ಹಾಸನ: ಬಂದಂತಹ ಪ್ರವಾಸಿಗರನ್ನು ನಿಷ್ಕರುಣೆಯಿಂದ ಹತ್ಯೆ ಮಾಡಿದಂತಹ ಉಗ್ರಗಾಮಿಗಳಿದ್ದಾರೋ ಅವರನ್ನ ಸಂಪೂರ್ಣವಾಗಿ ನಾಶ ಮಾಡುವವರೆಗೂ ಪ್ರಧಾನಮಂತ್ರಿಗಳು ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕು ತೆಗೆದುಕೊಂಡಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಎಂದು ತಿಳಿಸಿದರು.
ತಾಲೂಕಿನ ದ್ಯಾಪಲಾಪುರದ ದೇವಾಲಯ ಉದ್ಘಾಟನೆಗೆ ಆಗಮಿಸಿದ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಾಶ್ಮೀರದ ವಿಚಾರದಲ್ಲಿ ಪ್ರಧಾನಮಂತ್ರಿಗಳು ಬಹಳ ಬಿಗಿಯಾದಂತಹ ಕ್ರಮ ತೆಗೆದುಕೊಂಡಿದ್ದು, ಈ ವಿಷಯದಲ್ಲಿ ರಾಷ್ಟçದ ಎಲ್ಲಾ ರಾಜಕೀಯ ಪಕ್ಷಗಳು ಐಕ್ಯತೆಯನ್ನು ತೋರಿಸಿದ್ದಾರೆ. ಈ ದೇಶದ 150 ಕೋಟಿ ಜನ, ಏಕಮುಖವಾಗಿ ಪ್ರಧಾನಮಂತ್ರಿಗಳ ತೀರ್ಮಾನಕ್ಕೆ ಬದ್ದರಾಗಿದ್ದರೇ ಆಗ ಇಂತಹ ದುರ್ಘಟನೆ ನಡೆಯುವುದಿಲ್ಲ. 28 ಪ್ರವಾಸಿಗರನ್ನು ಹತ್ಯೆ ಮಾಡಿದ್ದಾರೆ, ಇಬ್ಬರು ವಿದೇಶಿಗರು, ನಮ್ಮ ದೇಶದವರು 26 ಜನ. ನಿಷ್ಕರುಣೆಯಿಂದ ಅವರನ್ನು ಹತ್ಯೆ ಮಾಡಿದಂತಹ ಉಗ್ರಗಾಮಿಗಳಿದ್ದಾರೋ ಅವರನ್ನ ಸಂಪೂರ್ಣವಾಗಿ ನಾಶ ಮಾಡುವವರೆಗೂ ಪ್ರಧಾನಮಂತ್ರಿಗಳು ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕು ತೆಗೆದುಕೊಂಡಿದ್ದಾರೆ . ಈ ವಿಷಯದಲ್ಲಿ ನನ್ನ ಅನುಭವದಿಂದ ಅಭಿಪ್ರಾಯವನ್ನು ತಿಳಿಸಿದ್ದೇನೆ. ಇದು ಸೂಕ್ಷ÷್ಮವಾದ ವಿಚಾರ. ಈ ವಿಷಯದಲ್ಲಿ ಏನು ಕ್ರಮ ತೆಗೆದುಕೊಳ್ಳುತ್ತಾರೋ ನನ್ನದು, ನನ್ನ ಪಕ್ಷದ್ದು ಕೇಂದ್ರ ಮಂತ್ರಿಯಾಗಿರೋ ಕುಮಾರಸ್ವಾಮಿಯವರ ಪೂರ್ಣ ಬೆಂಬಲ ಇದೆ ಎಂದು ಈಗಾಗಲೇ ಹೇಳಿದ್ದೇನೆ. ಮುಂದೆ ಕೂಡ ಏನು ಕ್ರಮ ತೆಗೆದುಕೊಳ್ಳುತ್ತಾರೋ ಆ ಕ್ರಮಕ್ಕೆ ಇಡೀ ದೇಶ ಪಕ್ಷಭೇದ ಇಲ್ಲದೇ ಎಲ್ಲರೂ ಒಗ್ಗಟ್ಟಾಗಿ ಬೆಂಬಲ ನೀಡಬೇಕು. ಮುಂದೆ ಇಂತಹ ದುಷ್ಕçತ್ಯ ನಡೆಯಬಾರದು. ಅವರಿಗೆ ಪಾಠ ಕಲಿಸಬೇಕು ಎಂದು ಪ್ರಧಾನಮಂತ್ರಿಗಳು ಪ್ರತಿಜ್ಞೆ ಮಾಡಿದ್ದಾರೆ ಅವರ ಹಿಂದೆ ನಾವು ನಿಲ್ಲುತ್ತೇವೆ. ಮೊದಲು ಕಾಂಗ್ರೆಸ್ ನಾಯಕರು ಸಹಮತವನ್ನು ವ್ಯಕ್ತಪಡಿಸಿದ್ದರು. ಮಧ್ಯೆ ಸ್ವಲ್ಪ ಒಡಕು ಶಬ್ದ ಬಂದಮೇಲೆ ಪುನಃ ಅವರು ಈ ವಿಷಯದಲ್ಲಿ ಐಕ್ಯತೆ ಬಗ್ಗೆ ಪುನಃ ಪ್ರತಿಪಾದನೆ ಮಾಡಿದ್ದಾರೆ ಎಂದು ಬೇಸರವ್ಯಕ್ತಪಡಿಸಿದರು.