Home ಅಪಘಾತ ಹೊತ್ತಿ ಉರಿದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್; 10 ಮಂದಿ ಸಜೀವ ದಹನ

ಹೊತ್ತಿ ಉರಿದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್; 10 ಮಂದಿ ಸಜೀವ ದಹನ

0

ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಉಲ್ಲಿಂದಕೊಂಡ ಕ್ರಾಸ್ ನಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಬೆಂಕಿಯಿಂದ ಹೊತ್ತಿ ಉರಿದ ಘಟನೆ ನಡೆದಿದೆ. ಘಟನೆಯಲ್ಲಿ 10 ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಪ್ರಯಾಣಿಕರು ಬೆಂಕಿಯಲ್ಲಿ ಸಿಲುಕಿಕೊಂಡಿದ್ದಾರೆ. ಅಪಘಾತದ ಸಮಯದಲ್ಲಿ ಬಸ್ ನಲ್ಲಿ 40 ಪ್ರಯಾಣಿಕರು ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಬೆಳಗಿನ ಜಾವ 3:30 ಕ್ಕೆ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಹಲವಾರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ಕರ್ನೂಲ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದಾಗ್ಯೂ, ಬಸ್ ಚಾಲಕ ಮತ್ತು ಸಹಾಯಕ ಇಬ್ಬರೂ ಅಪಘಾತದಿಂದ ಪಾರಾಗಿದ್ದಾರೆ.

ಕರ್ನೂಲ್ ಜಿಲ್ಲೆಯ ಉಲ್ಲಿಂದಕೊಂಡ ಕ್ರಾಸ್ ನಲ್ಲಿ ಬೈಕ್ ಸವಾರನೊಬ್ಬನ ಅತಿ ವೇಗದ ಪರಿಣಾಮ ಬಸ್ಸಿಗೆ ಏಕಾಏಕಿ ಗುದ್ದಿದ್ದಾನೆ. ಆ ನಂತರ ಡೀಸೆಲ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದಾಗ ಬಸ್ಸಿನ ಮುಂಭಾಗ ಬೆಂಕಿಗೆ ಆಹುತಿಯಾಗಿದೆ. ನೋಡು ನೋಡುತ್ತಿದ್ದಂತೆಯೇ ಬಸ್ ಬೆಂಕಿಗಾಹುತಿ ಆಗಿದೆ.

ಅಗ್ನಿಶಾಮಕ ದಳ ಸ್ಥಳಕ್ಕೆ ತಲುಪುವ ಹೊತ್ತಿಗೆ.. ಬಸ್ ಸಂಪೂರ್ಣವಾಗಿ ಸುಟ್ಟು ಹೋಗಿತ್ತು. ಬಸ್ ಚಾಲಕ ಮತ್ತು ಸಹಾಯಕ ಸೇರಿದಂತೆ ಕೆಲವೇ ಜನ ಬದುಕುಳಿದಿದ್ದಾರೆ ಎಂದು ತಿಳಿದುಬಂದಿದೆ.

You cannot copy content of this page

Exit mobile version