Thursday, June 20, 2024

ಸತ್ಯ | ನ್ಯಾಯ |ಧರ್ಮ

ಸುಟ್ಟು ಕರಕಲಾಗಿರುವುದು ನಿಮ್ಮ ಬುದ್ಧಿ, ಕಲ್ಯಾಣ ಕರ್ನಾಟಕದ ಜನರಲ್ಲ: ಆರಗ ವಿರುದ್ಧ ಪ್ರಿಯಾಂಕ್‌ ಖರ್ಗೆ ಕಿಡಿ

ಬೆಂಗಳೂರು: ಆರಗ ಜ್ಞಾನೇಂದ್ರ ಅವರು ನೀಡಿದ ಹೇಳಿಕೆಯು ಕಿಡಿಗಳನ್ನು ಹೊತ್ತಿಸುತ್ತಲೇ ಇದ್ದು, ಇದೀಗ ಈ ಹೇಳಿಕೆಗೆ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಸೋಷಿಯಲ್‌ ಮೀಡಿಯಾ ಪೋಸ್ಟ್‌ ಹಂಚಿಕೊಂಡಿರುವ ಅವರು ಆರಗ ಜ್ಞಾನೇಂದ್ರ ಅವರನ್ನು ಟ್ಯಾಗ್‌ ಮಾಡಿ “Araga Jnanendra ಅವರೇ,

ನೀವು ಆಡಿರುವ ಮಾತು ಬರೀ ನಿಮ್ಮ ಮಾತುಗಳಲ್ಲ, ಕೇಶವ ಕೃಪಾದ ಪ್ರಭಾವದ ಮಾತು, ಬಿಜೆಪಿಯ ಆಂತರ್ಯದೊಳಗೆ ಅಡಗಿದ್ದ ಶೋಷಿತರ ಬಗೆಗಿನ ಅಸಹನೆಯ ಮಾತು.

ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ದಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ.

ಶತಶತಮಾನಗಳಿಂದ ವರ್ಣಾಶ್ರಮದ ಹೆಸರಲ್ಲಿ ಶೋಷಣೆ ನಡೆಸಿ ಶ್ರಮಜೀವಿಗಳ ಬೆವರಿನಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು, ಸ್ವಾಭಿಮಾನದಿಂದ ದುಡಿದು ತಿನ್ನುವವರ ಮೈ ಬಿಸಿಲಲ್ಲಿ ಸುಟ್ಟಿರುತ್ತದೆ.

ಆರಗ ಜ್ಞಾನೇಂದ್ರ ಅವರು ಒಂದೇ ಒಂದು ದಿನ ಮಣ್ಣು ಹೊತ್ತರೆ ಅವರ ಮೈಬಣ್ಣವೂ ಕಪ್ಪಗಾಗುತ್ತದೆ.

ಮನುಸ್ಮೃತಿಯ ವರ್ಣಾಶ್ರಮವನ್ನು ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿಗೆ ದಲಿತರ ರಾಜಕೀಯ ಏಳಿಗೆಯ ಬಗ್ಗೆ ತೀವ್ರ ಅಸಹನೆ ಇರುವುದು ಇಂತಹ ಮಾತುಗಳಿಂದ ಹೊರಬರುತ್ತವೆ.

BJP Karnataka ಯ ಈ ಅಸಹನೆ ಬಿಜೆಪಿಯನ್ನೇ ಸುಟ್ಟು ಕರಕಲು ಮಾಡುತ್ತದೆ, ಏಕೆಂದರೆ ಇದು ಮನುಸ್ಮೃತಿಯ ಕಾಲವಲ್ಲ, ಬಾಬಾ ಸಾಹೇಬರ ಸಂವಿಧಾನದ ಕಾಲ” ಎಂದು ತೀಕ್ಷಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಭಾಷಣ ಮಾಡುವ ಭರದಲ್ಲಿ ಆರಗ ಖರ್ಗೆಯವರನ್ನು ಉದಾಹರಣೆಯಾಗಿ ನೀಡುತ್ತಾ ಇಡೀ ಕಲ್ಯಾಣ ಕರ್ನಾಟಕದ ಜನರನ್ನು ಸುಟ್ಟು ಕರಕಲಾಗಿರುತ್ತಾರೆ ಎಂದು ಹೇಳಿದ್ದರು. ಬೇರೆ ದೇಶಗಳಲ್ಲಿ ಇಂತಹ ರೇಸಿಸ್ಟ್‌ ಹೇಳಿಕೆ ನೀಡಿದ್ದರೆ ಆ ವ್ಯಕ್ತಿ ಇಷ್ಟು ಹೊತ್ತಿಗೆ ಜೈಲಿನಲ್ಲಿರುತ್ತಿದ್ದ. ಆದರೆ ಇಲ್ಲಿ ಒಂದು ಕೇಸ್‌ ಕೂಡಾ ಈ ಕುರಿತು ಬುಕ್‌ ಆಗದಿರುವುದು ದುರದಷ್ಟಕರ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.

https://m.facebook.com/story.php?story_fbid=pfbid0KyAGSVXfGYmenBrHHEvTQSBsFk44YXYL6zXU81TVfY4KYHvWbY8wuHmQ9TbPMqedl&id=100044474557773&mibextid=Nif5oz

ಈ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್‌ ಕೂಡಾ ನಿನ್ನೆ ಸರಣಿ ಟ್ವೀಟ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿತ್ತು: https://peepalmedia.com/congress-has-demanded-an-apology-from-kharge-and-dalits/

ಬಿಜೆಪಿ ಪಕ್ಷದ ಮನಸ್ಥಿತಿಯನ್ನು ಎತ್ತಿ ತೋರಿಸುವ ಇಂತಹ ಹೇಳಿಕೆಗಳು ಬರುತ್ತಿರುವುದು ಇದೇ ಮೊದಲೇನಲ್ಲ. ಇದಕ್ಕೆ ಕೊನೆ ಹಾಡಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು, ದ್ವೇಷಪೂರಿತ ಹೇಳಿಕೆಗಳಿಗೆ ಕಡಿವಾಣ ಹಾಕಲು ಕಠಿಣ ಕಾನೂನು ತಂದು ಅದರಡಿ ಇಂತಹ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ಕುರಿತು ಒಂದು ಖಂಡನೆಯನ್ನೂ ವ್ಯಕ್ತಪಡಿಸಿದ ಬಿಜೆಪಿ ರಾಜ್ಯದ ಜನರಿಗೆ ಯಾವ ಸಂದೇಶ ನೀಡುತ್ತಿದೆಯೆನ್ನುವುದು ಕೂಡಾ ಈ ಸಂದರ್ಭದಲ್ಲಿ ಯೋಚನಾರ್ಹ.

Related Articles

ಇತ್ತೀಚಿನ ಸುದ್ದಿಗಳು