Thursday, June 13, 2024

ಸತ್ಯ | ನ್ಯಾಯ |ಧರ್ಮ

ನ್ಯಾಯಾಂಗ ಬಂಧನದಿಂದ ಮತ್ತೆ ಎಸ್‌ಐಟಿ ವಶಕ್ಕೆ ಪ್ರಜ್ವಲ್ ರೇವಣ್ಣ

ಜೂನ್‌ 10ರಂದು ಲೈಂಗಿಕ ದೌರ್ಜನ್ಯದ ಆರೋಪಿ ಪ್ರಜ್ವಲ್ ರೇವಣ್ಣನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ನಂತರ ಈಗ ಮತ್ತೆ ಎಸ್‌ಐಟಿ ಹೆಚ್ಚಿನ ತನಿಖೆಗೆ ತಮ್ಮ ವಶಕ್ಕೆ ಪಡೆದಿದೆ. ಎಸ್‌ಐಟಿ ಪೊಲೀಸರು ಬುಧವಾರ ಬಾಡಿ ವಾರೆಂಟ್ ಮೂಲಕ ಪ್ರಜ್ವಲ್ ರೇವಣ್ಣರನ್ನು ವಶಕ್ಕೆ ಪಡೆದುಕೊಂಡು ಕೋರ್ಟ್‌ ಮುಂದೆ ಹಾಜರುಪಡಿಸಿದ್ದಾರೆ.

3 ಪ್ರಕರಣಗಳಲ್ಲಿ ಅವರು ಸಲ್ಲಿಕೆ ಮಾಡಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದ ನಂತರ ಈ ಬೆಳವಣಿಗೆ ನಡೆದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮೂರು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದರು. ಎಲ್ಲಾ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್‌ ಮೂರು ಅರ್ಜಿಗಳನ್ನು ವಜಾಗೊಳಿಸಿದೆ.

ಲೈಂಗಿಕ ದೌರ್ಜನ್ಯ, ಮಹಿಳೆಯ ಕಿಡ್ನಾಪ್ ಪ್ರಕರಣ ಸೇರಿ ಒಟ್ಟು ಮೂರು ಪ್ರಕರಣಗಳ ಅಡಿಯಲ್ಲಿ ಪ್ರಜ್ವಲ್ ರೇವಣ್ಣ, ಹೆಚ್.ಡಿ.ರೇವಣ್ಣ ಹಾಗೂ ಭವಾನಿ ರೇವಣ್ಣ ರ ಮೇಲೆ ಪ್ರಕರಣ ದಾಖಲಾಗಿತ್ತು. ಸಧ್ಯಕ್ಕೆ ರೇವಣ್ಣ ಹಾಗೂ ಭವಾನಿ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದೆ.

Related Articles

ಇತ್ತೀಚಿನ ಸುದ್ದಿಗಳು