Home ದೇಶ ಕ್ರೋಯೇಷಿಯಾದಿಂದ ಭಾರತಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ

ಕ್ರೋಯೇಷಿಯಾದಿಂದ ಭಾರತಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ

0

ಕೆನಡಾ ಪ್ರವಾಸಕ್ಕೆ ತೆರಳಿದ್ದ ಭಾರತದ ಪ್ರಧಾನಿ ನರೇಂದ್ರ ಮೋದಿ ಕ್ರೊಯೇಷಿಯಾಕ್ಕೆ (Croatia) ಹೋಗಿ ಈಗ ಭಾರತಕ್ಕೆ ಮರಳಿದ್ದಾರೆ. ಭಾರತೀಯ ಪ್ರಧಾನಿಯೊಬ್ಬರು ಈ ದೇಶಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಪಾತ್ರರಾಗಿದ್ದಾರೆ.

ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಹೆಚ್ಚಿಸಲು ಕ್ರೊಯೇಷಿಯಾದ (PM Modi in Croatia) ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ.

ಕ್ರೋಯೇಷಿಯಾ ಭೇಟಿಯ ಸಂದರ್ಭದಲ್ಲಿ ಭಾರತೀಯ ಪ್ರಧಾನಿಗಾಗಿ ಸಂಸ್ಕೃತ ಶ್ಲೋಕಗಳನ್ನು ಘೋಷಿಸಿ, ಸಂಸ್ಕೃತ ಶ್ಲೋಕಗಳ ಮೂಲಕ ಸ್ವಾಗತಿಸಿದ್ದು ವಿಶೇಷವಾಗಿದೆ.

ಮೋದಿ ಅವರು ಕ್ರೋಯೇಷಿಯಾ ಪ್ರಧಾನಿ ಪ್ಲೆಂಕೋವಿಕ್ ಅವರೊಂದಿಗೆ ನಿಯೋಗ ಮಟ್ಟದ ಮಾತುಕತೆ ನಡೆಸಿದರು ಮತ್ತು ಅಧ್ಯಕ್ಷ ಜೋರಾನ್ ಮಿಲನೋವಿಕ್ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಸಂಬಂಧಗಳನ್ನು ಹೆಚ್ಚಿಸಲು ಹಲವಾರು ವಿಷಯಗಳ ಬಗ್ಗೆ ಚರ್ಚಿಸಿದರು.

ದ್ವಿಪಕ್ಷೀಯ ಸಂಬಂಧಗಳಿಗೆ “ಮೂರು ಬಾರಿ” ವೇಗವನ್ನು ನೀಡಲು ತಾನು ಮತ್ತು ಕ್ರೊಯೇಷಿಯಾದ ಸಹವರ್ತಿ ನಿರ್ಧರಿಸಿದ್ದೇವೆ ಮತ್ತು ಉಭಯ ದೇಶಗಳ ನಡುವಿನ ರಕ್ಷಣಾ ಸಹಕಾರವನ್ನು ಹೆಚ್ಚಿಸಲು ಯೋಜನೆಯನ್ನು ರೂಪಿಸಲಾಗುವುದು ಎಂದು ಮೋದಿ ಹೇಳಿದರು.

ವಿದೇಶಾಂಗ ಸಚಿವ ಎಸ್.ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಮಾತುಕತೆ ವೇಳೆ ಉಪಸ್ಥಿತರಿದ್ದರು.

You cannot copy content of this page

Exit mobile version