Wednesday, August 20, 2025

ಸತ್ಯ | ನ್ಯಾಯ |ಧರ್ಮ

BREAKING : ಪ್ರಜ್ವಲ್ ರೇವಣ್ಣನನ್ನು ಮತ್ತೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಕೋರ್ಟ್

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣನಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಇಂದಿಗೆ (ಜೂನ್‌ 18) ವಿಶೇಷ ತನಿಖಾ ತಂಡದ ಕಸ್ಟಡಿ ಅಂತ್ಯವಾದ ಹಿನ್ನೆಲೆ ಪ್ರಜ್ವಲನನ್ನು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದ ಎದುರು ಪ್ರಸ್ತುತಪಡಿಸಲಾಗಿತ್ತು, ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಇನ್ನೂ 14 ದಿನ ನ್ಯಾಯಾಂಗ ಬಂಧನಕ್ಕೆ ಕಳುಹಿಸಿ ಆದೇಶ ಹೊರಡಿಸಿದೆ.

ಇದೇ ಸಮಯ ಎಸ್ ಐ ಟಿ ಅಧಿಕಾರಿಗಳು ನನ್ನನ್ನು ಸರಿಯಾಗಿ ನಡೆಸಿಕೊಂಡಿಲ್ಲ, ನನ್ನ ಆರೋಗ್ಯ ಸಮಸ್ಯೆಯನ್ನು ಕಡೆಗಣಿಸಿದ್ದಾರೆ ಎಂದು ಕೋರ್ಟಿನೆದುರು ಹೇಳಿಕೆ ನೀಡಿದ್ದಾರೆ. ವಾದ ವಿವಾದ ಆಲಿಸಿದ ಕೋರ್ಟ್ ಪ್ರಜ್ವಲ್ ರೇವಣ್ಣರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page