Monday, June 17, 2024

ಸತ್ಯ | ನ್ಯಾಯ |ಧರ್ಮ

ಪ್ರವೀಣ್ ನೆಟ್ಟಾರು ಪತ್ನಿಗೆ ಗುತ್ತಿಗೆ ಆಧಾರಿತ ಹುದ್ದೆ: ರಾಜ್ಯ ಸರ್ಕಾರ

ಬೆಂಗಳೂರು: ಜುಲೈ 26ರಂದು ಹತ್ಯೆಗೆ ಒಳಗಾಗಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್‌ ನೆಟ್ಟಾರು ಅವರ ಪತ್ನಿ ನೂತನಕುಮಾರಿ ಎಂ. ಅವರಿಗೆ ರಾಜ್ಯ ಸರ್ಕಾರ ಮುಖ್ಯಮಂತ್ರಿಯವರ ಸಚಿವಾಲಯದಲ್ಲಿ‘ಸಿ’ ದರ್ಜೆಯ ಗುತ್ತಿಗೆ ಆಧಾರಿತ ಹಿರಿಯ ಸಹಾಯಕಿಯಾಗಿ ಹುದ್ದೆ ನೀಡಿದೆ ಎಂದು ಗುರುವಾರ ಆದೇಶ ಹೊರಡಿಸಲಾಗಿದೆ.

ಸೆಪ್ಟೆಂಬರ್‌ 10 ರಂದು ದೊಡ್ಡಬಳ್ಳಾಪುರದಲ್ಲಿ ನಡೆದಿದ್ದ ಜನಸ್ಪಂದನಾ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರವೀಣ್‌ ನೆಟ್ಟಾರು ರವರ ಪತ್ನಿಗೆ ತಮ್ಮ ಸಚಿವಾಲಯದಲ್ಲಿ ನೌಕರಿ ನೀಡುವುದಾಗಿ ಘೋಷಿಸಿದ್ದರು. ಅದರಂತೆಯೇ ಇಂದು ನೂತನಕುಮಾರಿ ಅವರಿಗೆ ಉದ್ಯೋಗ ನೀಡಿ ಆದೇಶ ಹೊರಡಿಸಿದೆ.

ಗುತ್ತಿಗೆ ಆಧಾರದಲ್ಲಿ ಹಿರಿಯ ಸಹಾಯಕಿಯಾಗಿ ಉದ್ಯೋಗ ಕಲ್ಪಿಸಿಕೊಟ್ಟಿದ್ದು, ₹30,350 ಸಂಚಿತ ವೇತನವನ್ನು ನಿಗದಿಪಡಿಸಿದ್ದಾರೆ. ಎರಡು ತಿಂಗಳೊಳಗೆ ನೂತನಕುಮಾರಿ ಶೈಕ್ಷಣಿಕ ದಾಖಲೆಗಳನ್ನು ವಿಶ್ವ ವಿದ್ಯಾಲಯಗಳು ಅಥವಾ ಸಂಬಂಧಿಸಿದ ಇಲಾಖೆಯ ಮುಖಾಂತರ ಪರಿಶೀಲನೆ ನಡೆಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು