Home ರಾಜಕೀಯ ಯತ್ನಾಳ್ ವರಿಷ್ಠರ ಭೇಟಿ : ಸಧ್ಯದಲ್ಲೇ ಬಿಜೆಪಿಯಲ್ಲಿ ಬದಲಾವಣೆಯ ಮುನ್ಸೂಚನೆ ಭರವಸೆ

ಯತ್ನಾಳ್ ವರಿಷ್ಠರ ಭೇಟಿ : ಸಧ್ಯದಲ್ಲೇ ಬಿಜೆಪಿಯಲ್ಲಿ ಬದಲಾವಣೆಯ ಮುನ್ಸೂಚನೆ ಭರವಸೆ

0

ಕರ್ನಾಟಕ ಬಿಜೆಪಿ ಒಳಗಿನ ಕೆಟ್ಟ ರಾಜಕೀಯ ವ್ಯವಸ್ಥೆ ಬಗ್ಗೆ ಹೈಕಮಾಂಡ್ ನಾಯಕರಿಗೆ ಮನವರಿಕೆ ಮಾಡಿದ್ದೇನೆ ಎಂದು ಬಿಜೆಪಿ ಶಾಸಕ ಬನಸಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.

ಹಲವು ವರ್ಷಗಳಿಂದ ಬಂದ ರಾಜ್ಯ ಬಿಜೆಪಿಯಲ್ಲಿನ ಹೊಂದಾಣಿಕೆ ಮತ್ತು ಕೆಟ್ಟ ರಾಜಕೀಯ ವ್ಯವಸ್ಥೆಯ ವಾಸ್ತವ ಚಿತ್ರಣದ ಕುರಿತು ಬಿಜೆಪಿ ರಾಷ್ಟ್ರೀಯ ಘಕದ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಅರುಣ್ ಸಿಂಗ್, ರಾಧಾಮೋಹನ್ ಅಗರವಾಲ್ ಅವರನ್ನು ಭೇಟಿಯಾಗಿ ಮನವರಿಕೆ ಮಾಡಿ ಬಂದಿದ್ದೇನೆ ಎಂದು ಯತ್ನಾಳ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್ ಈ ಬಾರಿಯ ದೆಹಲಿ ನಾಯಕರ ಭೇಟಿ ಯಶಸ್ವಿಯಾಗಿದೆ. ಯಡಿಯೂರಪ್ಪ ಅವಧಿಯಲ್ಲಿ ನಡೆದ ಕೋವಿಡ್ ಹಗರಣದ ಬಗ್ಗೆ ವರಿಷ್ಠರಿಗೆ ವಿವರವಾಗಿ ತಿಳಿಸಿದ್ದೇನೆ. ನಾನು ಬಹಿರಂಗವಾಗಿ ಆರೋಪ ಮಾಡಿರುವುದಕ್ಕೆ ಯಾವುದೇ ಎಚ್ಚರಿಕೆಯನ್ನಾಗಲಿ, ಕ್ರಮಕೈಗೊಳ್ಳುವುದಾಗಿ ಹೇಳಿಲ್ಲ, ನಡ್ಡಾ ಮತ್ತು ಅಮಿತ್ ಶಾ ಅವರು ಅತ್ಯಂತ ಗೌರವಯುತವಾಗಿ ನನ್ನ ಮಾತುಗಳನ್ನು ಕೇಳಿಸಿಕೊಂಡಿದ್ದಾರೆ ಎಂದು ಹೇಳಿದರು.

ಇವೆಲ್ಲವೂ ತಾತ್ಕಾಲಿಕ.. ಮುಂದಿನ ಲೋಕಸಭೆ ಚುನಾವಣೆ ನಂತರ ರಾಜ್ಯ ಬಿಜೆಪಿ ಮೊದಲಿನಂತೆ ಇರುವುದಿಲ್ಲ. ಮುಂದಿನ ದಿನಗಳಲ್ಲಿ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ ಬರುವ ಬಗ್ಗೆ ವರಿಷ್ಠರು ತಿಳಿಸಿದ್ದಾರೆ. ಆದರೆ ವಿಜಯೇಂದ್ರ ಸಾಮಾಜಿಕ ಜಾಲತಾಣಗಳಲ್ಲಿ ಯತ್ನಾಳ್ ಗೆ ವರಿಷ್ಠರ ಶಿಸ್ತು ಕ್ರಮದ ಎಚ್ಚರಿಕೆ ಎಂದು ಸುಳ್ಳು ಮಾಹಿತಿ ಪ್ರಚಾರ ನಡೆಸಿದ್ದಾರೆ ಎಂದು ಶಾಸಕ ಯತ್ನಾಳ್ ಮತ್ತೆ ವಿಜಯೇಂದ್ರ ಮೇಲೆ ಆರೋಪಿಸಿದ್ದಾರೆ.

You cannot copy content of this page

Exit mobile version