ಪ್ರವೀಣ್‌ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಮಂಗಳವಾರ ರಾತ್ರಿ ಬಿಜೆಪಿಯ ಯುವ ಮೋರ್ಚಾ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಎಸ್‌ಪಿ ಋಷಿಕೇಶ ಸೋನಾವಾಣೆ ಹೇಳಿಕೆ ನೀಡಿದ್ದಾರೆ.

ಸವಣೂರು ಮೂಲದ ಝಾಕೀರ್ (29) ಮತ್ತು ಶಫೀಕ್ ಬೆಳ್ಳಾರೆ (27) ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಾಗಿದ್ದು, ವಿಚಾರಣೆ ವೇಳೆ ಆರೋಪಿಗಳು ಹಲವು ಮಾಹಿತಿಗಳನ್ನು ಪೊಲೀಸರಿಗೆ ತಿಳಿಸಿದ್ದಾರೆ.  

ಈ ವಿಚಾರವಾಗಿ ಪೊಲೀಸರು  5 ತಂಡಗಳನ್ನು ರಚಿಸಿದ್ದು ಆರೋಪಿಗಳನ್ನು ಬಂಧಿಸಲು ತಂಡಗಳನ್ನು ಕೇರಳಕ್ಕೆ ಕಳುಹಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು