ಚುರುಕುಗೊಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಎನ್‌ಐಎ ತನಿಖೆ

ಮಂಗಳೂರು: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮತ್ತು ಸುಳ್ಯ ಪಟ್ಟಣಗಳ 35ಕ್ಕೂ ಹೆಚ್ಚು ಸ್ಥಳಗಳಲ್ಲಿ ಎನ್‌ಐಎ (ರಾಷ್ಟ್ರೀಯ ತನಿಖಾ ಸಂಸ್ಥೆ) ದಾಳಿ ನಡೆಸುತ್ತಿದೆ.

ಪ್ರವೀಣ್‌ ನೆಟ್ಟಾರು ಬಿಜೆಪಿ ಯುವಮೋರ್ಚಾ ಕಾರ್ಯಕರ್ತನಾಗಿದ್ದು, ಜುಲೈ 27 ರಂದು ಹತ್ಯೆ ಮಾಡಲಾಗಿತ್ತು. ಹತ್ಯೆಯ ತನಿಖೆಯನ್ನು ಎನ್‌ಐಎ ಅಧಿಕಾರಿಗಳು ನಡೆಸುತ್ತಿದ್ದಾರೆ.

ಪ್ರವೀಣ್‌ ನೆಟ್ಟಾರು ಹತ್ಯೆಯಲ್ಲಿ ಕೆಲವು ಸಂಘಟನೆಗಳ ಕೈವಾಡವಿರುವ ಮಾಹಿತಿ ತಿಳಿದು ಬಂದಿದೆ ಎಂದು ಅಧಿಕಾರಿಗಳು ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು