ಆರೋಗ್ಯಕರ ಮತದಾರರ ಪಟ್ಟಿ ತಯಾರಿಸಿ – ಕೆ.ಎಸ್. ಲತಾ ಕುಮಾರಿ

ಹಾಸನ :  ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಪಾರದರ್ಶಕವಾಗಿ ಆರೋಗ್ಯಕರವಾದ ಮತದಾರರ ಪಟ್ಟಿಯನ್ನು ತಯಾರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಕೆ.ಎಸ್. ಲತಾ ಕುಮಾರಿ ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಹೊಳೆನರಸೀಪುರ ಶಿಕ್ಷಕರ ಭವನದಲ್ಲಿಂದು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಕುರಿತು ಆಯೋಜಿಸಿದ್ದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ  ಅವರು     5-8-2026 ರಂದು ಕರಡು ಮತದಾರರ ಪಟ್ಟಿ  ಪ್ರಕಟ ಮಾಡಲಾಗುವುದು. ಯಾವುದೇ ದೋಷ ಕಂಡು ಬಂದರೆ ಮತದಾರರು ದಾಖಲಾತಿಗಳೊಂದಿಗೆ  ಹಕ್ಕು,  ಆಕ್ಷೇಪಣೆಯನ್ನು ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳಿಗೆ ಸಲ್ಲಿಸುವ ಮೂಲಕ ಪರಿಹಾರ ಕಂಡುಕೊಳ್ಳಬಹುದು ಎಂದು ತಿಳಿಸಿದರು. ಮತಗಟ್ಟೆ ಅಧಿಕಾರಿಗಳು ಜೂ.೩೦ ರಿಂದ ಜುಲೈ.೨೯ ರ ವರೆಗೆ ಮನೆ ಮನೆಗೆ ಭೇಟಿ ನೀಡಿ ಪೂರ್ವದಲ್ಲಿ ಮುದ್ರಣ ಗೊಂಡಿರುವ ನಮೂನೆಯನ್ನು ದ್ವಿ ಪ್ರತಿಯಲ್ಲಿ ನೀಡುತ್ತಾರೆ ಮತದಾರರು ಅದನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಪ್ರಸ್ತುತ ಭಾವಚಿತ್ರ ಅಂಟಿಸಿ ಕಡ್ಡಾಯವಾಗಿ ಸಹಿ ಮಾಡಿ ಒಂದು ಪ್ರತಿಯನ್ನು ಮತಗಟ್ಟೆ ಅಧಿಕಾರಿಗೆ ಹಿಂದಿರುಗಿಸಬೇಕು ಎಂದರು.

ಕರಡು ಮತದಾರರ ಪಟ್ಟಿಯನ್ನು ೫-೮-೨೦೨೬ ರಂದು ಪ್ರಕಟಿಸಲಾಗುತ್ತದೆ, ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ೫-೮-೨೦೨೬ ರಿಂದ ೪-೯-೨೦೨೬ರ ವರೆಗೆ, ಹಕ್ಕು ಮತ್ತು ಆಕ್ಷೇಪಣೆಗಳ ತಿರುವಳಿ ೫-೮-೨೦೨೬ ರಿಂದ ೩-೧೦-೨೦೨೬ ರವರೆಗೆ, ಅಂತಿಮ ಮತದಾರರ ಪಟ್ಟಿಯನ್ನು ೭-೧೦-೨೦೨೬ ರಂದು ಪ್ರಕಟಣೆ ಮಾಡಲಾಗುತ್ತದೆ ಎಂದು ತಿಳಿಸಿದರು. ನಾಲ್ಕು ಬಾರಿ ಜನವರಿ, ಏಪ್ರಿಲ್, ಜುಲೈ ಮತ್ತು ಅಕ್ಟೋಬರ್ ೧ ರಂದು ಮತದಾರರ ಪಟ್ಟಿ ಪರಿ?ರಣೆ ಆಗುತ್ತದೆ ಆ ಸಂದರ್ಭದಲ್ಲಿ ೧೮ ವ? ಪೂರೈಸಿದವರು ಹೊಸ ಅರ್ಜಿ ಸಲ್ಲಿಸಬಹುದಾಗಿದೆ ಪ್ರಸ್ತುತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯಾಗಿ ಹೊಸ ಮತದಾರರ ಪಟ್ಟಿ ತಯಾರಿಸಲಾಗುತ್ತದೆ ಎಂದು ತಿಳಿಸಿದರು.

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅರ್ಹ ಮತದಾರರ ಹೆಸರು ಸೇರ್ಪಡೆ, ಮೃತರಾದವರ ಅಥವಾ ಸ್ಥಳಾಂತರಗೊಂಡವರ ಹೆಸರುಗಳ ತೆಗೆದು ಹಾಕುವಿಕೆ ಹಾಗೂ ತಿದ್ದುಪಡಿಗಳನ್ನು ನಿಖರವಾಗಿ ಕೈಗೊಳ್ಳಬೇಕು. ಯಾವುದೇ ಅರ್ಹ ಮತದಾರ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಕ್ರಮವಹಿಸುವುದು ಅಧಿಕಾರಿಗಳ ಪ್ರಮುಖ ಜವಾಬ್ದಾರಿಯಾಗಿದೆ ಎಂದು

Related Articles

ಇತ್ತೀಚಿನ ಸುದ್ದಿಗಳು