ದೆಹಲಿ: ಅತ್ಯಾಚಾರ ಪ್ರಕರಣಗಳಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ತಮ್ಮ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಪ್ರಜ್ವಲ್ ರೇವಣ್ಣ ಅವರು ತಮ್ಮ ಮೇಲಿನ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದರು.
ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ನ್ಯಾಯಪೀಠವು ತಿರಸ್ಕರಿಸಿದೆ. ಈ ಮೂಲಕ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ನ್ಯಾಯಾಲಯದಿಂದ ಮತ್ತೊಂದು ಆಘಾತ ಎದುರಾದಂತಾಗಿದೆ.
