನಡೆಯಲಿದೆ. ಹೀಗೆ ತಾಯಿ ಮತ್ತು ಪುತ್ರ ಇಬ್ಬರು ಇಂದು ಕೋರ್ಟ್ ಮುಂದೆ ಹಾಜರಾಗಬೇಕಾಗಿದೆ.