Home ದೇಶ ಲೋಕಸಭೆ ಉಪ ಚುನಾವಣೆ: ವಯನಾಡ್‌ ಅಭ್ಯರ್ಥಿಯಾಗಿ ಪ್ರಿಯಾಂಕ ಗಾಂಧಿ ಆಯ್ಕೆ

ಲೋಕಸಭೆ ಉಪ ಚುನಾವಣೆ: ವಯನಾಡ್‌ ಅಭ್ಯರ್ಥಿಯಾಗಿ ಪ್ರಿಯಾಂಕ ಗಾಂಧಿ ಆಯ್ಕೆ

0

ದೆಹಲಿ: ಕೇರಳದ ಒಂದು ಲೋಕಸಭೆ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಯನಾಡ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ ಎಂದು ಪಕ್ಷ ಅಧಿಕೃತವಾಗಿ ಘೋಷಿಸಿದೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಾಲಕ್ಕಾಡ್ ಮತ್ತು ಚೇಲಕ್ಕರ (ಎಸ್‌ಸಿ) ವಿಧಾನಸಭಾ ಸ್ಥಾನಗಳಿಗೆ ರಾಹುಲ್ ಮಮಕೂಟತಿಲ್ ಮತ್ತು ರಮ್ಯಾ ಹರಿದಾಸ್ ಅವರ ಹೆಸರನ್ನು ಅಭ್ಯರ್ಥಿಗಳಾಗಿ ಆಯ್ಕೆ ಮಾಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಕಾಂಗ್ರೆಸ್ ನ ಇತ್ತೀಚಿನ ನಿರ್ಧಾರದಿಂದ ಪ್ರಿಯಾಂಕಾ ಗಾಂಧಿ ಇದೇ ಮೊದಲ ಬಾರಿಗೆ ನೇರ ಚುನಾವಣಾ ಕಣಕ್ಕೆ ಇಳಿದಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಎರಡು ಸ್ಥಾನಗಳಿಂದ ಗೆದ್ದಿದ್ದ ರಾಹುಲ್, ಈ ಹಿಂದೆ ಉತ್ತರ ಪ್ರದೇಶದ ನಿರ್ಣಾಯಕ ಕ್ಷೇತ್ರವಾದ ಬರೇಲಿಯಲ್ಲಿ ಮುಂದುವರಿಯಲು ನಿರ್ಧರಿಸಿದ್ದರು.

ವಯನಾಡ್‌ನಿಂದ ಪ್ರಿಯಾಂಕಾ ಆಯ್ಕೆಯಾದರೆ ಮೊದಲ ಬಾರಿಗೆ ಸಂಸತ್‌ ಪ್ರವೇಶಿಸಲಿದ್ದಾರೆ. ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ಜೊತೆಗೆ 15 ರಾಜ್ಯಗಳ ಎರಡು ಲೋಕಸಭೆ ಮತ್ತು 48 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಮಂಗಳವಾರ ಪ್ರಕಟಿಸಿದೆ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ವಯನಾಡ್ ಲೋಕಸಭಾ ಕ್ಷೇತ್ರ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆಯಲಿದೆ.

You cannot copy content of this page

Exit mobile version