ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಎನ್‌ಐಎ

ಪುತ್ತೂರು: ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಅಧಿಕಾರಿಗಳು ಮತ್ತೆ ಮೂವರು  ಆರೋಪಿಗಳ್ನನ್ನು ಬಂಧಿಸಿದೆ.

ಪ್ರವೀಣ್‌ ನೆಟ್ಟಾರು

ಎನ್‌ಐಎ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಬಂಧಿತರು ಎಸ್‌.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಬೆಳ್ಳಾರೆ ಗ್ರಾಮ ಪಂಚಾಯತ್‌ ಸದಸ್ಯ ಇಕ್ಬಾಲ್‌ ಬೆಳ್ಳಾರೆ, ಸುಳ್ಯಾದ ಇಬ್ರಾಹಿಂ ಶಾಫಿ ಎಂದು ತಿಳಿದುಬಂದಿದೆ.

ಮಾಹಿತಿ ಪ್ರಕಾರ, ಎನ್‌ಐಎ ಅಧಿಕಾರಿಗಳು ಇಂದು ಬೆಳಗ್ಗೆ ಉಪ್ಪಿನಂಗಡಿ ಮತ್ತು ಸುಳ್ಯಾದಲ್ಲಿ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರವೀಣ್‌ ನೆಟ್ಟರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸರು ಆಗಷ್ಟ್‌ ತಿಂಗಳು ಒಟ್ಟು ಹತ್ತು ಮಂದಿಯನ್ನು ಬಂಧಿಸಿದ್ದರು. ಹೀಗೆ ತಿಂಗಳುಗಳು ಕಳೆಯುತ್ತಿದ್ದಂತೆ, ಪ್ರವೀಣ್‌ ಕೊಲೆ ಪ್ರಕರಣದಲ್ಲಿ ಆರೋಪಿಗಳ ಬಂಧನ ಹೆಚ್ಚಾಗುತ್ತಿದ್ದು, ಈ ಪ್ರಕರಣದಲ್ಲಿ ಇನ್ನು ಎಷ್ಟು ಮಂದಿ ಬಂಧನವಾಗುತ್ತಾರೆಂದು ಕಾದು ನೋಡಬೇಕಾಗಿದೆ.

Related Articles

ಇತ್ತೀಚಿನ ಸುದ್ದಿಗಳು