Saturday, May 4, 2024

ಸತ್ಯ | ನ್ಯಾಯ |ಧರ್ಮ

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ಕಾರ್ತಿಕ್ ನಾಪತ್ತೆ

ಲೈಂಗಿಕ ದೌರ್ಜನ್ಯ ಪ್ರಕರಣದ ದೊಡ್ಡ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ಕಾರ್ತಿಕ್ ನಾಪತ್ತೆಯಾಗಿದ್ದಾರೆ. ಪ್ರಜ್ವಲ್ ರೇವಣ್ಣನ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪ್ರಮುಖ ಸಾಕ್ಷಿಯಾಗಿ ನಿಂತಿದ್ದ ಕಾರ್ತಿಕ್ ಈಗ ಯಾರ ಕೈಗೂ ಸಿಗುತ್ತಿಲ್ಲ ಎಂದು ವರದಿಯಾಗಿದೆ.

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಡುವಿನಕೋಟೆ ಕಾರ್ತಿಕ್ ಸಂಸದ ಪ್ರಜ್ವಲ್ ರೇವಣ್ಣ ಕುರಿತು ಪೆನ್ ಡ್ರೈವ್ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಬೆನ್ನಲ್ಲೇ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಎರಡು ದಿನದ ಹಿಂದೆ ಎಸ್ ಐಟಿ ತನಿಖೆಗೆ ಹಾಜರಾಗುವುದಾಗಿ ಹೇಳಿದ್ದ ಕಾರ್ತಿಕ್ ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಪ್ರಜ್ವಲ್‌ ರೇವಣ್ಣರ ಮಾಜಿ ಕಾರು ಚಾಲಕ ಕಾರ್ತಿಕ್ ಅಜ್ಞಾತ ಸ್ಥಳದಿಂದ ವಿಡಿಯೋ ಮಾಡಿದ್ದು, ಅದರಲ್ಲಿ ‘ನಾನು ೧೩ವರ್ಷದಿಂದ ಪ್ರಜ್ವಲ್‌ ರೇವಣ್ಣ ಹಾಗೂ ಅವರ ಫ್ಯಾಮಿಲಿಗೆ ಕಾರು ಡ್ರೈವರ್ ಆಗಿ ಕೆಲಸ ಮಾಡಿದ್ದೀನಿ. ಒಂದು ವರ್ಷದ ಹಿಂದೆ ಕೆಲಸ ಬಿಟ್ಟಿದ್ದೀನಿ. ನನ್ನ ಜಮೀನು ಬರೆಸಿಕೊಂಡು ನನ್ನ ಪತ್ನಿ ಮೇಲೆ ಹಲ್ಲೆ ಮಾಡಿದ್ರು, ಹಿಂಸೆ ಕೊಟ್ಟು ಹಲ್ಲೆ ಮಾಡಿದರು. ಆದ್ದರಿಂದ ಕೆಲಸ ಬಿಟ್ಟು ಅವರ ಮನೆಯಿಂದ ಹೊರಬಂದೆ ಎಂದು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಬೆನ್ನಲ್ಲೇ ಕಾರು ಚಾಲಕ ಕಾರ್ತಿಕ್ ನಾಪತ್ತೆಯಾಗಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು