ಬೆಂಗಳೂರು: ಬೆಲೆ (Price) ಏರಿಕೆಯಿಂದ ಈಗಾಗಲೇ ಕಂಗೆಟ್ಟಿರುವ ಜನಸಾಮಾನ್ಯರಿಗೆ ಇದೀಗ ಮತ್ತೊಂದು ಬರೆ ಬೀಳಲಿದ್ದು, ಶೈಕ್ಷಣಿಕ ಶುಲ್ಕವನ್ನು (Education Fees) ಗಣನೀಯವಾಗಿ ಹೆಚ್ಚಳ ಮಾಡಲು ಖಾಸಗಿ ಶಾಲೆಗಳು (Private Bus) ಮುಂದಾಗಿವೆ.
ಕ್ಯಾಮ್ಸೌ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಅವರು ಶುಲ್ಕ ಹೆಚ್ಚಳದ ಮುನ್ಸೂಚನೆಯನ್ನು ನೀಡಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಿಂದ ಶುಲ್ಕ ಹೆಚ್ಚಳ ಜಾರಿಗೆ ಬರಲಿದೆ ಎಂದು ಸ್ಪಷ್ಟ ಪಡಿಸಿದ್ದಾರೆ.
ಪ್ರತಿ ವರ್ಷ ಶೇ. 8 ರಿಂದ 10ರಷ್ಟು ಶುಲ್ಕ ಹೆಚ್ಚಳ ಮಾಡಲಾಗುತ್ತಿತ್ತು. 2026-27ನೇ ಸಾಲಿಗೆ ಶೇ. 15 ರಷ್ಟು ಶುಲ್ಕ ಹೆಚ್ಚಳ ಮಾಡುತ್ತಿರುವುದಾಗಿ ತಿಳಿಸಲಾಗಿದೆ. ಕೆಲವು ಶಾಲೆಗಳು ತಮ್ಮ ಅನುಕೂಲಕ್ಕೆ ತಕ್ಕ ಹಾಗೆ ಶುಲ್ಕ ಏರಿಕೆ ಮಾಡಲಿವೆ. ಕನಿಷ್ಠ ಶೇ.8 ರಿಂದ ಗರಿಷ್ಠ 15ರ ವರೆಗೂ ಶುಲ್ಕ ಹೆಚ್ಚಳವಾಗಲಿದೆ ಎಂದು ತಿಳಿಸಿದ್ದಾರೆ.
ಸರ್ಕಾರವು ಮನಸ್ಸೋ ಇಚ್ಚೇ ಖಾಸಗಿ ಶಾಲೆಗಳಿಗೆ ಅನುಮತಿ ನೀಡುತ್ತಿದೆ. ಇದರಿಂದ ಶಾಲೆಗಳಿಗೆ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. 30 ರಿಂದ 40 ಲಕ್ಷ ರೂ.ಗಳಷ್ಟು ಮೂಲ ಸೌಕರ್ಯ ಬಳಕೆಯಾಗದೆ ನಿರ್ವಹಣಾ ವೆಚ್ಚ ದುಬಾರಿಯಾಗುತ್ತಿದೆ. ಶಿಕ್ಷಕರ ವೇತನವೂ ಹೆಚ್ಚಾಗುತ್ತಿದೆ. ಹೀಗಾಗಿ ಶುಲ್ಕ ಏರಿಕೆ ಅನಿವಾರ್ಯ ಎಂದು ಸಮರ್ಥಿಸಿಕೊಂಡಿದ್ದಾರೆ ಕರ್ನಾಟಕದಲ್ಲಲಷ್ಟೇ ಅಲ್ಲ, ದೇಶಾದ್ಯಂತ ಖಾಸಗಿ ಶಾಲೆಗಳಿಗೆ ಅನುಮತಿ ನೀಡುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ. ರಾಜ್ಯದಲ್ಲಿಯೇ 700 ರಿಂದ 800 ಖಾಸಗಿ ಶಾಲೆಗಳಿಗೆ ವರ್ಷ ಒಂದರಲ್ಲೇ ಅನುಮತಿ ನೀಡಲಾಗುತ್ತಿದೆ. ಇದರ ಮಧ್ಯೆ ಬಹು ರಾಷ್ಟ್ರೀಯ ಕಂಪನಿಗಳು, ದೊಡ್ಡ ದೊಡ್ಡ ಸಂಸ್ಥೆಗಳು ಶೈಕ್ಷಣಿ ಕ್ಷೇತ್ರಕ್ಕೆ ಕಾಲಿಟ್ಟಿದೆ. ಕೋಟ್ಯಂತರ ರೂ. ಬಂಡವಾಳ ಹೂಡಿಕೆ ಮಾಡಿ ಶಾಲೆ ಆರಂಭಿಸುತ್ತಿವೆ. ಅದಕ್ಕನುಗುಣವಾಗಿಯೇ ಶುಲ್ಕವೂ ಹೆಚ್ಚಳವಾಗುತ್ತಿದೆ ಎಂದು ಹೇಳಿದರು.
ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಎಲ್ಲವೂ ವಾಣಿಜ್ಯೀಕರಣವಾಗಿದೆ. ಯಾವುದು ಸೇವೆಯಾಗಿ ಉಳಿದಿಲ್ಲ. ಪ್ರಸಕ್ತ ಸನ್ನಿವೇಶದಲ್ಲಿ ಖಾಸಗಿ ಶಾಲೆಗಳನ್ನು ನಡೆಸುವುದು ನಷ್ಟದ ಕೆಲಸ. ಇದರ ಜೊತೆಗೆ ಅನಧಿಕೃತ ಶಾಲೆಗಳ ಹಾವಳಿಯೂ ಇದೆ ಎಂದು ಹೇಳಿದರು.
SSLC ವಿದ್ಯಾರ್ಥಿಗಳ ಪ್ರವೇಶಪತ್ರ ಡೌನ್‌ಲೋಡ್‌ಗೆ ಸೂಚನೆ: 2025-26ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ಕ್ಕೆ ಹಾಜರಾಗುವ ವಿದ್ಯಾರ್ಥಿಗಳ ಅಂತಿಮ ಪ್ರವೇಶಪತ್ರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತನ್ನ ಅಧಿಕೃತ ವೆಬ್‌ಸೈಟ್‌ನ ಶಾಲಾ ಲಾಗಿನ್‌ನಲ್ಲಿ ಅಪ್‌ಲೋಡ್ ಮಾಡಿದೆ.
ಮಾ.18ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿದ್ದು, ಎಲ್ಲಾ ಶಾಲೆಗಳ ಮುಖ್ಯೋಪಾಧ್ಯಾಯರು ತಕ್ಷಣವೇ ಶಾಲಾ ಲಾಗಿನ್ ಮೂಲಕ ವಿದ್ಯಾರ್ಥಿಗಳ ಪ್ರವೇಶಪತ್ರಗಳನ್ನು ಡೌನ್‌ಲೋಡ್ ಮಾಡಿಕೊಂಡು ಪರಿಶೀಲಿಸಿ ಸಕಾಲದಲ್ಲಿ ವಿತರಿಸಬೇಕು ಎಂದು ಮಂಡಳಿ ಸೂಚಿಸಿದೆ.
ಪರೀಕ್ಷೆಗೆ ನೋಂದಾಯಿಸಿದ ವಿದ್ಯಾರ್ಥಿಗಳ ಸಂಖ್ಯೆ ಮತ್ತು ಡೌನ್‌ಲೋಡ್ ಮಾಡಲಾದ ಪ್ರವೇಶಪತ್ರಗಳ ಸಂಖ್ಯೆ ಹೊಂದಿಕೆಯಾಗಿರುವುದನ್ನು ಶಾಲೆಗಳು ಖಚಿತಪಡಿಸಿಕೊಳ್ಳಬೇಕು. ಯಾವುದೇ ವ್ಯತ್ಯಾಸ ಕಂಡುಬಂದರೆ ಅಥವಾ ಪ್ರವೇಶಪತ್ರ ಲಭ್ಯವಾಗದಿದ್ದರೆ, ಸಂಬಂಧಿತ ವಿದ್ಯಾರ್ಥಿಗಳ ವಿವರಗಳನ್ನು ಸಮರ್ಥನೆ ದಾಖಲೆಗಳೊಂದಿಗೆ ಪರಿಶೀಲನಾ ಶಾಖೆಯ ಅಧಿಕಾರಿಗಳನ್ನು ಸಂಪರ್ಕಿಸಲು ಮಂಡಳಿ ಸೂಚಿಸಿದೆ.
