Wednesday, August 20, 2025

ಸತ್ಯ | ನ್ಯಾಯ |ಧರ್ಮ

ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಧಿಕೃತವಾಗಿ ಅಮಾನತು ಮಾಡಿ ಆದೇಶ

ಜೆಡಿಎಸ್ ಕೋರ್ ಕಮಿಟಿ ಸಮಿತಿ ಬಳಿಕ, ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್ ಡ್ರೈವ್ ಹಂಚಿಕೆ ಹಿಂದೆ ಕಾಂಗ್ರೆಸ್ ನ ಮಹಾನಾಯಕ, ಉಪಮುಖ್ಯಮಂತ್ರಿ ಕೈವಾಡವಿದೆ. ಪೆನ್ ಡ್ರೈವ್ ಹಂಚಿಕೆ ಮಾಡಿರುವುದು ಯಾರು ಅಂತ ಹೇಳಲಿ, ಪೆನ್ ಡ್ರೈವ್ ವಿಷಯ ಎಷ್ಟು ತಿಂಗಳ ಹಿಂದೆ ವಿಷ್ಯ ಗೊತ್ತಿತ್ತು? ಕಾಂಗ್ರೆಸ್ ಮಹಾನ್ ನಾಯಕ ದೊಡ್ಡ ಅಪರಾಧ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಕಾನೂನು ಪ್ರಕಾರ ಆಗಬೇಕಾದ ಕೆಲಸ ನಡೆಯಲಿ. ಆದರೆ ಇದನ್ನು ಇಷ್ಟು ದೊಡ್ಡದಾಗಿ ಮಾಡುವ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡವಿದೆ. ನಾವು ಯಾವುದಕ್ಕೂ ಹೆದರುವವರಲ್ಲ. ಎಲ್ಲದನ್ನೂ ಎದುರಿಸಲಿದ್ದೇವೆ ಎಂದು ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page